Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs DC Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ 11

DC vs GT

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಶನಿವಾರ (ಏ.02) ಐಪಿಎಲ್ 2022ರ 15ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಸಂಪೂರ್ಣ ಯುವ ಪಡೆಯನ್ನ ಹೊಂದಿರುವ ಉಭಯ ತಂಡಗಳು ಭಾರೀ ಹುರುಪಿನೊಂದಿಗೆ ಅಖಾಡಕ್ಕಿಳಿಯಲಿವೆ.

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಡೆ ಗೆಲುವಿನ ಆರಂಭ ಪಡೆದಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನ ಮಣಿಸಿ ವಿಜಯ ಪತಾಕೆ ಹಾರಿಸಿದೆ. ಹೀಗಾಗಿ ಗೆಲುವಿನ ಜೋಶ್‌ನಲ್ಲಿರುವ ಎರಡು ತಂಡಗಳ ಮುಖಾಮುಖಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಬ್ಯಾಟಿಂಗ್ ಬೌಲಿಂಗ್‌ನಲ್ಲಿ ಬಲಿಷ್ಠವಾಗಿರುವ ಗುಜರಾತ್ ಟೈಟನ್ಸ್

ಬ್ಯಾಟಿಂಗ್ ಬೌಲಿಂಗ್‌ನಲ್ಲಿ ಬಲಿಷ್ಠವಾಗಿರುವ ಗುಜರಾತ್ ಟೈಟನ್ಸ್

ಗುಜರಾತ್ ಟೈಟನ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದ್ದು, ಮೊಹಮ್ಮದ್ ಶಮಿ ಟಾಪ್ ಬೌಲರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಮಧ್ಯಮ ಕ್ರಮಾಮಕದಲ್ಲಿ ಬ್ಯಾಟಿಂಗ್‌ನಲ್ಲಿ ಆಯುಷ್ ಬದೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ ತಂಡವನ್ನ ಬ್ಯಾಲೆನ್ಸ್ ಮಾಡಬಲ್ಲರು. ಈಗಾಗಲೇ ಗುಜರಾತ್‌ ಎಂತಹದೇ ತಂಡವನ್ನ ಮಣಿಸುವ ಸಾಮರ್ಥ್ಯ ಹೊಂದಿರುವುದನ್ನ ಸಾಭೀತುಪಡಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಕುಲ್‌ದೀಪ್, ಅಕ್ಷರ್ ಪಟೇಲ್ ಟ್ರಂಪ್ ಕಾರ್ಡ್‌ ಪ್ಲೇಯರ್ಸ್‌

ಡೆಲ್ಲಿ ಕ್ಯಾಪಿಟಲ್ಸ್‌ಗೆ ಕುಲ್‌ದೀಪ್, ಅಕ್ಷರ್ ಪಟೇಲ್ ಟ್ರಂಪ್ ಕಾರ್ಡ್‌ ಪ್ಲೇಯರ್ಸ್‌

ದೆಹಲಿ ಬೌಲರ್‌ಗಳಲ್ಲಿ ವಿಶೇಷವಾಗಿ ಚೈನಾಮೆನ್ ಬೌಲರ್ ಕುಲ್‌ದೀಪ್ ಯಾದವ್ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದು, ಅಕ್ಷರ್ ಪಟೇಲ್ ಆಲ್‌ರೌಂಡರ್ ಆಟದ ಜೊತೆಗೆ ಲಲಿತ್ ಯಾದವ್ ಬ್ಯಾಟಿಂಗ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಪಿಚ್ ರಿಪೋರ್ಟ್

ಪಿಚ್ ರಿಪೋರ್ಟ್

ಪುಣೆಯ ಎಂಸಿಎ ಪಿಚ್‌ ಹೆಚ್ಚು ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದು, ರನ್‌ಹೊಳೆಯೇ ಹರಿದು ಬರುವ ನಿರೀಕ್ಷೆ ಹೆಚ್ಚಾಗಿದೆ. ವೇಗಿಗಳು ಮೇಲ್ಮೈಯಿಂದ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಆದರೆ ಸ್ಪಿನ್ನರ್‌ಗಳು ಈ ಒರಟು ಮೇಲ್ಮೈಯಿಂದ ಹೆಚ್ಚಿನದನ್ನು ಪಡೆಯಬಹುದು. ಆದಾಗ್ಯೂ, ತಂಡವು ತನ್ನ ಎಲ್ಲಾ ವಿಕೆಟ್‌ಗಳನ್ನು ಉಳಿಸಿಕೊಂಡರೆ ಈ ವಿಕೆಟ್‌ನಲ್ಲಿ ಚೇಸಿಂಗ್ ಮಾಡುವುದು ನಿಜವಾಗಿಯೂ ಸುಲಭ. ಆದ್ದರಿಂದ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸುತ್ತಾನೆ.

ಗುಜರಾತ್ ಟೈಟನ್ಸ್‌ ಸಂಭಾವ್ಯ ಪ್ಲೇಯಿಂಗ್ 11

ಗುಜರಾತ್ ಟೈಟನ್ಸ್‌ ಸಂಭಾವ್ಯ ಪ್ಲೇಯಿಂಗ್ 11

ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ವಿಜಯ್ ಶಂಖರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲ್ಯೂಕಿ ಫರ್ಗುಸನ್, ವರುಣ್ ಆ್ಯರೊನ್, ಮೊಹಮ್ಮದ್ ಶಮಿ

ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ಪ್ಲೇಯಿಂಗ್ 11

ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ಪ್ಲೇಯಿಂಗ್ 11

ಪೃಥ್ವಿ ಶಾ, ಟಿಮ್ ಸೀಫರ್ಟ್, ರಿಷಭ್ ಪಂತ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್ ಕುಲ್‌ದೀಪ್ ಯಾದವ್, ಮುಸ್ತಫಿಜುರ್ ರಹಮಾನ್, ಲುಂಗಿ ಎನ್‌ಗಿಡಿ

Story first published: Friday, April 1, 2022, 18:36 [IST]
Other articles published on Apr 1, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+