For Quick Alerts
ALLOW NOTIFICATIONS  
For Daily Alerts
 

GT vs PBKS: ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಗುರುವಾರ, ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

GT vs PBKS IPL 2024 Gujarat Titans vs Punjab Kings Match Toss Report And Playing 11

ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲನ್ನು ಕಂಡಿರುವ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಅನುಭವಿಸಿದ್ದು, ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ.

GT vs PBKS IPL 2024 Gujarat Titans vs Punjab Kings Match Toss Report And Playing 11

ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ಮೆಚ್ಚಿನ ತಂಡವಾಗಿ ಕಾಣುತ್ತಿದ್ದರೂ, ಪಂದ್ಯದ ವೇಳೆ ಎದುರಾಳಿ ತಂಡವನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಪಂದ್ಯವು ಪಂಜಾಬ್‌ನ ಬ್ಯಾಟಿಂಗ್‌ ಮತ್ತು ಗುಜರಾತ್‌ನ ಬೌಲಿಂಗ್ ನಡುವಿನ ಹೋರಾಟವಾಗಿದೆ.

ಜಿಟಿ ಮತ್ತು ಪಿಬಿಕೆಎಸ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.

ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ ಆಡುವ 11ರ ಬಳಗ

ಗುಜರಾತ್ ಟೈಟನ್ಸ್: ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಜ್ಮತುಲ್ಲಾ ಒಮರ್ಜಾಯ್, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮದ್, ಉಮೇಶ್ ಯಾದವ್, ದರ್ಶನ್ ನಲ್ಕಂಡೆ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಝಾ, ಸ್ಯಾಮ್ ಕರ್ರಾನ್, ಶಶಾಂಕ್ ಸಿಂಗ್, ಹರ್ಷಲ್ ಪಟೇಲ್, ಹರ್ಪೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಹಾರ್.

Story first published: Thursday, April 4, 2024, 19:21 [IST]
Other articles published on Apr 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+