Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs CSK IPL 2024: ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ vs ಚೆನ್ನೈ ಕಾಳಗ; ಟಾಸ್ ವರದಿ, ಆಡುವ 11ರ ಬಳಗ

ಶುಕ್ರವಾರ, ಮೇ 10ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 59ನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನಿರ್ಣಾಯಕ ಗೆಲುವಿಗಾಗಿ ಹೋರಾಟ ನಡೆಸಲಿವೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

GT vs CSK IPL 2024 Gujarat Titans vs Chennai Super Kings Match Toss Report Playing 11 Details

ಐಪಿಎಲ್ 2024ರಲ್ಲಿ ಪ್ಲೇಆಫ್ ಅರ್ಹತಾ ಅವಕಾಶ ಪಡೆಯಲು ಉಭಯ ತಂಡಗಳಿಗೆ ಗೆಲುವು ಅನಿವಾರ್ಯವಾಗಿದ್ದು, ಯಾವುದೇ ತಂಡಕ್ಕೆ ಸೋಲು ಪ್ಲೇಆಫ್ ಅವಕಾಶವನ್ನು ಕಡಿಮೆಗೊಳಿಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ 2024ರಲ್ಲಿ ಆಡಿದ 11 ಪಂದ್ಯಗಳಲ್ಲಿ 6 ಗೆಲುವು ಮತ್ತು 5 ಸೋಲು ಅನುಭವಿಸಿದ್ದು, 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದರೆ, ಇನ್ನು ಗುಜರಾತ್ ಟೈಟನ್ಸ್ ತಂಡ ಆಡಿದ 11 ಪಂದ್ಯಗಳಲ್ಲಿ 11 ಪಂದ್ಯಗಳಲ್ಲಿ 4 ಗೆಲುವು 7 ಸೋಲುಗಳೊಂದಿಗೆ 8 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಸಿಎಸ್‌ಕೆ ವಿಕೆಟ್‌ಕೀಪರ್-ಬ್ಯಾಟರ್ ಎಂಎಸ್ ಧೋನಿ ಐಪಿಎಲ್‌ನಲ್ಲಿ ತಮ್ಮ 150 ಕ್ಯಾಚ್‌ಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದ್ದಾರೆ. ಈ ಐತಿಹಾಸಿಕ ಸಾಧನೆ ಮಾಡಲು ಕೇವಲ ನಾಲ್ಕು ಕ್ಯಾಚ್‌ಗಳ ದೂರದಲ್ಲಿದ್ದಾರೆ. ಆ ಮೂಲಕ ಈ ದಾಖಲೆ ನಿರ್ಮಿಸಿದ ಮೊದಲ ವಿಕೆಟ್‌ಕೀಪರ್ ಆಗಲಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‌ಗಳ ಗೆಲುವು ದಾಖಲಿಸಿದ ಹಿನ್ನೆಲೆಯಿಂದ ಸಿಎಸ್‌ಕೆ ಈ ಹಣಾಹಣಿಗೆ ಬರಲಿದೆ. ಮತ್ತೊಂದೆಡೆ, ಗುಜರಾತ್ ಟೈಟನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 4 ವಿಕೆಟ್‌ಗಳ ಸೋಲು ಅನುಭವಿಸಿ ಈ ಪಂದ್ಯಕ್ಕೆ ಬರುತ್ತಿದೆ.

ಜಿಟಿ vs ಸಿಎಸ್‌ಕೆ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಜಿಟಿ vs ಸಿಎಸ್‌ಕೆ ಆಡುವ 11ರ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್.

ಗುಜರಾತ್ ಟೈಟನ್ಸ್: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಶಾರುಖ್ ಖಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ.

Story first published: Friday, May 10, 2024, 19:08 [IST]
Other articles published on May 10, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+