GT vs MI IPL 2025: ಮೊದಲ ಗೆಲುವು ದಾಖಲಿಸಿದ ಗುಜರಾತ್: ಮಿಂಚಿದ ಕನ್ನಡಿಗ ಪ್ರಸಿದ್ಧ
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸೊಗಸಾದ ಪ್ರದರ್ಶನ ನೀಡಿದ ಗುಜರಾತ್ ಟೈಟನ್ಸ್ 18ನೇ ಆವೃತ್ತಿಯಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಲೀಗ್‌ನಲ್ಲಿ ಎರಡನೇ ಸೋಲು ಕಂಡಿದೆ. ಗುಜರಾತ್ ಟೈಟಾನ್ಸ್ ಗೆಲುವಿನಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣಾ ಮಿಂಚಿದ್ದಾರೆ. ಇವರು ಅಮೋಘ ಬೌಲಿಂಗ್ ನಡೆಸಿ ಆತಿಥೇಯ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.
ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 196 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 160 ರನ್ ಸೇರಿಸಿ ಸೋಲು ಕಂಡಿತು. ಈ ಮೂಲಕ ಮುಂಬೈ ಸರಣಿಯಲ್ಲಿ ಎರಡನೇ ಸೋಲು ಕಂಡಿದೆ.

ಕಳಪೆ ಆರಂಭ
ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಮುಂಬೈ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ರೋಹಿತ್ ಶರ್ಮಾ, ರಯಾನ್ ರಿಕೆಲ್ಟನ್ ಉತ್ತಮ ಜೊತೆಯಾಟವನ್ನು ನೀಡುವಲ್ಲಿ ವಿಫಲರಾದರು. ರೋಹಿತ್ ಶರ್ಮಾ 2 ಬೌಂಡರಿ ಬಾರಿಸಿ ಭರ್ಜರಿ ಲಯಕ್ಕೆ ಮರಳುವ ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಇವರ ಆಸೆಗೆ ಮೊಹಮ್ಮದ್ ಸಿರಾಜ್ ಖೆಡ್ಡಾ ತೊಡಿದರು. ರಯಾನ್ ರಿಕೆಲ್ಟನ್ ಅವರು ಸಹ ಮೊಹಮ್ಮದ್ ಸಿರಾಜ್ ಅವರ ಎಸೆತವನ್ನು ಅರಿಯುವಲ್ಲಿ ವಿಫಲರಾಗಿ ಪೆವಿಲಿಯನ್ ಸೇರಿದರು.
ಮೂರನೇ ವಿಕೆಟ್‌ಗೆ ತಿಲಕ್ ವರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೊಡಿ 42 ಎಸೆತಗಳಲ್ಲಿ 62 ರನ್ ಸೇರಿಸಿತು. ತಿಲಕ್ ವರ್ಮಾ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 39 ರನ್ ಸಿಡಿಸಿ ಔಟ್ ಆದರು. ರಾಬಿನ್ ಮಿಂಜ್ ನಿರಾಸೆಯನ್ನು ಅನುಭವಿಸಿದರು. ನಾಯಕ ಹಾರ್ದಿಕ್ ಪಾಂಡ್ಯ (11), ನಮನ್ ಧೀರ್ (ಅಜೇಯ 18), ಮಿಚೆಲ್ ಸ್ಯಾಂಟ್ನರ್ (ಅಜೇಯ 18) ರನ್ ಬಾರಿಸಿದರೂ ತಂಡದ ಗೆಲುವಿಗೆ ಸಾಕಾಗಲಿಲ್ಲ.

ಸೂರ್ಯಕುಮಾರ್ ಯಾದವ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 28 ಎಸೆತಗಳಲ್ಲಿ 1 ಬೌಂಡರಿ, 4 ಸಿಕ್ಸರ್ ಸಹಾಯದಿಂದ 48 ರನ್ ಸಿಡಿಸಿ ಔಟ್ ಆದರು.
ಕನ್ನಡಿಗನ ಅಬ್ಬರ
ಗುಜರಾತ್ ಗೆಲುವಿನಲ್ಲಿ ಪ್ರಸಿದ್ಧ ಕೃಷ್ಣ ಮಿಂಚಿದರು. ಇವರು 4 ಓವರ್ ಬೌಲಿಂಗ್ ನಡೆಸಿ 18 ರನ್ ನೀಡಿ 2 ವಿಕೆಟ್ ಕಬಳಿಸಿದರು. ಈ ವೇಳೆ ಇವರು 14 ಡಾಟ್ ಬೌಲ್ ಮಾಡಿದರು. ಉಳಿದಂತೆ ಸಿರಾಜ್ 2, ಕಗಿಸೋ ರಬಾಡ, ಸಾಯಿ ಕಿಶೋರ್ ತಲಾ ಒಂದು ವಿಕೆಟ್ ಕಬಳಿಸಿದರು.
ಭರ್ಜರಿ ಆರಂಭ
ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ವೇಳೆ ಈ ಜೋಡಿ 78 ರನ್‌ಗಳಿಗೆ ಆಟ ಮುಗಿಸಿತು. ಶುಭಮನ್ ಗಿಲ್ 38 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಪೆವಿಲಿಯನ್ ಸೇರಿದರು. ಎರಡನೇ ವಿಕೆಟ್ ಗೆ ಸಾಯಿ ಸುದರ್ಶನ್ ಹಾಗೂ ಜೋಸ್ ಬಟ್ಲರ್ (39) ಜೋಡಿ ಸಹ ಉತ್ತಮ ಜೊತೆಯಾಟದ ಕಾಣಿಕೆ ನೀಡುತು. ಈ ಜೊಡಿಯನ್ನು ಬೇರ್ಪಡಿಸುವಲ್ಲಿ ಮುಜಿಬ್ ಉರ್ ರೆಹಮಾನ್ ನೆರವು ನೀಡಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದರು.
ಸಾಯಿ ಸುದರ್ಶನ್ ಅದರ್ಶತಕ
ಸಾಯಿ ಸುದರ್ಶನ್ 41 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ನೆರವಿನಿಂದ 63 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಮುಂಬೈ ಪರ ಹಾರ್ದಿಕ್ ಪಾಂಡ್ಯ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications