Kane Williamson Injury: ಫೀಲ್ಡಿಂಗ್ ವೇಳೆ ಭಯಾನಕವಾಗಿ ಗಾಯಗೊಂಡ ಕೇನ್ ವಿಲಿಯಮ್ಸನ್!
ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಸೆಣೆಸಾಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎರಡು ತಂಡಗಳು ಕೂಡ ಪೈಪೋಟಿಯ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ಅನುಭವಿ ಆಟಗಾರ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ವೇಳೆ ಭಯಾನಕ ರೀತಿಯಲ್ಲಿ ಗಾಯಗೊಂಡು ಮೈದಾನ ತೊರೆಯಬೇಕಾಯಿತು.
ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸಿಕ್ಸರ್ ತಡೆಯುವ ಪ್ರಯತ್ನ ನಡೆಸಿದ ಸಂದರ್ಭದಲ್ಲಿ ಬೌಂಡರಿ ಗೆರೆಯಾಚೆ ಬಿದ್ದು ಕೇನ್ ವಿಲಿಯಮ್ಸನ್ ಗಾಯಗೊಂಡರು. ಋತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡು ಸಿಕ್ಸರ್‌ನತ್ತ ಧಾವಿಸಿತ್ತು. ಈ ಸಂದರ್ಭದಲ್ಲಿ ಬೌಂಡರಿ ಗೆರೆಯ ಸನಿಹ ಫೀಲ್ಡಿಂಗ್ ನಡೆಸುತ್ತಿದ್ದ ಕೇನ್ ಮಿಲಿಯಮ್ಸನ್ ಚೆಂಡನ್ನು ಹಾರಿ ಸಿಕ್ಸರ್ ತಡೆಯುವಲ್ಲಿ ಯಶಸ್ವಿಯಾದರು. ಆದರೆ ತಡೆದು ನೆಲಕ್ಕೆ ಬಿದ್ದ ಸಂದರ್ಭದಲ್ಲಿ ಕೇನ್ ಮೊಣಕಾಲಿಗೆ ಗಾಯವಾಗಿದೆ.

ನೆಲಕ್ಕೆ ಬಿದ್ದ ತಕ್ಷಣವೇ ಕೇನ್ ವಿಲಿಯಮ್ಸನ್ ತೀವ್ರ ನೋವಿಗೆ ಒಳಗಾಗಿದ್ದು ನೇರಪ್ರಸಾರದ ದೃಶ್ಯದಲ್ಲಿ ಸ್ಪಷ್ಟವಾಗಿತ್ತು. ತಕ್ಷಣವೇ ಆಗಮಿಸಿದ ಜಿಟಿ ತಂಡದ ಫೀಸಿಯೋ ಕೇನ್ ವಿಲಿಯಮ್ಸನ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಕೇನ್ ಮೈದಾನವನ್ನು ತೆರೆದರು. ಬಳಿಕ ಕೇನ್ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ ಇಂಪಾಕ್ಟ್ ಪ್ಲೇಯರ್ ಆಗಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟನ್ಸ್ ತಂಡಕ್ಕೆ ಪೈಪೋಟಿಯ ಮೊತ್ತವನ್ನು ಗುರಿಯಾಗಿ ನೀಡಿತ್ತು. ಋತುರಾಜ್ ಗಾಯಕ್ವಾಡ್ ಅವರ ಭರ್ಜರಿ 92 ರನ್‌ಗಳ ಕೊಡಗೆಯ ಕಾರಣದಿಂದಾಗಿ ಗುಜರಾತ್ ಟೈಟನ್ಸ್‌ಗೆ 179 ರನ್‌ಗಳ ಗುರಿ ನಿಗದಿಪಡಿಸಿತು.
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಲ್, ಅಲ್ಜಾರಿ ಜೋಸೆಫ್
ಸಬ್ಸ್ಟಿಟ್ಯೂಟ್ಸ್: ಬಿ ಸಾಯಿ ಸುದರ್ಶನ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆಎಸ್ ಭರತ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್/ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ರಾಜವರ್ಧನ್ ಹಂಗರ್ಗೇಕರ್
ಸಬ್ಸ್ಟಿಟ್ಯೂಟ್ಸ್: ತುಷಾರ್ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications