Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs DC: ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಬೌಲಿಂಗ್ ಆಯ್ಕೆ

ಅಹಮದಾಬಾದ್‌ ಅಂಗಳದಲ್ಲಿ ನಡೆಯುತ್ತಿರುವ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್‌ ಡಿಸಿ ಪಾಲಾಯಿತು. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಡೆಲ್ಲಿ ತಂಡ ಈ ಪಂದ್ಯದಲ್ಲಿ ಒಂದು ಬದಲಾವಣೆಯನ್ನು ಮಾಡಿದೆ. ಸ್ಟಾರ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್‌ ತಂಡದಿಂದ ಹೊರ ನಡೆದಿದ್ದರಿಂದ ಅವರ ಸ್ಥಾನದಲ್ಲಿ ಸುಮಿತ್ ಕುಮಾರ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶವನ್ನು ನೀಡಿದೆ.

GT vs DC Delhi won the toss David Miller returned to Gujarat

ಮತ್ತೊಂದೆಡೆ ಗುಜರಾತ್ ಟೈಟಾನ್ಸ್ 3 ಬದಲಾವಣೆ ಮಾಡಿದೆ. ಡೇವಿಡ್ ಮಿಲ್ಲರ್ ತಂಡಕ್ಕೆ ಕಮ್‌ ಬ್ಯಾಕ್‌ ಮಾಡಲಿದ್ದು, ಇವರ ಆಗಮನ ಮಿಡ್ಲ್ ಆರ್ಡರ್‌ಗೆ ಬೂಸ್ಟ್‌ ನೀಡಲಿದೆ. ಮ್ಯಾಥ್ಯೂ ವೇಡ್ ಬದಲಿಗೆ ವೃದ್ಧಿಮಾನ್ ಸಹಾ ವಿಕೆಟ್‌ ಕೀಪರ್ ಬ್ಯಾಟರ್‌ ಆಗಿ ಸ್ಥಾನ ಪಡೆದಿದ್ದಾರೆ. ವೇಗದ ಬೌಲರ್ ಸಂದೀಪ್ ವಾರಿಯರ್ ಗುಜರಾತ್ ಟೈಟನ್ಸ್ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ.

ಜಿಟಿ ತಂಡ: ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್.

ಡಿಸಿ ತಂಡ: ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.

Story first published: Wednesday, April 17, 2024, 19:17 [IST]
Other articles published on Apr 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+