Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs MI: ಅಂಕ ಪಟ್ಟಿಯಲ್ಲಿ ಬಡ್ತಿಗಾಗಿ ಗುಜರಾತ್, ಮುಂಬೈ ಫೈಟ್‌

ಅಹಮದಾಬಾದ್: 19ನೇ ಆವೃತ್ತಿಯ ಐಪಿಎಲ್‌ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಮುಂಬೈ ಪ್ಲ್ಯಾನ್ ಮಾಡಿಕೊಂಡಿದೆ. ಸತತ ನಾಲ್ಕು ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್‌ 2 ಅಂಕ ಕಲೆಹಾಕುವ ವಿಶ್ವಾಸದಲ್ಲಿದೆ. ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಈ ಆಟಗಾರರ ಕದನ ಕುತೂಹಲ ಮೂಡಿಸಿದೆ.

ಗುಜರಾತ್ ಹಾಗೂ ಮುಂಬೈ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ 8 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೈಟಾನ್ಸ್‌ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮುಂಬೈ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್‌ ಅಂಕಪಟ್ಟಿಯಲ್ಲಿ ಸದ್ಯ 9ನೇ ಸ್ಥಾನದಲ್ಲಿದ್ದು, ಗುಜರಾತ್‌ 6ನೇ ಸ್ಥಾನದಲ್ಲಿದೆ.

GT vs MI

ಗುಜರಾತ್ ತಂಡದ ಆರಂಭಿಕರಾಗಿ ಕಾಣಿಸಿಕೊಳ್ಳುವ ನಾಯಕ ಶುಭಮನ್‌ ಗಿಲ್ ಹಾಗೂ ಸಾಯಿ ಸುದರ್ಶನ್‌ ತಂಡಕ್ಕೆ ಆಧಾರವಾಗಬಲ್ಲರು. ಕಳೆದ ಆವೃತ್ತಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಸಾಯಿ ಸುದರ್ಶನ್‌ ಈ ಬಾರಿ ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಆದರೆ ಗಿಲ್‌ ಕಳೆದ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ 50 ಎಸೆತಗಳಲ್ಲಿ 86 ರನ್‌ ಬಾರಿಸಿ ಭರವಸೆ ಮೂಡಿಸಿದ್ದಾರೆ. ಹೀಗಾಗಿ ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಭರವಸೆಯ ಬ್ಯಾಟರ್ ಜೋಸ್ ಬಟ್ಲರ್ ಸಹ ಫಾರ್ಮ್‌ನಲ್ಲಿದ್ದಾರೆ.

ಬೌಲರ್‌ಗಳ ಬಲ

ಆಲ್‌ರೌಂಡರ್‌ ರೂಪದಲ್ಲಿ ಕಾಣಿಸಿಕೊಳ್ಳುವ ವಾಷಿಂಗ್ಟನ್‌ ಸುಂದರ್‌, ಗ್ಲೆನ್ ಫಿಲಿಪ್ಸ್‌ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಆಟಗಾರರು. ಫಿನಿಷರ್ ಪಾತ್ರದಲ್ಲಿ ಶಾರೂಖ್ ಖಾನ್‌ ಹಾಗೂ ರಾಹುಲ್ ತೆವಟಿಯಾ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಿ ತಂಡದ ಗೆಲುವಿನಲ್ಲಿ ಮಿಂಚಬಹುದು. ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ ಬಿಗುವಿನ ದಾಳಿ ನಡೆಸಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಬಲ್ಲರು. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ರಶೀದ್ ಖಾನ್‌ ತಂಡಕ್ಕೆ ಆಧಾರವಾಗಬಲ್ಲರು.

GT vs MI

ಗೆಲುವಿನ ಒತ್ತಡದಲ್ಲಿ ಮುಂಬೈ

ಕಳೆದ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಶತಕ ಬಾರಿಸಿದ್ದು ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ರಯಾನ್‌ ರಿಕಲ್ಟನ್‌ ಜವಾಬ್ದಾರಿ ಅರಿತು ಬ್ಯಾಟ್ ಮಾಡಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ನಮನ್ ಧೀರ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಸ್ಥಿರ ಬ್ಯಾಟಿಂಗ್ ನಡೆಸುವ ಅನಿವಾರ್ಯತೆ ಇದೆ. ಬೌಲಿಂಗ್‌ನಲ್ಲಿ ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ತಮ್ಮ ವೇಗದ ಬೌಲಿಂಗ್ ದಾಳಿಯ ಮೂಲಕ ಮಿಂಚಬೇಕಿದೆ. ಅಂದಾಗ ಮುಂಬೈ ಎರಡನೇ ಗೆಲುವಿನ ಕನಸು ನನಸಾಗುತ್ತದೆ. ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಪಂದ್ಯದ ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌
ಪಂದ್ಯದ ಸಮಯ: ಸೋಮವಾರ ಸಂಜೆ 7.30ಕ್ಕೆ

Story first published: Sunday, April 19, 2026, 19:01 [IST]
Other articles published on Apr 19, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+