Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs CSK IPL 2024: ಗುಜರಾತ್ ಟೈಟಾನ್ಸ್ ನಾಯಕ ಸೇರಿದಂತೆ ಎಲ್ಲಾ ಆಟಗಾರರಿಗೆ ಬಿತ್ತು ದಂಡ

ಮೇ 11 ಶನಿವಾರ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಗುಜರಾತ್ ಟೈಟಾನ್ಸ್ (ಜಿಟಿ) ಭರ್ಜರಿ ಗೆಲುವು ಸಾಧಿಸಿದೆ.

ಗುಜರಾತ್ ತಂಡದ ನಾಯಕ ಶುಭ್ಮನ್‌ ಗಿಲ್ ಮತ್ತು ಆರಂಭಿಕ ಸಾಯಿ ಸುದರ್ಶನ್ ಅವರ ಅಬ್ಬರದ ಶತಕಗಳ ನೆರವಿನಿಂದ ಸಿಎಸ್‌ಕೆ ವಿರುದ್ಧ 35 ರನ್‌ಗಳ ಜಯ ದಾಖಲಿಸಿತು.

GT vs CSK IPL 2024 Gujarat Titans captain and all players have been fined

ಇಂತಹ ಹೈವೋಲ್ಟೇಜ್‌ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಗುಜರಾತ್ ನಾಯಕ ಶುಭ್ಮನ್ ಗಿಲ್ ಮತ್ತು ತಂಡದ ಎಲ್ಲ ಆಟಗಾರಿಗೆ ದಂಡ ವಿಧಿಸಲಾಗಿದೆ.

ಐಪಿಎಲ್ ಹೊರಡಿಸಿದ ಹೇಳಿಕೆಯ ಪ್ರಕಾರ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪಂದ್ಯದಲ್ಲಿ ತಮ್ಮ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ.

ಐಪಿಎಲ್‌ನ ನೀತಿ ಸಂಹಿತೆಯಡಿಯಲ್ಲಿ ಕನಿಷ್ಠ ಓವರ್‌ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಗುಜರಾತ್‌ ತಂಡದ ಎರಡನೇ ಅಪರಾಧವಾಗಿರುವುದರಿಂದ, ಗಿಲ್‌ಗೆ 24 ಲಕ್ಷ ರೂ. ದಂಡ ವಿಧಿಸಿದ್ದು, ತಂಡದಲ್ಲಿದ್ದ 10 ಆಟಗಾರ ಜೊತೆಗೆ ಉಳಿದವರಿಗೂ ಪ್ರತ್ಯೇಕವಾಗಿ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 25 ರಷ್ಟು ದಂಡ ವಿಧಿಸಲಾಗಿದೆ.

ಜಿಟಿ ಮತ್ತು ಸಿಎಸ್‌ಕೆ ಪಂದ್ಯದ ಫಲಿತಾಂಶ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ಸಾಯಿ ಸುದರ್ಶನ್ ಮತ್ತು ನಾಯಕ ಶುಭ್ಮನ್ ಗಿಲ್ ಅವರ ಭರ್ಜರಿ ಶತಕಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 231 ರನ್ ಗಳಿಸಿತ್ತು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 232 ರನ್‌ಗಳ ಬೃಹತ್ ಗುರಿ ನೀಡಿತ್ತು.

ಈ ಗುರಿ ಬೆನ್ನಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡ್ಯಾರಿಲ್ ಮಿಚೆಲ್ ಮತ್ತು ಮೊಯಿನ್ ಅಲಿ ಅವರ ಅಮೋಘ ಅರ್ಧಶತಕಗಳ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಈ ಮೂಲಕ ಗುಜರಾತ್ ಟೈಟನ್ಸ್ ತಂಡ 35 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಇದೀಗ ಗುಜರಾತ್ ಟೈಟನ್ಸ್ ತಂಡ ಐಪಿಎಲ್ 2024ರಲ್ಲಿ ಆಡಿದ 12 ಪಂದ್ಯಗಳಲ್ಲಿ 5 ಗೆಲುವು ಮತ್ತು 7 ಸೋಲು ಕಂಡಿದ್ದು, 10 ಪಾಯಿಂಟ್‌ಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ. ಇನ್ನು ಸಿಎಸ್‌ಕೆ ತಂಡ ಆಡಿದ 12 ಪಂದ್ಯಗಳಲ್ಲಿ 6 ಗೆಲುವು ಮತ್ತು 6 ಸೋಲು ಕಂಡು 12 ಪಾಯಿಂಟ್‌ಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರೆದಿದೆ.

Story first published: Saturday, May 11, 2024, 14:11 [IST]
Other articles published on May 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+