ಸೆಹ್ವಾಗ್ ಜೊತೆ ಎಲೈಟ್ ಕ್ಲಬ್ ಸೇರಿದ ಸಾಯಿ ಸುದರ್ಶನ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಆಟಗಾರ ಸಾಯಿ ಸುದರ್ಶನ್ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇವರು ಅಹಮದಾಬಾದ್‌ನಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಗುಜರಾತ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಾದಾಟವನ್ನು ನಡೆಸಿತು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅಮೋಘ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದರು.
ಚೆನ್ನೈ ವಿರುದ್ಧ ಸಾಯಿ ಸುದರ್ಶನ್ 7 ಬೌಂಡರಿ, 4 ಸಿಕ್ಸರ್ ನೆರವಿನಿಂದ 84 ರನ್ ಬಾರಿಸಿದರು. ಈ ಮೂಲಕ ಇವರು ವಿಶೇಷ ಕ್ಲಬ್‌ಗೆ ಎಂಟ್ರಿ ಪಡೆದಿದ್ದಾರೆ. ಸಾಯಿ ಸುದರ್ಶನ್ ಸತತವಾಗಿ ಐದನೇ ಅರ್ಧಶತಕ ಬಾರಿಸಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಈ ಆವೃತ್ತಿಯಲ್ಲಿ ಸತತ ಐದನೇ ಅರ್ಧಶತಕ ಬಾರಿಸುವುದೊಂದಿಗೆ ಸಾಯಿ ಸುದರ್ಶನ್ ವಿಶೇಷ ಕ್ಲಬ್‌ಗೆ ಎಂಟ್ರಿ ಪಡೆದರು. 2012ರಲ್ಲಿ ವೀರೇಂದ್ರ ಸೆಹ್ವಾಗ್ ಈ ಸಾಧನೆಯನ್ನು ಮಾಡಿದ್ದರು. ಈಗ ಈ ಸಾಲಿಗೆ ಸಾಯಿ ಸುದರ್ಶನ್ ಎಂಟ್ರಿ ಪಡೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.
ಈ ಇಬ್ಬರೂ ಆಟಗಾರರನ್ನು ಬಿಟ್ಟರೆ 2018ರಲ್ಲಿ ಜೋಸ್ ಬಟ್ಲರ್ ಈ ಸಾಧನೆಯನ್ನು ಮಾಡಿದ್ದರು. 2019ರಲ್ಲಿ ಡೇವಿಡ್ ವಾರ್ನರ್ ಸಹ ಇಂತಹದ್ದೇ ಸಾಧನೆ ಮಾಡಿ ಬೀಗಿದ್ದರು. ಈಗ ಸಾಯಿ ಸಹ ಇಂತಹದ್ದೇ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಸತತ ಐದು ಅರ್ಧಶತಕ ಬಾರಿಸಿದ ನಾಲ್ಕನೇ ಆಟಗಾರ ಎಂಬ ಹಿರಿಮೆ ಸಹ ತನ್ನದಾಗಿಸಿಕೊಂಡಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡದ ಪರ ಆರಂಭಿಕರಾದ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಇಬ್ಬರೂ ಸಹ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ಈ ಇಬ್ಬರೂ ಆಟಗಾರರು ಪ್ರಸಕ್ತ ಐಪಿಎಲ್‌ನಲ್ಲಿ 600ಕ್ಕೂ ಅಧಿಕ ರನ್ ಬಾರಿಸಿದ ಸಾಧನೆಯನ್ನು ಮಾಡಿದ್ದಾರೆ. ಈ ಮೂಲಕ ಇಬ್ಬರೂ ಆಟಗಾರರು ಬ್ಯಾಕ್ ಟು ಬ್ಯಾಕ್ ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಬಾರಿಸಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಯನ್ನು ಸಹ ತನ್ನದಾಗಿಸಿಕೊಂಡಿದ್ದಾರೆ.
ಸಾಯಿ ಸುದರ್ಶನ್‌ಗೆ ಆರೆಂಜ್ ಕ್ಯಾಪ್
ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಸಾಯಿ ಸುದರ್ಶನ್ ಆಡಿದ 14 ಪಂದ್ಯಗಳಲ್ಲಿ 49ರ ಸರಾಸರಿಯಲ್ಲಿ 638 ರನ್ ಕಲೆ ಹಾಕಿದ್ದಾರೆ. ಇದೇ ಸಾಲಿನಲ್ಲಿ ಕಾಣಿಸಿಕೊಳ್ಳುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ 47ರ ಸರಾಸರಿಯಲ್ಲಿ 616ರನ್ ಸಿಡಿಸಿದ್ದಾರೆ. ಇದೇ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ 579 ರನ್ ಸಿಡಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
2ನೇ ಸ್ಥಾನ
ಗುಜರಾತ್ ಟೈಟಾನ್ಸ್ ಪ್ರಸಕ್ತ ಆವೃತ್ತಿಯಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಜಯ, 5 ಸೋಲು ಕಂಡಿದ್ದು, 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications