ಭಾರತ ಕ್ರಿಕೆಟ್ ಕಂಡ ಅಪರೂಪದ ಆಟಗಾರ ಸಚಿನ್ ತೆಂಡೂಲ್ಕರ್. ವಿಶ್ವ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಮಾಡಿರದ ದಾಖಲೆಗಳಿಲ್ಲ. ಅವರು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ 100 ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ್ದಾರೆ. ಈ ದಾಖಲೆಗಳನ್ನು ಕೆಲವು ವರ್ಷವರೆಗೆ ಮುರಿಯುವುದು ಅಸಾಧ್ಯ ಎನ್ನಲಾಗುತ್ತಿತ್ತು. ಆದರೆ ಈಗ ವಿರಾಟ್ ಕೊಹ್ಲಿ ಅವರನ್ನು ಸಚಿನ್ ತೆಂಡೂಲ್ಕರ್ ಶತಕಗಳ ದಾಖಲೆಯನ್ನು ಮುರಿಯುವ ಸ್ಪರ್ಧಿ ಎಂದು ಕ್ರಿಕೆಟ್ ಕ್ರಿಕೆಟ್ ತಜ್ಞರು ಭವಿಷ್ಯ ನುಡಿಯುತ್ತಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯುತ್ತಾರೆ. ತಮ್ಮ ವೃತ್ತಿಜೀವನದ ಅವಧಿಯಲ್ಲಿ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 18426 ರನ್ ಮತ್ತು ಟೆಸ್ಟ್‌ನಲ್ಲಿ 15921 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಏಕದಿನ ಪಂದ್ಯಗಳಲ್ಲಿ 49 ಮತ್ತು ಟೆಸ್ಟ್ ಪಂದ್ಯಗಳಲ್ಲಿ 51 ಶತಕಗಳನ್ನು ಗಳಿಸುವ ಮೂಲಕ ವಿಶ್ವ ದಾಖಲೆಯನ್ನು ಹೊಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರ 100 ಅಂತಾರಾಷ್ಟ್ರೀಯ ಶತಕಗಳ ವಿಶ್ವ ದಾಖಲೆಯನ್ನು ಮುರಿಯಬಲ್ಲ ವಿಶ್ವದ ಏಕೈಕ ವಿರಾಟ್ ಕೊಹ್ಲಿ. ವಿರಾಟ್ ಕೊಹ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 82 ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ ಬ್ಯಾಟರ್. ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 51 ಶತಕಗಳು, ಟೆಸ್ಟ್ ಕ್ರಿಕೆಟ್‌ನಲ್ಲಿ 30 ಶತಕಗಳು ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1 ಶತಕ ಗಳಿಸಿದ ಸಾಧನೆ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಪ್ರಸ್ತುತ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 82 ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು 18 ಶತಕಗಳ ಅಗತ್ಯವಿದೆ. ವಿರಾಟ್ ಕೊಹ್ಲಿಗೆ ಈಗ 36 ವರ್ಷ. ವಿರಾಟ್ ಕೊಹ್ಲಿ 2027 ರವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಾಧ್ಯವಾದರೆ, ಅವರ ಕನಸು ನನಸಾಗುತ್ತದೆ. ವಿರಾಟ್ ಕೊಹ್ಲಿ 2027 ರವರೆಗೆ ಪ್ರತಿ ವರ್ಷ ಕನಿಷ್ಠ 6 ಶತಕಗಳನ್ನು ಗಳಿಸಬೇಕಾಗಿದೆ. ವಿರಾಟ್ ಕೊಹ್ಲಿ ಈ ಕಾರ್ಯವನ್ನು ಪೂರ್ಣಗೊಳಿಸಲು ಸಾಧ್ಯವಾದರೆ, ಆಗ ಮಾತ್ರ ಅವರು ಸಚಿನ್ ತೆಂಡೂಲ್ಕರ್ ಶತಕಗಳ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗುತ್ತದೆ.
ವಿರಾಟ್ ಕೊಹ್ಲಿ 2008 ರಲ್ಲಿ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ವಿಶ್ವದ ದಿಗ್ಗಜ ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ವಿರಾಟ್ ಕೊಹ್ಲಿ, ತಮ್ಮ 17 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಇಲ್ಲಿಯವರೆಗೆ ಅನೇಕ ದೊಡ್ಡ ಸಾಧನೆಗಳನ್ನು ಸಾಧಿಸಿದ್ದಾರೆ.
ವಿರಾಟ್ ಕೊಹ್ಲಿ ಇದುವರೆಗೆ 123 ಟೆಸ್ಟ್ ಪಂದ್ಯಗಳಲ್ಲಿ 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 30 ಶತಕಗಳು ಮತ್ತು 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಇದುವರೆಗೆ 299 ಪಂದ್ಯಗಳಲ್ಲಿ 58.20 ಸರಾಸರಿಯಲ್ಲಿ 14085 ರನ್ ಕಲೆ ಹಾಕಿದ್ದು, 51 ಶತಕಗಳು ಮತ್ತು 73 ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 1 ಶತಕ ಮತ್ತು 38 ಅರ್ಧಶತಕಗಳ ಸಹಾಯದಿಂದ 4188 ರನ್ ಗಳಿಸಿದ್ದಾರೆ. 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ವಿದಾಯ ಹೇಳಿದ್ದಾರೆ. ಈಗ ವಿರಾಟ್ ಕೊಹ್ಲಿ ಭಾರತ ಪರ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ.