ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬರ್ತ್‌ಡೇ ಪಾರ್ಟಿಯಲ್ಲಿ ಮ್ಯಾಕ್ಸ್‌ವೆಲ್‌ಗೆ ಗಾಯ: ಇಂಗ್ಲೆಂಡ್ ಸರಣಿಯಿಂದ ಔಟ್!

Glenn Maxwell suffering fractured leg in birthday ruled out of ODI series against England

ಈ ಬಾರಿಯ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಿದ್ದರು ಕೂಡ ಆಸ್ಟ್ರೇಲಿಯಾ ತಂಡ ಲೀಗ್ ಹಂತದಿಂದಲೇ ಟೂರ್ನಿಯಿಂದ ಹೊರಬಿದ್ದು ಆಘಾತ ಅನುಭವಿಸಿತ್ತು. ಇದೀಗ ವಿಶ್ವಕಪ್‌ನ ಮುಕ್ತಾಯದ ಬಳಿಕ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ಭಾಗಿಯಾಗಲಿದೆ. ಆದರೆ ಈ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡದ ಪ್ರಮುಖ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದ ಕಾರಣ ಹೊರಬಿದ್ದಿದ್ದಾರೆ. ಗೆಳೆಯದ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಮ್ಯಾಕ್ಸ್‌ವೆಲ್ ಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ.

ಶನಿವಾರ ಸಂಜೆ ಗ್ಲೆನ್ ಮ್ಯಾಕ್ಸ್‌ವಲ್ ತಮ್ಮ ಸ್ನೇಹಿತರೊಬ್ಬರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇನ್ನು ಭಾನುವಾರ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಶಸ್ತ್ರಚಿಕಿತ್ಸೆಯನ್ನು ನಡೆಸಲಿದ್ದು ಬಳಿಕ ಅವರಿಗೆ ವಿಶ್ರಾಂತಿ ಅಗತ್ಯವಿರುವ ಕಾರಣ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಈ ಗಾಯದಿಂದ ಚೇತರಿಸಿಕೊಳ್ಳಲು ಗ್ಲೆನ್‌ ಮ್ಯಾಕ್ಸ್‌ವೆಲ್‌ಗೆ ಸುದೀರ್ಘ ಕಾಲದ ವಿಶ್ರಾಂತಿಯ ಅಗತ್ಯವಿದೆ ಎಂಬ ಮಾತುಗಳು ಕೇಳಿ ಬಂದಿದೆ.

ವಿಜಯ್ ಹಜಾರೆ ಟ್ರೋಫಿ 2022: ರಣಜಿ ಚಾಂಪಿಯನ್ ತಂಡಕ್ಕೆ ಮಣ್ಣುಮುಕ್ಕಿಸಿದ ಜಮ್ಮು ಮತ್ತು ಕಾಶ್ಮೀರವಿಜಯ್ ಹಜಾರೆ ಟ್ರೋಫಿ 2022: ರಣಜಿ ಚಾಂಪಿಯನ್ ತಂಡಕ್ಕೆ ಮಣ್ಣುಮುಕ್ಕಿಸಿದ ಜಮ್ಮು ಮತ್ತು ಕಾಶ್ಮೀರ

ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಉತ್ಸಾಹದ ಆಟಗಾರ. ಅದ್ಭುತ ಲಯದಲ್ಲಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯಕ್ಕೆ ತುತ್ತಾಗಿರುವುದು ನಿಜಕ್ಕೂ ದುರದೃಷ್ಟಕರ ಎಂದಿದ್ದಾರೆ ಜಾರ್ಜ್ ಬೈಲಿ. ಇನ್ನು ವೈಟ್‌ಬಾಲ್ ತಂಡದ ಪ್ರಮುಖ ಭಾಗವಾಗಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಮ್ಯಾನೇಜ್‌ಮೆಂಟ್ ಚೇತರಿಸಿಕೊಳ್ಳಲು ಹಾಗೂ ರಿಹ್ಯಾಬ್‌ಗಾಗಿ ಬೆಂಬಲವನ್ನು ನೀಡುತ್ತದೆ" ಎಂದಿದ್ದಾರೆ.

ಇನ್ನು ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಥಾನಕ್ಕೆ ಬದಲಿ ಆಟಗಾರನನ್ನು ಹೆಸರಿಸಿದೆ. ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ಸ್ಥಾನಕ್ಕೆ ವೇಗಿ ಶಾನ್ ಅಬಾಟ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಸರಣಿ ನವೆಂಬರ್ 17ರಿಂದ ಆರಂಭವಾಗಲಿದೆ. ಏಕದಿನ ಮಾದರಿಗೆ ಆರೋನ್ ಫಿಂಚ್ ವಿದಾಯ ಹೆಳಿದ ಬಳಿಕ ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಆಡುತ್ತಿರುವ ಮೊದಲ ಏಕದಿನ ಸರಣಿ ಇದಾಗಿದ್ದು ಈ ಸರಣಿಯ ಮೇಲೆ ಕುತೂಹಲ ಕೆರಳಿಸಿದೆ.

PKL 2022: ಇಂದು ಬೆಂಗಳೂರು ಗೂಳಿಗಳಿಗೆ ತಮಿಳ್ ತಲೈವಾಸ್ ಸವಾಲುPKL 2022: ಇಂದು ಬೆಂಗಳೂರು ಗೂಳಿಗಳಿಗೆ ತಮಿಳ್ ತಲೈವಾಸ್ ಸವಾಲು

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಮಿಚೆಲ್ ಮಾರ್ಷ್, ಶಾನ್ ಅಬಾಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯ್ನಿಸ್, ಡೇವಿಡ್ ವಾರ್ನರ್, ಆಡಮ್ ಜಂಪಾ

Story first published: Sunday, November 13, 2022, 13:01 [IST]
Other articles published on Nov 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X