ಬುಮ್ರಾ ಅವರ ಗುಣಗಾನ ಮಾಡಿದ ಆಸ್ಟ್ರೇಲಿಯಾದ ಆಲ್‌ರೌಂಡರ್
ಟೀಮ್ ಇಂಡಿಯಾ ಸದ್ಯ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ವೇಳೆ ಟೀಮ್ ಇಂಡಿಯಾ ಮೂರನೇ ಟೆಸ್ಟ್‌ಗೆ ಸಿದ್ಧತೆ ನಡೆಸಿದೆ. ಈ ಟೆಸ್ಟ್ ಸರಣಿ ಮುಗಿದ ಬಳಿಕ ರೋಹಿತ್ ಪಡೆ ಆಸ್ಟ್ರೇಲಿಯಾ ಫ್ಲೈಟ್ ಹತ್ತಲಿದೆ. ಕಾಂಗರೂ ನಾಡಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಐದು ಪಂದ್ಯಗಳು ನಡೆಯಲಿವೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ದೃಷ್ಟಿಯಿಂದ ಈ ಸರಣಿ ಮಹತ್ವದಾಗಿದೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಗೆಲುವು ಸಾಧಿಸಬೇಕಾದರೆ, ಈ ಸರಣಿಯಲ್ಲಿ ಬುಮ್ರಾ ಸ್ಥಿರ ಪ್ರದರ್ಶನ ನೀಡಬೇಕಿದೆ. ಟೀಮ್ ಇಂಡಿಯಾದ ವೇಗಿ ಬುಮ್ರಾ ಅವರನ್ನು ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಹಾಡಿ ಹೊಗಳಿದ್ದಾರೆ.

ಬುಮ್ರಾರನ್ನು ಹೊಗಳಿದ ಆಟಗಾರ ಯಾರು?
ಟೀಮ್ ಇಂಡಿಯಾದ ಸ್ಟಾರ್ ವೇಗಿ ಬುಮ್ರಾ ಮೂರು ಫಾರ್ಮೆಟ್‌ಗಳಲ್ಲಿ ಅಬ್ಬರಿಸಬಲ್ಲ ಬೌಲರ್ ಎಂದು ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಹೇಳಿದ್ದಾರೆ. ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ ಒನ್ ಬೌಲರ್ ಆಗಿದ್ದಾರೆ. ಬುಮ್ರಾ ಆರಂಭದಲ್ಲಿ ಅವರ ಅನ್ ಅರ್ಥಡಾಕ್ಸ್ ಬೌಲಿಂಗ್ ಆಕ್ಷನ್ ನಿಂದ ಗಮನ ಸೆಳೆದರು.
ಈಗ ಅವರ ಬೌಲಿಂಗ್ ಆಕ್ಷನ್ ಹಾಗೂ ಲೈನ್, ಲೆಂಥ್ ನಿಂದ ಅಬ್ಬರಿಸಿದ್ದಾರೆ. ಇವರು ವಿಶ್ವದ ಸ್ಟಾರ್ ಬ್ಯಾಟರ್‌ಗಳನ್ನು ಕಾಡಬಲ್ಲರು. ಇವರು ಬ್ಯಾಟಿಂಗ್ ಫ್ರೆಂಡ್ಲಿ ಪಿಚ್‌ನಲ್ಲೂ ವಿಕೆಟ್ ಬೇಟೆ ನಡೆಸಬಲ್ಲರು. ಬುಮ್ರಾ ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಆಡಿದ ಅತ್ಯುತ್ತಮ ಬೌಲರ್. ಬುಮ್ರಾ ಎಲ್ಲಾ ಮೂರು ಸ್ವರೂಪಗಳಲ್ಲಿ ಅತ್ಯುತ್ತಮ ಬೌಲರ್ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಮ್ಯಾಕ್ಸ್‌ವೆಲ್ ಹೇಳಿದ್ದಾರೆ.

ಆಸ್ಟ್ರೇಲಿಯಾದ ಆಲ್‌ರೌಂಡರ್ ಹೇಳಿದ್ದೇನು?
ಇಎಸ್‌ಪಿಎನ್‌ಕ್ರಿಕ್‌ಇನ್‌ಫೋಗೆ ನೀಡಿದ ಸಂದರ್ಶನದಲ್ಲಿ, ನಾನು ಎದುರಿಸಿದ ಅತ್ಯುತ್ತಮ ಬೌಲರ್ ಬಹುಶಃ ಬುಮ್ರಾ ಎಂದು ಹೇಳಿದ್ದಾರೆ. ಬುಮ್ರಾ ಕ್ರಿಕೆಟ್‌ನ ಮೂರು ಫಾರ್ಮೆಟ್‌ಗಳಲ್ಲಿ ಆರ್ಭಟಿಸಬಲ್ಲ ಪೇಸರ್. ಇವರ ಬಳಿ ಸ್ಲೋ ಬೌಲ್, ಅದ್ಭುತ ಯಾರ್ಕರ್, ಎರಡೂ ರೀತಿಯಲ್ಲಿ ಸ್ವಿಂಗ್ ಮಾಡುವ ಸಾಮರ್ಥ್ ಇದ್ದು, ಹೀಗಾಗಿ ಇವರನ್ನು ವಿಶ್ವದ ನಂಬರ್ 1 ಬೌಲರ್ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಮ್ಯಾಕ್ಸ್‌ವೆಲ್ ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಹೇಗಿದೆ ಬುಮ್ರಾ ಪ್ರದರ್ಶನ?
ಭಾರತದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಆಸ್ಟ್ರೇಲಿಯಾ ತಂಡವನ್ನು ಕಾಡಿದ್ದಾರೆ. ಇವರು ಆಸ್ಟ್ರೇಲಿಯಾ ವಿರುದ್ಧ ಏಳು ಪಂದ್ಯಗಳಲ್ಲಿ 32 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಒಂದು ಬಾರಿ ಐದು ವಿಕೆಟ್ ಸಾಧನೆ ಸಹ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications