
ಐಪಿಎಲ್ 2022ರ 16ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಭಾನುಕಾ ರಾಜಪಕ್ಷೆ ಆಡುವ ಬಳಗದಿಂದ ಹೊರಗುಳಿದಿದ್ದು ಜಾನಿ ಬೈಟ್‌ಸ್ಟೀವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಗುಜರಾತ್ ಟೈಟನ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು ವಿಜಯ್ ಶಂಕರ್ ಹಾಗೂ ವರುಣ್ ಅರೋನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನದಲ್ಲಿ ಸಾಯಿ ಸುದರ್ಶನ ಹಾಗೂ ದರ್ಶನ್ ನಲ್ಕಂಡೆ ಪದಾರ್ಪಣೆ ಮಾಡಿದ್ದಾರೆ.

ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ
ಬೆಂಚ್: ವಿಜಯ್ ಶಂಕರ್, ವರುಣ್ ಆರೋನ್, ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಬೆಂಚ್: ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ಅನ್ಶ್ ಪಟೇಲ್, ರಾಜ್ ಬಾವಾ