ಎಂಎಸ್ ಧೋನಿ ನೆನಪಿಸಿದ ಆಸೀಸ್‌ನ ಗ್ಲೆನ್ ಮ್ಯಾಕ್ಸ್‌ವೆಲ್: ವೈರಲ್ ವಿಡಿಯೋ

ಅಡಿಲೇಡ್, ಅಕ್ಟೋಬರ್ 29: ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಹೆಲಿಕಾಪ್ಟರ್ ಶಾಟ್ ಮೂಲಕ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನೆನಪಿಸಿದ್ದಾರೆ. ಭಾನುವಾರ (ಅಕ್ಟೋಬರ್ 27) ನಡೆದ ಶ್ರೀಲಂಕಾ vs ಆಸ್ಟ್ರೇಲಿಯಾ ನಡುವಿನ ಮೊದಲನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಅಬ್ಬರದ ಬ್ಯಾಟಿಂಗ್‌ಗಾಗಿ ಗಮನ ಸೆಳೆದರು.

ಬ್ಯಾನ್ ಭೀತಿಯಲ್ಲಿ ಶಕೀಬ್ ಅಲ್ ಹಸನ್, ಭಾರತ ಪ್ರವಾಸ ಅನುಮಾನ!

ಅಡಿಲೇಡ್ ಓವಲ್‌ನಲ್ಲಿ ನಡೆದ ಇತ್ತಂಡಗಳ ನಡುವಿನ ಮೊದಲನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಇನ್ನಿಂಗ್ಸ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಬೆನ್ನು ಬೆನ್ನಿಗೆ ಸಿಕ್ಸ್ ಬಾರಿಸಿದರು. ಅದರಲ್ಲೂ ಧೋನಿಯ ಹೆಲಿಕಾಪ್ಟರ್ ಶಾಟ್‌ ಮೂಲಕ ಮ್ಯಾಕ್ಸ್‌ವೆಲ್ ಸಿಕ್ಸ್ ಬಾರಿಸಿದ್ದು ಪ್ರೇಕ್ಷಕರನ್ನು ರಂಜಿಸಿತು.

ಕನ್ನಡಿಗ ರಾಹುಲ್ ದ್ರಾವಿಡ್ ಭೇಟಿಯಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

3ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದ ಮ್ಯಾಕ್ಸ್‌ವೆಲ್ 28 ಎಸೆತಗಳಿಗೆ 62 ರನ್ ಸಿಡಿಸಿದರು. ಇದರಲ್ಲಿ 7 ಬೌಂಡರಿ, 3 ಸಿಕ್ಸರ್‌ಗಳು ಸೇರಿವೆ. ಡೇವಿಡ್ ವಾರ್ನರ್ ಸ್ಫೋಟಕ ಶತಕದ ಬೆಂಬಲವೂ ದೊರೆತಿದ್ದರಿಂದ ಪಂದ್ಯವನ್ನು ಆಸ್ಟ್ರೇಲಿಯಾ 134 ರನ್‌ಗಳಿಂದ ಗೆದ್ದುಕೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ, ನಾಯಕ ಆ್ಯರನ್ ಫಿಂಚ್ 64 (36 ಎಸೆತ), ಡೇವಿಡ್ ವಾರ್ನರ್ ಅಜೇಯ 100 (56 ಎಸೆತ), ಗ್ಲೆನ್ ಮ್ಯಾಕ್ಸ್‌ವೆಲ್ 62 ರನ್‌ನೊಂದಿಗೆ 20 ಓವರ್‌ಗೆ 2 ವಿಕೆಟ್ ನಷ್ಟದಲ್ಲಿ 233 ರನ್ ಮಾಡಿತ್ತು. ಬ್ಯಾಟಿಂಗ್ ವೈಫಲ್ಯ ತೋರಿದ ಲಂಕಾ 20 ಓವರ್‌ಗೆ 9 ವಿಕೆಟ್ ನಷ್ಟದಲ್ಲಿ 99 ರನ್ ಬಾರಿಸಲಷ್ಟೇ ಶಕ್ತವಾಯ್ತು.

For Quick Alerts
ALLOW NOTIFICATIONS
For Daily Alerts

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Tuesday, October 29, 2019, 15:35 [IST]
Other articles published on Oct 29, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X