For Quick Alerts
ALLOW NOTIFICATIONS  
For Daily Alerts
 

GT vs PBKS: ಶಶಾಂಕ್ ಸಿಂಗ್ ಭರ್ಜರಿ ಬ್ಯಾಟಿಂಗ್; ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ರೋಚಕ ಜಯ

ಗುರುವಾರ, ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ ಶುಭ್ಮನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ಗಳನ್ನು ಗಳಿಸಿತ್ತು.

GT vs PBKS IPL 2024 Punjab Kings Beat Gujarat Titans By 3 Wickets In Thriller 17th Match

200 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಅಶುತೋಷ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ಸಾಹಸದ ನೆರವಿನಿಂದ 19.5 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿ ಭರ್ಜರಿ ಗೆಲುವು ದಾಖಲಿಸಿತು.

ಪಂದ್ಯದ ರೋಚಕ ತಿರುವಿನಲ್ಲಿ ಕೊನೆಯ ಓವರ್‌ನಲ್ಲಿ 7 ರನ್‌ಗಳು ಬೇಕಾಗಿದ್ದಾಗ ಪಂಜಾಬ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಮ್ಯಾಚ್-ವಿನ್ನಿಂಗ್ ಪ್ರದರ್ಶನ ನೀಡಿದರು.

ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ಶಿಖರ್ ಧವನ್ ಮತ್ತು ಜಾನಿ ಬೈರ್‌ಸ್ಟೋವ್ ಉತ್ತಮ ಆರಂಭ ನೀಡಲು ವಿಫಲರಾದರು. ಈ ಜೋಡಿ ಮೊದಲ ವಿಕೆಟ್‌ಗೆ 1.1 ಓವರ್‌ಗಳಲ್ಲಿ 13 ರನ್ ಸೇರಿಸಿದರು. ಶಿಖರ್ ಧವನ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

GT vs PBKS IPL 2024 Punjab Kings Beat Gujarat Titans By 3 Wickets In Thriller 17th Match

ನಂತರ ಬಂದ ಪ್ರಭ್‌ಸಿಮ್ರಾನ್ ಸಿಂಗ್ 24 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 35 ರನ್ ಬಾರಿಸಿ ಔಟಾದರೆ, ಆರಂಭಿಕ ಬ್ಯಾಟರ್ ಜಾನಿ ಬೈರ್‌ಸ್ಟೋವ್ 13 ಎಸೆತಗಳಲ್ಲಿ 4 ಬೌಂಡರಿ ಸಮೇತ 22 ರನ್ ಗಳಿಸಿ ವಿಕೆಟ್ ನೀಡಿದರು.

ಅಲ್‌ರೌಂಡರ್‌ಗಳಾದ ಸ್ಯಾಮ್ ಕರ್ರಾನ್ 5 ರನ್ ಮತ್ತು ಸಿಕಂದರ್ ರಝಾ 15 ರನ್ ಗಳಿಸಿ ಔಟಾದರು. ಜಿತೇಶ್ ಶರ್ಮಾ 8 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 16 ರನ್ ಗಳಿಸಿದರು.

ಪಂದ್ಯ-ವಿಜೇತ ಪ್ರದರ್ಶನ ನೀಡಿದ ಶಶಾಂಕ್ ಸಿಂಗ್ 29 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 61 ರನ್ ಬಾರಿಸಿದರು. ಇವರಿಗೆ ಸಾಥ್ ನೀಡಿದ ಅಶುತೋಷ್ ಶರ್ಮಾ 17 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 31 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಲು ನೆರವಾದರು.

GT vs PBKS IPL 2024 Punjab Kings Beat Gujarat Titans By 3 Wickets In Thriller 17th Match

ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ನೂರ್ ಅಹ್ಮದ್ 4 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಮೋಹಿತ್ ಶರ್ಮಾ ಮತ್ತು ದರ್ಶನ್ ನಾಲ್ಕಂಡೆ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಗುಜರಾತ್ ಟೈಟನ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಿಮಾನ್ ಸಹಾ ಉತ್ತಮ ಆರಂಭ ನೀಡಲಾಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 3 ಓವರ್‌ಗಳಲ್ಲಿ 29 ರನ್‌ಗಳ ಜೊತೆಯಾಟವಾಡಿದರು. ಈ ವೇಳೆ 13 ಎಸೆತಗಳಲ್ಲಿ 2 ಬೌಂಡರಿಗಳ ಸಹಿತ 11 ರನ್ ಗಳಿಸಿದ್ದ ವೃದ್ಧಿಮಾನ್ ಸಹಾ ಔಟಾದರು.

ನಂತರ ಬಂದ ಕೇನ್ ವಿಲಿಯಮ್ಸನ್ 22 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 26 ರನ್ ಗಳಿಸಿದರು. ಬಳಿಕ ಸಾಯಿ ಸುದರ್ಶನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ 19 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ನೆರವಿನಿಂದ 33 ರನ್ ಬಾರಿಸಿದರು.

ಇನ್ನು ನಾಯಕ ಶುಭ್ಮನ್ ಗಿಲ್ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ 89 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಗಿಲ್‌ಗೆ ಸಾಥ್ ನೀಡಿದ ರಾಹುಲ್ ತೆವಾಟಿಯಾ 8 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 23 ರನ್ ಗಳಿಸಿದರೆ, ವಿಜಯ್ ಶಂಕರ್ 10 ಎಸೆತಗಳಲ್ಲಿ 8 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಕಗಿಸೊ ರಬಾಡ 4 ಓವರ್‌ಗಳಲ್ಲಿ 44 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಪ್ರೀತ್ ಬ್ರಾರ್ ಮತ್ತು ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Thursday, April 4, 2024, 23:27 [IST]
Other articles published on Apr 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+