ಮುಂಬೈ ಇಂಡಿಯನ್ಸ್‌ಗೆ 168 ರನ್ ಗುರಿ ನೀಡಿದ ಗುಜರಾತ್
ವಡೋದರಾ: ಭರವಸೆಯ ಆಟಗಾರ್ತಿಯರಾದ ಜಾರ್ಜಿಯಾ ವೇರ್‌ಹ್ಯಾಮ್ ಹಾಗೂ ಆಶ್ಲೀ ಗಾರ್ಡ್ನರ್ ಬಾರಿಸಿದ ಭರ್ಜರಿ ಆಟದ ನೆರವಿನಿಂದ ಗುಜರಾತ್ ಜೈಂಟ್ಸ್ ನಾಲ್ಕನೇ ಆವೃತ್ತಿಯ ಮಹಿಳಾ ಆವೃತ್ತಿಯ ಪ್ರೀಮಿಯರ್ ಲೀಗ್‌ನಲ್ಲಿ 168 ರನ್ ಮೊತ್ತದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ನೀಡಿದೆ.
ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ತಂಡದ ಆರಂಭಿಕ ಆಟಗಾರ್ತಿ ಬೆತ್ ಮೂನಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಗುಜರಾತ್ ಜೈಂಟ್ಸ್ ಮೊದಲ ವಿಕೆಟ್‌ಗೆ 21 ರನ್ ಸೇರಿಸಿತು.

ಎರಡನೇ ವಿಕೆಟ್‌ಗೆ ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ ಹಾಗೂ ಅನುಷ್ಕಾ ಶರ್ಮಾ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಯಿತು. ಈ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್ ಬೀಳದಂತೆ ಕಳೆದುಕೊಳ್ಳದಂತೆ ನೋಡಿಕೊಳ್ಳುವಲ್ಲಿ ಸಫಲರಾದರು. ಎರಡನೇ ವಿಕೆಟ್‌ಗೆ ಈ ಜೋಡಿ 43 ಎಸೆತಗಳಲ್ಲಿ 48 ರನ್ ಸೇರಿಸಿತು. ಈ ಹಂತದಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 33 ರನ್ ಬಾರಿಸಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
71 ರನ್ ಜೊತೆಯಾಟ
ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ 21 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 25 ರನ್ ಬಾರಿಸಿ ಔಟ್ ಆದರು. 4ನೇ ವಿಕೆಟ್‌ಗೆ ಜಾರ್ಜಿಯಾ ವೇರ್‌ಹ್ಯಾಮ್ ಹಾಗೂ ಆಶ್ಲೀ ಗಾರ್ಡ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಗುಜರಾತ್ ಜೈಂಟ್ಸ್ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕುವತ್ತ ಚಿತ್ತ ನೆಡುವಂತೆ ಮಾಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಮುಂಬೈ ಬೌಲರ್‌ಗಳ ವಿಫಲರಾದರು. ಇದರ ಸಂಪೂರ್ಣ ಲಾಭ ಪಡೆದ ಜಾರ್ಜಿಯಾ ವೇರ್‌ಹ್ಯಾಮ್ ಹಾಗೂ ಆಶ್ಲೀ ಗಾರ್ಡ್ನರ್ 43 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಭರ್ಜರಿಯಾಗಿ ಆಡುತ್ತಿದ್ದ ನಾಯಕಿ ಆಶ್ಲೀ ಗಾರ್ಡ್ನರ್ 46 ರನ್ ಬಾರಿಸಿದ್ದಾಗ ಔಟ್ ಆದರು. ಇವರ ಮನಮೋಹಕ ಇನಿಂಗ್ಸ್‌ನಲ್ಲಿ 7 ಬೌಂಡರಿ, 1 ಸಿಕ್ಸರ್ ಸೇರಿವೆ.
ಜಾರ್ಜಿಯಾ ವೇರ್‌ಹ್ಯಾಮ್ ತಮ್ಮ ಕ್ಲಾಸ್ ಆಟದ ಪ್ರದರ್ಶನ ನೀಡಿದರು. ಇವರು 169.23 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ಇವರು 26 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 44 ರನ್ ಬಾರಿಸಿದರು. ಭಾರತಿ ಫಲ್ಮುಲಿ ಅಜೇಯ 5 ರನ್ ಸಿಡಿಸಿದರು. ಅಂತಿಮವಾಗಿ ಗುಜರಾತ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 167 ರನ್ ಸೇರಿಸಿತು. ಮುಂಬೈ ಇಂಡಿಯನ್ಸ್ ಪರ ಅಮೇಲಿಯಾ ಕೆರ್ 2 ವಿಕೆಟ್ ಪಡೆದರು.
ಗೆಲುವು ಅನಿವಾರ್ಯ
168 ರನ್ ಗುರಿ ಮುಟ್ಟುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಅನಿವಾರ್ಯವಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಆಸೆಯನ್ನು ಮುಂಬೈ ಹೊಂದಿದೆ. ಸದ್ಯ ಮುಂಬೈ ಆಡಿರುವ 7 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿದ್ದು 6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ 8 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications