Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs KKR: ಕೆಕೆಆರ್ ವಿರುದ್ಧ ಆಡುತ್ತಿಲ್ಲ ಜಿಟಿ ನಾಯಕ ಹಾರ್ದಿಕ್: ಕಾರಣ ಇಲ್ಲಿದೆ

ಗುಜರಾತ್ ಟೈಟನ್ಸ್ ತಂಡ ಭಾನುವಾರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣೆಸಾಟ ನಡೆಸುತ್ತಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದೆ. ಆದರೆ ಈ ಪಂದ್ಯದಲ್ಲಿ ಗುಜರಾತ್ ಟೈಮನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದಿಲ್ಲ. ಹಾರ್ದಿಕ್ ಬದಲಿಗೆ ರಶೀದ್ ಖಾನ್ ತಂಡವನ್ನು ಮುನ್ನಡೆಸುವ ಹೊಣೆ ಹೊತ್ತಿದ್ದಾರೆ.

ಇನ್ನು ಟಾಸ್ ಸಂದರ್ಭದಲ್ಲಿ ಹಂಗಾಮಿ ನಾಯಕ ರಶೀದ್ ಖಾನ್ ಹಾರ್ದಿಕ್ ಪಾಂಡ್ಯ ಅಲಭ್ಯತೆಗೆ ಕಾರಣ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ಈ ಪಂದ್ಯದಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ ಎಂದು ರಶೀದ್ ಖಾನ್ ಮಾಹಿತಿ ನೀಡಿದರು. ಹಾಗಾಗಿ ಹಾರ್ದಿಕ್ ಪಾಂಡ್ಯ ಬದಲಿಗೆ ವಿಜಯ್ ಶಂಕರ್ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

GT vs KKR: Hardik Pandya not playing against KKR; Here is the reason

"ಹಾರ್ದಿಕ್ ಸ್ವಲ್ಪ ಅನಾರೋಗ್ಯಕ್ಕೆ ಒಳಗಾಗಿದ್ದು ಅವರ ವಿಚಾರವಾಗಿ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಹಾಗಾಗಿ ಈ ಪಂದ್ಯದಲ್ಲಿ ಅವರು ಆಡುತ್ತಿಲ್ಲ. ತಂಡವಾಘಿ ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತಿದ್ದೇವೆ. ಉತ್ತಮವಾಗಿ ಬ್ಯಾಟಿಂಗ್ ನಡೆಸಿ ಒಲ್ಳೆಯ ಮೊತ್ತದೊಂದಿಗೆ ಒತ್ತಡ ಹೇರುವ ಪ್ರಯತ್ನ ನಡೆಸಲಿದ್ದೇವೆ. ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು ಹಾರ್ದಿಕ್ ಪಾಂಡ್ಯ ಬದಲಿಗೆ ವಿಜಯ್ ಶಂಕರ್ ಸ್ಥಾನ ಪಡೆದುಕೊಂಡಿದ್ದಾರೆ" ಎಂದು ಮಾಹಿತಿ ನೀಡಿದರು ಹಂಗಾಮಿ ನಾಯಕ ರಶೀದ್ ಖಾನ್.

ಹಾಲಿ ಚಾಂಪಿಯನ್ ಆಗಿರುವ ಗುಜರಾತ್ ಟೈಟನ್ಸ್ ತಂಡಕ್ಕೆ ಈ ಪಂದ್ಯದಲ್ಲಿ ತವರಿನ ಲಾಭ ದೊರೆಯಲಿದ್ದು ತವರಿನ ಪ್ರೇಕ್ಷಕರನ ಸಮ್ಮುಖದಲ್ಲಿ ಕಣಕ್ಕಿಳಿತ್ತಿದೆ. ಅಲ್ಲದೆ ತಂಡದ ಬಹುತೇಕ ಆಟಗಾರರು ಉತ್ತಮ ಲಯದಲ್ಲಿದ್ದು ಕಳೆದ ವರ್ಷದ ಪ್ರದರ್ಶನವನ್ನು ಈ ಆವೃತ್ತಿಯಲ್ಲಿಯೂ ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.

ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಂಡಿದ್ದರೂ ಎರಡನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಭರ್ಜರಿಯಾಗಿ ಗೆದ್ದುಕೊಂಡಿತ್ತು. ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಪ್ರದರ್ಶನ ಮಾತ್ರ ಚಿಂತೆ ಹೆಚ್ಚಿಸಿದ್ದು ಈ ವಿಭಾಗ ಲಯ ಕಂಡುಕೊಂಡರೆ ಮತ್ತಷ್ಟು ಆತ್ಮವಿಶ್ವಾಸ ಮೂಡಿಸಲಿದೆ. ಹೀಗಾಗಿ ಈ ಪಂದ್ಯದಲ್ಲಿ ಕೆಕೆಆರ್ ಪ್ರದರ್ಶನ ಕುತೂಹಲ ಕೆರಳಿಸಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್(ನಾಯಕ), ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್

Story first published: Sunday, April 9, 2023, 16:07 [IST]
Other articles published on Apr 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+