For Quick Alerts
ALLOW NOTIFICATIONS  
For Daily Alerts
 

GT vs MI IPL 2025: ಮೊದಲ ಗೆಲುವಿನ ಹುಡುಕಾಟದಲ್ಲಿ ಗುಜರಾತ್, ಮುಂಬೈ

ಇಂಡಿಯನ್ ಪ್ರೀಮಿಯರ್ ಲೀಗ್‌ ಆರಂಭವಾಗಿದೆ. ಹಲವು ತಂಡಗಳು ಭರ್ಜರಿ ಪ್ರದರ್ಶನ ನಿಡುತ್ತಿವೆ. ಶನಿವಾರ ಅಹಮದಾಬಾದ್ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಗುಜರಾತ್ ಟೈಟನ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಮೊದಲ ಜಯದ ಕನಸಿನಲ್ಲಿವೆ. ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ.

ನರೇಂದ್ರ ಮೋದಿ ಅಂಗಳದಲ್ಲಿ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿವೆ. ಈಗಾಗಲೇ ಐಪಿಎಲ್‌ನಲ್ಲಿ ಎರಡೂ ತಂಡಗಳು 5 ಬಾರಿ ಮುಖಾಮುಖಿ ಆಗಿದ್ದು ಗುಜರಾತ್‌ 3, ಮುಂಬೈ 2 ಪಂದ್ಯಗಳನ್ನು ಗೆದ್ದಿದೆ. ಈ ಇಬ್ಬರ ನಡುವಿನ ಕಾದಾಟದಲ್ಲಿ 218 ರನ್‌ ಗರಿಷ್ಠ ಮೊತ್ತವಾಗಿದೆ.

GT vs MI IPL 2025 Gujarat Titans Mumbai Indians Battle for First Win in Ahmedabad

ಹೇಗಿರಲಿದೆ ಪಿಚ್‌?

ನರೇಂದ್ರ ಮೋದಿ ಮೈದಾನ ಬ್ಯಾಟ್ಸಮನ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಈ ಮೈದಾನದಲ್ಲಿ ದೊಡ್ಡ ಸ್ಕೋರ್‌ಗಳು ಬರುತ್ತವೆ. ಈ ಮೈದಾನದಲ್ಲಿ 36 ಐಪಿಎಲ್‌ ಪಂದ್ಯಗಳನ್ನು ಆಡಲಾಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 16 ಬಾರಿ, 2ನೇ ಬಾರಿ ಬ್ಯಾಟ್ ಮಾಡಿದ ತಂಡ 20 ಬಾರಿ ಪಂದ್ಯ ಗೆದಿದೆ. ಟಾಸ್‌ ಗೆದ್ದ ತಂಡ 17 ಬಾರಿ ಪಂದ್ಯ ಗೆದ್ದಿದೆ. ಇನ್ನು ಈ ಮೈದಾನದಲ್ಲಿ 160 ರಿಂದ 170 ಸರಾಸರಿ ರನ್ ಆಗಿದೆ.

ಶುಭಮನ್‌ ಗಿಲ್ ಆಕರ್ಷಣೆ

ತವರಿನ ಅಂಗಳದಲ್ಲಿ ಈ ಆವೃತ್ತಿಯ ಎರಡನೇ ಪಂದ್ಯವನ್ನು ಆಡುತ್ತಿರುವ ಗುಜರಾತ್‌ ಗೆಲುವಿನ ಉತ್ಸಾಹದಲ್ಲಿದೆ. ಪಂಜಾಬ್‌ ವಿರುದ್ಧ ಮಾಡಿದ ತಪ್ಪುಗಳಿಂದ ಜಿಟಿ ಪಾಠ ಕಲಿತು ಪುಟಿದೇಳುವ ಅನಿವಾರ್ಯತೆ ಇದೆ. ಮುಂಬೈ ವಿರುದ್ಧ ಶುಭಮನ್‌ ಗಿಲ್ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಗಿಲ್ ಮುಂಬೈ ವಿರುದ್ಧ ಇಲ್ಲಿಯವರೆಗೆ 12 ಪಂದ್ಯಗಳಲ್ಲಿ 36.67 ರ ಸರಾಸರಿಯಲ್ಲಿ 440 ರನ್ ಬಾರಿಸಿದ್ದಾರೆ. ಗಿಲ್ ಮುಂಬೈ ಇಂಡಿಯನ್ಸ್ ವಿರುದ್ಧ ಒಂದು ಶತಕ ಮತ್ತು ಮೂರು ಅರ್ಧಶತಕ ಸಿಡಿಸಿದ್ದಾರೆ. ಸಾಯಿ ಸುದರ್ಶನ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಜೋಸ್ ಬಟ್ಲರ್‌ ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದು ಹುಮ್ಮಸ್ಸಿನಲ್ಲಿದ್ದಾರೆ. ಉಳಿದ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ.

GT vs MI IPL 2025 Gujarat Titans Mumbai Indians Battle for First Win in Ahmedabad

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರನ್ ನೀಡಿ ಕೈ ಸುಟ್ಟುಕೊಂಡಿದ್ದ ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಅರ್ಷದ್ ಖಾನ್, ಪ್ರಸೀದ್ಧ ಕೃಷ್ಣ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಸಾಯಿ ಕಿಶೋರ್ ತಮ್ಮ ಬಿಗುವಿನ ದಾಳಿಯನ್ನು ಸಂಘಟಿಸಬೇಕಿದೆ.

ಗುಜರಾತ್ ಸಂಭಾವ್ಯ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಜವಾಬ್ದಾರಿ ಅರಿತು ಆಡಬೇಕಿದೆ ಸ್ಟಾರ್ಸ್

ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್‌ಗಳು ತಾವಾಡಿದ ಮೊದಲ ಪಂದ್ಯದಲ್ಲಿ ರನ್‌ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸಮಯೋಚಿತ ಆಟವನ್ನು ಆಡಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ವಿಲ್ ಜಾಕ್ಸ್‌ ತಮ್ಮ ಘನತೆಗೆ ತಕ್ಕ ಆಟವನ್ನು ಆಡಬೇಕಿದೆ.

ಬೌಲಿಂಗ್ ವಿಭಾಗದಲ್ಲಿ ವಿಘ್ನೇಶ್ ಪುತ್ತುರ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರಲಿವೆ. ಇವರು ಆಡಿದ ಮೊದಲ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದು ಅಬ್ಬರಿಸಿದ್ದರು. ಇವರು ಆಡುವ ಬಳಗದಲ್ಲಿ ಸ್ಥಾನ ಪಡೆಯಬಹುದು. ಉಳಿದಂತೆ ವೇಗಿಗಳಾದ ಟ್ರೆಂಟ್ ಬೌಲ್ಟ್‌, ದೀಪಕ್ ಚಹಾರ್, ಮಿಚೆಲ್ ಸ್ಯಾಂಟ್ನರ್‌ ಸರಿಯಾದ ಸ್ಥಳದಲ್ಲಿ ಬೌಲ್ ಮಾಡಿ ಎದುರಾಳಿಗಳನ್ನು ಕಾಡಬೇಕಿದೆ.

ಮುಂಬೈ ಸಂಭಾವ್ಯ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಸತ್ಯನಾರಾಯಣ ರಾಜು, ವಿಘ್ನೇಶ್ ಪುತ್ತೂರು.

Story first published: Saturday, March 29, 2025, 7:10 [IST]
Other articles published on Mar 29, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+