Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ ಸರಣಿ ಆಲ್ ರೌಂಡರ್ ಮ್ಯಾಕ್ಸ್ ವೆಲ್ ಆಯ್ಕೆ

Glenn Maxwell returns to Australia’s limited-overs squad for South Africa tour

ಸಿಡ್ನಿ, ಫೆಬ್ರವರಿ 04: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ತಂಡ ಸೇರಿದ್ದಾರೆ. ಏಕದಿನ ಕ್ರಿಕೆಟ್ ಹಾಗೂ ಟಿ20 ತಂಡಕ್ಕೆ ಮ್ಯಾಕ್ಸ್ ವೆಲ್ ಆಯ್ಕೆಯಾಗಿದ್ದಾರೆ.

ಮಾನಸಿಕ ಒತ್ತಡದಿಂದ ಕ್ರಿಕೆಟ್ ಅಂಗಳದಿಂದ ದೂರ ಉಳಿಸಿದ್ದ ಮ್ಯಾಕ್ಸ್ ವೆಲ್ ಅವರು ಬಿಬಿಎಲ್ ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕ, ಬ್ಯಾಟ್ಸ್ ಮನ್ ಆಗಿದ್ದಾರೆ. ಐಪಿಎಲ್ ನಲ್ಲಿ ಕಿಂಗ್ಸ್ ಎಲೆವನ್ ಪಂಜಾಬ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬಿಬಿಎಲ್ ನಲ್ಲಿ ಜೊತೆಗಾರನಾಗಿದ್ದ ಮಾರ್ಕಸ್ ಸ್ಟೋಯಿನಿಸ್, ಆಸ್ಟನ್ ಟರ್ನರ್ ಆಯ್ಕೆಯಾಗಿಲ್ಲ. ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮ್ಯಾಥ್ಯೂ ವೇಡ್, ಮಿಚೆಲ್ ಮಾರ್ಷ್ ತಂಡಕ್ಕೆ ಮರಳಿದ್ದು, ಸೀನ್ ಅಬಾಟ್, ಜಾಯ್ ರಿಚರ್ಡ್ಸನ್ ತಂಡದಲ್ಲಿದ್ದಾರೆ.

ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್ ತಂಡ: ಅರೋನ್ ಫಿಂಚ್ (ನಾಯಕ), ಅಸ್ಟನ್ ಏಗರ್, ಅಲೆಕ್ಸ್ ಕ್ಯಾರಿ(ಉಪ ನಾಯಕ), ಪ್ಯಾಟ್ ಕಮಿನ್ಸ್ (ಉಪ ನಾಯಕ), ಜೋಶ್ ಹೇಜಲ್ ವುಡ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ ವೆಲ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಂ ಝಂಪಾ.

ಆಸ್ಟ್ರೇಲಿಯಾ ಟಿ 20 ತಂಡ: ಅರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಸ್ಟನ್ ಏಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್ (ಉಪ ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ ವೆಲ್, ಜಾಯ್ ರಿಚರ್ಡ್ಸನ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆದಂ ಝಂಪಾ.

Story first published: Tuesday, February 4, 2020, 14:10 [IST]
Other articles published on Feb 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+