ಶುಭಮನ್ ಗಿಲ್, ಸಾಯಿ ಸುದರ್ಶನ್ ಅರ್ಧಶತಕದ ಬಲ
ನಾಯಕ ಶುಭಮನ್ ಗಿಲ್ ಹಾಗೂ ಯುವ ಆಟಗಾರ ಸಾಯಿ ಸುದರ್ಶನ್ ಅವರು ಬಾರಿಸಿದ ಅರ್ಧಶತಕದ ಬಲದಿಂದ ಗುಜರಾತ್ ಟೈಟಾನ್ಸ್ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 52ನೇ ಪಂದ್ಯದಲ್ಲಿ 230 ರನ್‌ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕರಾದ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್‌ಗಳು ಹೆಣಗಾಡಿದರು. ತಂಡದ ಅನುಭವಿ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರನ್ನು ಆರಂಭಿಕ ಜೋಡಿ ದಂಡಿಸುತ್ತಾ ಸಾಗಿತು. ಪರಿಣಾಮ ಗುಜರಾತ್ ಮೊದಲ ಆರು ಓವರ್‌ಗಳಲ್ಲಿ 82 ರನ್ ಸೇರಿಸಿತು.

ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ 10.5 ಓವರ್‌ಗಳಲ್ಲಿ 118 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಭರವಸೆಯ ಬ್ಯಾಟರ್ ಸಾಯಿ ಸುದರ್ಶನ್ 36 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿ ಕನ್ನಡಿಗ ಯಶ್ ರಾಜ್ ಪುಂಜಾ ಅವರಿಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ಜೋಸ್ ಬಟ್ಲರ್ (12) ಜವಾಬ್ದಾರಿ ಮರೆತರು.
ಶುಭಮನ್ ಗಿಲ್ ಅಬ್ಬರ
44 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಶುಭಮನ್ ಗಿಲ್ 84 ರನ್ ಬಾರಿಸಿದ್ದಾಗ ಬ್ರಿಜೇಷ್ ಶರ್ಮಾ ಅವರ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ತುಷಾರ್ ದೇಶಪಾಂಡೆ ಅವರಿಗೆ ವಿಕೆಟ್ ಒಪ್ಪಿಸಿದರು. ಆಲ್‌ರೌಂಡರ್ ಜೇಸನ್ ಹೋಲ್ಡರ್ (7) ಸಹ ಬ್ರಿಜೇಷ್‌ಗೆ ಔಟ್ ಆದರು.
ಸ್ಟಾರ್ ಆಟಗಾರ ವಾಷಿಂಗ್ಟನ್ ಸುಂದರ್ ಸೊಗಸಾದ ಬ್ಯಾಟಿಂಗ್ ನಡೆಸಿದರು. ಇವರು 20 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 37 ರನ್ ಬಾರಿಸಿದರು. ರಾಹುಲ್ ತೆವಾಟಿಯಾ ಅಜೇಯ 14 ರನ್ ಬಾರಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಸೇರಿಸಿತು. ಆರ್‌ಆರ್ ಪರ ಬ್ರಿಜೇಶ್ ಶರ್ಮಾ 47ಕ್ಕೆ 2 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications