ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್, ನವೆಂಬರ್10ಕ್ಕೆ ಫೈನಲ್

Government has cleared staging of IPL in the UAE from September 19 to November 10

ಐಪಿಎಲ್ ಆಯೋಜನೆಗೆ ಕೇಂದ್ರ ಸರ್ಕಾರ ತನ್ನ ಗ್ರೀನ್ ಸಿಗ್ನಲ್ ನೀಡಿದೆ . ಈ ಮೂಲಕ ಭಾರೀ ನಿರೀಕ್ಷೆಯ ಟೂರ್ನಿಗೆ ಇದ್ದ ಎಲ್ಲಾ ಅಡೆತಡೆಗಳೂ ನಿವಾರಣೆಯಾಗಿದೆ. ಟೂರ್ನಿಯ ಫೈನಲ್ ಪಂದ್ಯದ ಬಗ್ಗೆ ಇದ್ದ ಗೊಂದಲಕ್ಕೂ ತೆರೆಬಿದ್ದಿದ್ದು ಸೆಪ್ಟೆಂಬರ್ 19 ರಿಂದ ಆರಂಭವಾಗಿ ನವೆಂಬರ್ 10 ರಂದು ಫೈನಲ್ ಪಂದ್ಯ ನಡೆಯಲಿದೆ.

ಇವತ್ತು ಐಪಿಎಲ್‌ನ ಆಡಳಿತಾತ್ಮಕ ಮಂಡಳಿಯ ಸಭೆ ಕೂಡ ನಡೆದಿದ್ದು ಈ ಸಂದರ್ಭದಲ್ಲಿ ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವರ್ಚುವಲ್ ಸಭೆಯಲ್ಲಿ ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಕೂಡ ಪಾಲ್ಗೊಂಡಿದ್ದರು.

ಟಿ20 ವಿಶ್ವಕಪ್ ಮುಂದಿನ ವರ್ಷಕ್ಕೆ ಮುಂದೂಡಿದ ಕಾರಣ ಕೊರೊನಾ ವೈರಸ್‌ನ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಐಪಿಎಲ್ ಟೂರ್ನಿಯನ್ನು ಈ ಬಾರಿ ಯುಎಇನಲ್ಲಿ ಆಯೋಜನೆ ಮಾಡಲು ಬಿಸಿಸಿಐ ನಿರ್ಧರಿಸಿತ್ತು. ಆದರೆ ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ದೊರೆತಿರಲಿಲ್ಲ. ಈ ಅನುಮತಿ ಇಂದು ಭಾನುವಾರ ದೊರೆತಿದೆ.

ಐಪಿಎಲ್ ಟೂರ್ನಿ ಮಾರ್ಚ್-ಮೇ ತಿಂಗಳಲ್ಲಿ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್‌ ಭೀತಿಯಿಂದಾಗಿ ಇದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಇದೀಗ ಕೊರೊನಾ ವೈರಸ್ ಭೀತಿಯ ಮಧ್ಯೆಯೇ ಸೂಕ್ತ ವೈಜ್ಞಾನಿಕ ಕ್ರಮಗಳೊಂದಿಗೆ ನಡೆಸುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ.

ಕೇಂದ್ರ ಸರ್ಕಾರದ ಅಧಿಕೃತ ಅನುಮತಿ ದೊರೆತಿರುವ ಕಾರಣ ನಾಳೆ ಯುಎಇನಲ್ಲಿ ನಡೆಯಲಿರುವ ಐಪಿಎಲ್‌ನ ಸಂಪೂರ್ಣ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

Story first published: Monday, August 3, 2020, 9:54 [IST]
Other articles published on Aug 3, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X