GT vs RR IPL 2025: ರಾಜಸ್ಥಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
ಪ್ಲೇ ಆಫ್‌ಗೆ ಹತ್ತಿರವಾಗುವ ಕನಸಿನೊಂದಿಗೆ ಗುಜರಾತ್ ಟೈಟನ್ಸ್ ಸೋಮವಾರ ಕಣಕ್ಕೆ ಇಳಿಯಲಿದೆ. ಜೈಪುರ್‌ದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಗುಜರಾತ್ ಟೈಟನ್ಸ್, ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡದ ಸವಾಲು ಎದುರಿಸಲಿದೆ. ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡ ಮುಂದಿನ ಹಂತಕ್ಕೆ ಪ್ರವೇಶ ಪಡೆಯಲು ಈ ಪಂದ್ಯ ಮಹತ್ವದಾಗಿದೆ.
ಉಭಯ ತಂಡದಲ್ಲೂ ಸ್ಟಾರ್ ಆಟಗಾರರು ಇದ್ದು ರೋಚಕತೆ ಹೆಚ್ಚಿಸಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಗುಜರಾತ್ ಮೈಲುಗೈ ಸಾಧಿಸಿದೆ. ಉಭಯ ತಂಡಗಳು ಈಗಾಗಲೇ 7 ಬಾರಿ ಮುಖಾಮುಖಿ ಆಗಿದ್ದು ಜಿಟಿ 6 ಬಾರಿ ಜಯ ಸಾಧಿಸಿದ್ದು, ರಾಜಸ್ಥಾನ 1 ಗೆಲುವು ದಾಖಲಿಸಿದೆ. ಈ ಮೈದಾನದಲ್ಲಿ ಈ ವರೆಗೆ 59 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲ ಬ್ಯಾಟ್ ಮಾಡಿದ ತಂಡ 21 ಬಾರಿ, ಎರಡನೇ ಬಾರಿ ಬ್ಯಾಟ್ ಮಾಡಿದ ತಂಡ 38 ಬಾರಿ ಜಯ ಸಾಧಿಸಿದೆ. ಗುಜರಾತ್ ಟೈಟನ್ಸ್ ಸದ್ಯ 12 ಅಂಕಗಳನ್ನು ಕಲೆ ಹಾಕಿದ್ದು, ಇನ್ನು 2 ಪಂದ್ಯಗಳನ್ನು ಗೆದ್ದಲ್ಲಿ ಪ್ಲೇಆಫ್‌ಗೆ ಪ್ರವೇಶ ಪಡೆಯಬಹುದಾಗಿದೆ.

ಬ್ಯಾಟಿಂಗ್ ಚಿಂತೆ
ರಾಜಸ್ಥಾನ ರಾಯಲ್ಸ್ ಮೂರು ಸುಲಭವಾಗಿ ಗೆಲ್ಲಬಹುದಾದ ಪಂದ್ಯವನ್ನು ಕೈ ಚೆಲ್ಲಿದೆ. ಈ ಸೋಲುಗಳು ನಿಜಕ್ಕೂ ಅಭಿಮಾನಿಗಳನ್ನು ಕೆರಳಿಸಿದೆ. ಟಾಪ್ ಆರ್ಡರ್ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಿದರೂ, ಮಧ್ಯಮ ಕ್ರಮಾಂಕದ ಆಟಗಾರರು ತಂಡವನ್ನು ಗೆಲುವಿನ ದಡವನ್ನು ದಾಟಿಸುವಲ್ಲಿ ವಿಫಲರಾಗಿರುವುದು ತಂಡಕ್ಕೆ ದೊಡ್ಡ ತಲೆ ನೋವಾಗಿದೆ. ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅಮೋಘ ಫಾರ್ಮ್‌ನಲ್ಲಿದ್ದು ಬಿಗ್ ಇನಿಂಗ್ಸ್ ಕಟ್ಟುವ ಅನಿವಾರ್ಯತೆ ಇದೆ.
ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ರಾಣಾ, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್ ತಮ್ಮ ಮೇಲೆ ತಂಡ ಇಟ್ಟ ನಂನಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ. ರಾಜಸ್ಥಾನ ತಂಡದ ಬೌಲರ್‌ಗಳಾದ ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ್, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ, ತಮ್ಮ ಬಿಗುವಿನ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬೇಕಿದೆ. ಈ ಪ್ಲೇಯರ್ಸ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಶಿಸ್ತು ಬದ್ಧ ದಾಳಿ ಸಂಘಟಿಸಬೇಕಿದೆ.

ಪ್ಲೇ ಆಫ್ ಕನಸು
ಗುಜರಾತ್ ಟೈಟನ್ಸ್ ತಂಡದ ಭರವಸೆಯ ಆಟಗಾರ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಬಿಗ್ ಇನಿಂಗ್ಸ್ ಕಟ್ಟುವ ಯೋಚನೆಯಲ್ಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ ತಮ್ಮ ನೈಜ್ಯ ಆಟವನ್ನು ಆಡಿದಲ್ಲಿ ಗೆಲುವು ಫಿಕ್ಸ್. ಬಟ್ಲರ್ ತಮ್ಮ ಮಾಜಿ ತಂಡಕ್ಕೆ ತಲೆ ನೋವಾಗುವ ಸಾಧ್ಯತೆಗಳು ಹೆಚ್ಚಿವೆ. ಉಳಿದ ಆಟಗಾರರು ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ಜಯದ ಕನಸು ನನಸಾಗುತ್ತದೆ. ಗುಜರಾತ್ ತಂಡದ ಬೌಲಿಂಗ್ ಬಲಿಷ್ಠವಾಗಿದೆ. ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ್ಎದುರಾಳಿಗಳನ್ನು ಕಾಡಬಲ್ಲ ಬೌಲರ್‌ಗಳಾಗಿದ್ದಾರೆ. ಇನ್ನು ರಶೀದ್ ಖಾನ್, ಸಾಯಿ ಕಿಶೋರ್ ತಮ್ಮ ಪಿರ್ಕಿ ಮೂಲಕ ಕಾಡಲು ಸನ್ನದ್ಧರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications