Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Xavier Bartlett: ಐಪಿಎಲ್ ಮಧ್ಯೆ ಪಂಜಾಬ್ ಕಿಂಗ್ಸ್ ಬೌಲರ್‌ಗೆ ಸಿಹಿ ಸುದ್ದಿ

ಭಾರತದಲ್ಲಿ ಐಪಿಎಲ್ 2025 ರ ಸೀಸನ್ ಅದ್ಧೂರಿಯಾಗಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿರುವ ಪಂಜಾಬ್ ಕಿಂಗ್ಸ್ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಕ್ಸೇವಿಯರ್ ಬಾರ್ಟ್ಲೆಟ್ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಐಪಿಎಲ್ 2025 ರ ನಂತರ ಮತ್ತೊಂದು ಟಿ20 ಲೀಗ್ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಅಮೆರಿಕಾದಲ್ಲಿ ಆಡುವ ಮೇಜರ್ ಕ್ರಿಕೆಟ್ ಲೀಗ್‌ನಲ್ಲಿಯೂ ಬಾರ್ಟ್ಲೆಟ್ ಕಾಣಿಸಿಕೊಳ್ಳಲಿದ್ದಾರೆ.

ಕ್ಸೇವಿಯರ್ ಬಾರ್ಟ್ಲೆಟ್ ಜೊತೆಗೆ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಮುಂಬುರುವ ಸೀಸನ್‌ಗಾಗಿ ಒಪ್ಪಂದ ಮಾಡಿಕೊಂಡಿದೆ. ಅವರು ತಮ್ಮ ಆಸ್ಟ್ರೇಲಿಯಾದ ತಂಡದ ಸಹಾ ಆಟಗಾರರಾದ ಕೂಪರ್ ಕಾನೊಲಿ, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ಮ್ಯಾಟ್ ಶಾರ್ಟ್ ಅವರೊಂದಿಗೆ ತಂಡಕ್ಕೆ ಸೇರಿಕೊಳ್ಳಲಿದ್ದಾರೆ.

Good news for Punjab Kings fast bowler Xavier Bartlett amid IPL

ಕ್ಸೇವಿಯರ್ ಬಾರ್ಟ್ಲೆಟ್ ಅವರು ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಆರಂಭ ಕಂಡಿದ್ದಾರೆ. ಏಳು ಪಂದ್ಯಗಳಲ್ಲಿ 6.84 ರ ಎಕನಾಮಿಯಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2020-24 ರ ಬಿಗ್ ಬ್ಯಾಶ್ ಲೀಗ್‌ನಲ್ಲಿ (ಬಿಬಿಎಲ್‌) ಬ್ರಿಸ್ಬೇನ್ ಹೀಟ್ ಪರ ಬಾರ್ಟ್ಲೆಟ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೂ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿತು.

ಬಿಬಿಎಲ್‌ನಲ್ಲಿ ಬ್ರಿಸ್ಬೇನ್ ಹೀಟ್‌ನ ವೇಗದ ಬೌಲಿಂಗ್‌ ದಾಳಿಯನ್ನು ಬಾರ್ಟ್ಲೆಟ್ ಮುನ್ನಡೆಸಿದ್ದರು. ಹೊಸ ಚೆಂಡಿನಲ್ಲಿ ವಿಕೆಟ್ ಪಡೆಯುವ ಅವರ ಸಾಮರ್ಥ್ಯ ಎಲ್ಲರ ಗಮನ ಸೆಳೆದಿತ್ತು. ಅವರು ಈಗ ಯುನಿಕಾರ್ನ್ಸ್‌ನ ಬೌಲಿಂಗ್ ಸಾಲಿಗೆ ಉತ್ತಮ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಯುನಿಕಾರ್ನ್ಸ್‌ ಹೆಡ್‌ಕೋಚ್ ಶೇನ್ ವ್ಯಾಟ್ಸನ್ ಮಾಹಿತಿ ನೀಡಿದ್ದಾರೆ.

ಕ್ಸೇವಿಯರ್ ಬಾರ್ಟ್ಲೆಟ್ ಎಂಎಲ್‌ಸಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರೆ, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೂ ಅವರನ್ನು ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಮಾಡಬಹುದು. ಇದಲ್ಲದೆ, ಅವರು ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿಯೂ ಆಡಬಹುದು.

ಮೇಜರ್ ಕ್ರಿಕೆಟ್ ಲೀಗ್ ಜೂನ್ 13 ರಿಂದ ಪ್ರಾರಂಭವಾಗಲಿದ್ದು, ಜುಲೈ 14 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿಲು ಆಸ್ಟ್ರೇಲಿಯಾ ತಂಡದ ಆಟಗಾರರು ಈ ಲೀಗ್ ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆಸ್ಟ್ರೇಲಿಯಾ ತಂಡ ಜೂನ್ 25 ರಿಂದ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

Story first published: Tuesday, April 29, 2025, 20:03 [IST]
Other articles published on Apr 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+