GT vs CSK: ಅಗ್ರಸ್ಥಾನದ ಮೇಲೆ ಟೈಟಾನ್ಸ್ ಕಣ್ಣು; ಸಿಎಸ್‌ಕೆ ಜಯದ ಕನಸು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ)ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳಿಗೂ ಇದು ಲೀಗ್ ಹಂತದ ಕೊನೆಯ ಪಂದ್ಯವಾಗಿದೆ. ಗುಜರಾತ್ ಈ ಪಂದ್ಯ ಗೆದ್ದು ಟಾಪ್ 2ರಲ್ಲಿ ಸ್ಥಾನ ಉಳಿಸಿಕೊಳ್ಳಲು ಪ್ಲ್ಯಾನ್ ಮಾಡಿದರೆ, ಸಿಎಸ್‌ಕೆ ತಂಡ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಪ್ಲ್ಯಾನ್ ಮಾಡಿದೆ.
ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದೆ. ಗುಜರಾತ್ ಟೈಟಾನ್ಸ್ ಲೀಗ್ ಹಂತದ ಹಿಂದಿನ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲು ಕಂಡಿದೆ. ಒಟ್ಟಾರೆ 13 ಪಂದ್ಯಗಳಲ್ಲಿ 8 ಜಯ, 5 ಸೋಲು ಕಂಡಿದ್ದು, 16 ಅಂಕಗಳನ್ನು ಕಲೆ ಹಾಕಿದ್ದು 2ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಆಡಿದ 13 ಪಂದ್ಯಗಳಲ್ಲಿ 6 ಜಯ, 7 ಸೋಲು ಕಂಡಿದ್ದು 12 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಚೆನ್ನೈ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇ ಆಫ್ ಪ್ರವೇಶಿಸುವ ಆಸೆಯ ಲೆಕ್ಕಾಚಾರವನ್ನು ಮಾಡಿಕೊಳ್ಳಬಹುದಾಗಿದೆ.

ಗುಜರಾತ್ ಟೈಟಾನ್ಸ್ ತಂಡಕ್ಕೆ ಟಾಪ್ ಆರ್ಡರ್ ಬ್ಯಾಟರ್‌ಗಳು ಬಲ ತುಂಬಿದ್ದಾರೆ. ಸಾಯಿ ಸುದರ್ಶನ್ (554) ಹಾಗೂ ನಾಯಕ ಶುಭಮನ್ ಗಿಲ್ (552) ಭರ್ಜರಿ ಪ್ರದರ್ಶನ ನೀಡುತ್ತಿದ್ದು ತಂಡಕ್ಕೆ ಆಧಾರವಾಗಬಲ್ಲರು. ಇವರಿಬ್ಬರೂ ಸದ್ಯ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ಹೀಗಾಗಿ ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ (412) ರನ್ ಕಲೆ ಹಾಕುತ್ತಿದ್ದ ತಂಡದ ಚಿಂತೆಯನ್ನು ದೂರ ಮಾಡಿದ್ದಾರೆ. ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಉಳಿದ ಬ್ಯಾಟರ್‌ಗಳು ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.
ವೇಗದ ಬೌಲರ್‌ಗಳು ಆಕರ್ಷಣೆ
ಬೌಲಿಂಗ್ ವಿಭಾಗದಲ್ಲಿ ಕಗಿಸೋ ರಬಾಡ (21), ರಶೀದ್ ಖಾನ್ (16), ಪ್ರಸಿದ್ಧ್ ಕೃಷ್ಣ (14) ಹಾಗೂ ಮೊಹಮ್ಮದ್ ಸಿರಾಜ್ (14) ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗುತ್ತಿದ್ದಾರೆ. ಇವರು ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ಸಂಘಟಿಸಿ ಎದುರಾಳಿಗಳನ್ನು ಕಾಡಬಲ್ಲರು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಲು ಟೈಟಾನ್ಸ್ ತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಗೆಲುವಿನ ಒತ್ತಡದಲ್ಲಿ ಸಿಎಸ್‌ಕೆ
ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಸಂಜು ಸ್ಯಾಮ್ಸನ್ (477) ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಉಳಿದಂತೆ ರುತುರಾಜ್ ಗಾಯಕ್ವಾಡ್, ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ ಸೇರಿದಂತೆ ಸ್ಟಾರ್ ಬ್ಯಾಟರ್‌ಗಳು ಭರ್ಜರಿ ಪ್ರದರ್ಶನ ನೀಡಿದರೆ ಜಯದ ಆಸೆ ಫಲಿಸುತ್ತದೆ. ಸಿಎಸ್‌ಕೆ ತಂಡದಲ್ಲೂ ಸ್ಟಾರ್ ಬೌಲರ್‌ಗಳ ತಂಡ ಇದೆ. ಅನ್ಶುಲ್ ಕಾಂಬೋಜ್ ವಿಕೆಟ್ ಪಡೆದು ಬೀಗುತ್ತಿದ್ದಾರೆ. ಇವರಿಗೆ ಉಳಿದ ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಇನ್ನು ಜೇಮಿ ಓವರ್‌ಟನ್, ನೂರ್ ಅಹ್ಮದ್ ಸಹ ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಿ ತಂಡಕ್ಕೆ ಆಧಾರವಾದರೆ, 2 ಅಂಕದ ಕನಸು ನನಸಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications