Border-Gavaskar Trophy 2024: ಅತಿ ಹೆಚ್ಚು ರನ್ ಹೊಡೆಯುವ ಬ್ಯಾಟರ್ ಹೆಸರಿಸಿದ ಮ್ಯಾಕ್ಸ್‌ವೆಲ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಎರಡು ತಿಂಗಳು ಬಾಕಿ ಇರುವಂತೆ ಭಾರೀ ಚರ್ಚೆಗಳು ನಡೆಯುತ್ತಿವೆ. ಕಳೆದ 10 ವರ್ಷಗಳಿಂದ ಟೀಮ್ ಇಂಡಿಯಾ ಎದುರು ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ.
ಈ ವರ್ಷ ನವೆಂಬರ್‌ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ಸಮಯದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಆಡಲಿದೆ. ಇದಕ್ಕೂ ಮೊದಲು ಈ ಟೆಸ್ಟ್ ಸರಣಿಯಲ್ಲಿ ಯಾರು ಅದ್ಭುತ ಪ್ರದರ್ಶನ ನೀಡುತ್ತಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಇದರ ಮಧ್ಯೆ ಟೀಮ್ ಇಂಡಿಯಾವನ್ನು ತವರಿನಲ್ಲಿ ಕಟ್ಟಿ ಹಾಕಲು ಕಾಂಗೂರು ಪಡೆ ರಣತಂತ್ರ ರೂಪಿಸುತ್ತಿದೆ.

ಗ್ಲೆನ್ ಮ್ಯಾಕ್ಸ್‌ವೆಲ್ ಹೇಳಿದ್ದೇನು?
ಆಸ್ಟ್ರೇಲಿಯಾದ ಅಪಾಯಕಾರಿ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಈ ಸರಣಿಯಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಸ್ಟೀವ್ ಸ್ಮಿತ್ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ವಿಶೇಷ ಚಾಟ್‌ನಲ್ಲಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
"ಸರಣಿಯಲ್ಲಿ ವಿರಾಟ್ ಕೊಹ್ಲಿ - ಸ್ಟೀವ್ ಸ್ಮಿತ್ ಮುಖಾಮುಖಿಯಾಗಲು ಕಾಯುತ್ತಿದ್ದೇನೆ. ಸರಣಿಯಲ್ಲಿ ಅವರು ಎಷ್ಟು ಪ್ರಬಲರಾಗಿದ್ದಾರೆ ಎಂಬುದರ ಆಧಾರದ ಮೇಲೆ ಅವರ ತಂಡವು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಮನೆಗೆ ತೆಗೆದುಕೊಂಡು ಹೋಗುವುದರ ಮೇಲೆ ಪ್ರಾಬಲ್ಯ ಸಾಧಿಸಲಿದೆ ಎಂದು ನಾನು ಭಾವಿಸುತ್ತೇನೆ. ಅವರಿಬ್ಬರಿಗೆ ಇಲ್ಲದಿದ್ದರೆ ಯಾರಾದರೂ ಬೃಹತ್ ರನ್ ಗಳಿಸಲಿದ್ದಾರೆ. ಅವರಿಬ್ಬರೂ ನಮ್ಮ ಪೀಳಿಗೆಯ ಶ್ರೇಷ್ಠ ಬ್ಯಾಟರ್‌ಗಳಾಗಿದ್ದು, ಅವರು ಮುಖಾಮುಖಿಯಾಗಿ ಆಡುವುದನ್ನು ನೋಡಲು ತುಂಬಾ ರೋಮಾಂಚನಕಾರಿಯಾಗಿರುತ್ತದೆ" ಎಂದು ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಪ್ರದರ್ಶನ
ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಅದ್ಭುತವಾಗಿದೆ. ಇದುವರೆಗೆ ಆಡಿರುವ 25 ಟೆಸ್ಟ್ ಪಂದ್ಯಗಳಲ್ಲಿ 8 ಶತಕಗಳೊಂದಿಗೆ 47.48 ಸರಾಸರಿಯಲ್ಲಿ 2042 ರನ್ ಗಳಿಸಿದ್ದಾರೆ. ಮತ್ತೊಂದೆಡೆ, ಸ್ಟೀವ್ ಸ್ಮಿತ್ ಭಾರತದ ವಿರುದ್ಧ 19 ಪಂದ್ಯಗಳಲ್ಲಿ 8 ಶತಕಗಳೊಂದಿಗೆ 65.87 ಸರಾಸರಿಯಲ್ಲಿ 2042 ರನ್ ಕಲೆ ಹಾಕಿದ್ದಾರೆ.
ನೂತನ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ನೇತೃತ್ವದ ತಂಡವು ನವೆಂಬರ್ 22 ರಂದು ಪರ್ತ್‌ನಲ್ಲಿ ನಡೆಯಲಿರುವ ಟೆಸ್ಟ್‌ನೊಂದಿಗೆ ತನ್ನ ಪ್ರವಾಸವನ್ನು ಪ್ರಾರಂಭಿಸಲಿದೆ. ಉಳಿದ ನಾಲ್ಕು ಟೆಸ್ಟ್ ಪಂದ್ಯಗಳು ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications