Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs PBKS IPL 2024: ಗುಜರಾತ್‌ vs ಪಂಜಾಬ್‌ ಮುಖಾಮುಖಿ: ಟಾಸ್, ಆಡುವ 11ರ ಬಳಗದ ವರದಿ

ಭಾನುವಾರ ಏಪ್ರಿಲ್‌ 21ರ, ಡಬಲ್ ಡಕ್ಕರ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ ಎರಡನೇ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ (ಜಿಟಿ) ಮತ್ತು ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್) ತಂಡಗಳು ಮುಖಾಮುಖಿಯಾಗಿವೆ. ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂ ಪಂದ್ಯ ಆರಂಭವಾಗಿದೆ.

ಟಾಸ್ ಗೆದ್ದ ಪಂಜಾಬ್‌ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರ್ರಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್‌ ಟೈಟನ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

GT vs PBKS IPL 2024 Punjab Kings vs Gujarat Titans Match Toss Report And Playing 11

ಐಪಿಎಲ್‌ ನಲ್ಲಿ ಕಳೆದ ಎರಡು ಋತುಗಳಿಂದ ಭರ್ಜರಿ ಪ್ರದರ್ಶನ ನೀಡಿತ್ತ ಬಂದಿರುವ ಗುಜರಾತ್‌ ಟೈಟನ್ಸ್‌ ಈ ಆವೃತ್ತಿಯಲ್ಲಿ ಆಡಿರುವ 7 ಪಂದ್ಯದಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ಪಂಜಾಬ್‌ ಕಿಂಗ್ಸ್‌ ಕೂಡ ಏಳು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡಿದೆ. ಹೀಗಾಗಿ ಇಂದಿನ ಪಂದ್ಯ ಎರಡು ತಂಡಗಳಿಗೂ ಗೆಲ್ಲುವ ಅನಿವಾರ್ಯವಿದೆ. ಗೆಲ್ಲುವ ತಂಡ ಫ್ಲೇ ಆಪ್‌ ರೇಸ್‌ನಲ್ಲಿ ಮುಂದೆ ಸಾಗಲಿದೆ.

ಡಿಸಿ vs ಪಿಬಿಕೆಎಸ್ ಪಂದ್ಯದ ಟಿವಿ,ಲೈವ್‌ ಸ್ಟ್ರೀಮಿಂಗ್‌ ವಿವರ:

ಗುಜರಾತ್‌ ಟೈಟನ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ ಐಪಿಎಲ್‌ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್‌ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಆಗಲಿದೆ.

ಡಿಸಿ vs ಪಿಬಿಕೆಎಸ್ ಆಡುವ 11ರ ಬಳಗ:

ಗುಜರಾತ್‌ ಟೈಟನ್ಸ್‌ ತಂಡ: ವೃದ್ಧಿಮಾನ್ ಸಹಾ(ವಿ.ಕೀ), ಶುಭ್ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ

ಪಂಜಾಬ್‌ ಕಿಂಗ್ಸ್‌ ತಂಡ: ಸ್ಯಾಮ್ ಕರ್ರನ್(ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ರಿಲೀ ರೊಸೊವ್, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ(ವಿ.ಕೀ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್

Story first published: Sunday, April 21, 2024, 19:14 [IST]
Other articles published on Apr 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+