GT vs PBKS: ಶುಭ್ಮನ್ ಗಿಲ್ ಭರ್ಜರಿ ಅರ್ಧಶತಕ; ಪಂಜಾಬ್ ಕಿಂಗ್ಸ್‌ಗೆ ಸವಾಲಿನ ಗುರಿ ನೀಡಿದ ಗುಜರಾತ್ ಟೈಟನ್ಸ್
ಗುರುವಾರ, ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ಶುಭ್ಮನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ಗಳನ್ನು ಗಳಿಸಿದ್ದು, ಪಂಜಾಬ್ ಕಿಂಗ್ಸ್ ತಂಡಕ್ಕೆ 200 ರನ್‌ಗಳ ಗುರಿ ನೀಡಿದೆ.

ಗುಜರಾತ್ ಟೈಟನ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಿಮಾನ್ ಸಹಾ ಉತ್ತಮ ಆರಂಭ ನೀಡಲು ಪ್ರಯತ್ನಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 3 ಓವರ್‌ಗಳಲ್ಲಿ 29 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 13 ಎಸೆತಗಳಲ್ಲಿ 2 ಬೌಂಡರಿಗಳ ಸಹಿತ 11 ರನ್ ಗಳಿಸಿದ್ದ ವೃದ್ಧಿಮಾನ್ ಸಹಾ ಔಟಾದರು.
ನಂತರ ಬಂದ ಕೇನ್ ವಿಲಿಯಮ್ಸನ್ ನಿಧಾನಗತಿ ಆಟಕ್ಕೆ ಮೊರೆ ಹೋದರು ಮತ್ತು 22 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 26 ರನ್ ಗಳಿಸಿದರು. ಬಳಿಕ ಕ್ರೀಸ್‌ಗೆ ಬಂದ ಸಾಯಿ ಸುದರ್ಶನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು 19 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ನೆರವಿನಿಂದ 33 ರನ್ ಬಾರಿಸಿದರು.
ಇನ್ನು ಕೊನೆಯವರೆಗೂ ಬ್ಯಾಟಿಂಗ್ ಮಾಡಿದ ನಾಯಕ ಶುಭ್ಮನ್ ಗಿಲ್ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 89 ರನ್ ಬಾರಿಸಿದರು. ಕೊನೆಯಲ್ಲಿ ಗಿಲ್‌ಗೆ ಸಾಥ್ ನೀಡಿದ ರಾಹುಲ್ ತೆವಾಟಿಯಾ 8 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 23 ರನ್ ಗಳಿಸಿದರೆ, ವಿಜಯ್ ಶಂಕರ್ 10 ಎಸೆತಗಳಲ್ಲಿ 8 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಕಗಿಸೊ ರಬಾಡ 4 ಓವರ್‌ಗಳಲ್ಲಿ 44 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಪ್ರೀತ್ ಬ್ರಾರ್ ಮತ್ತು ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications