Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Turning Point: ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ತಿರುವು ಕೊಟ್ಟ ಗಿಲ್ ಅರ್ಧಶತಕ

ಭಾನುವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಗುಜರಾತ್ ಟೈಟಾನ್ಸ್ ತಂಡದ ಗೆಲುವಿನಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರವಹಿಸಿದರು. ಟಾಸ್ ಗೆದ್ದು ಗುಜರಾತ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಸನ್‌ ರೈಸರ್ಸ್ ಹೈದರಾಬಾದ್ ಮೊದಲಿ ಬ್ಯಾಟಿಂಗ್ ಮಾಡಿ 8 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಿತು.

ಮೊಹಮ್ಮದ್ ಸಿರಾಜ್ ಸನ್‌ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‍‌ಗಳನ್ನು ಕಾಡಿದರು. ಪರಿಣಾಮ ಅವರು ನಾಲ್ಕು ವಿಕೆಟ್ ಪಡೆಯುವ ಮೂಲಕ ಗುಜರಾತ್ ತಂಡಕ್ಕೆ ನೆರವಾದರು. ಸಿರಾಜ್ ತಮ್ಮ ನಾಲ್ಕು ಓವರ್‍‌ಗಳಲ್ಲಿ17 ರನ್‌ಗೆ 4 ವಿಕೆಟ್ ಪಡೆದರು

Gujarat Titans vs Sunrisers Hyderabad IPL 2025 Match 19 Turning Point

ಆರ್. ಸಾಯಿ ಕಿಶೋರ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಎರಡು ವಿಕೆಟ್ ಪಡೆದು ಸನ್‌ರೈಸರ್ಸ್ ತಂಡವನ್ನು ನಿಯಂತ್ರಣದಲ್ಲಿಡಲು ನೆರವಾದರು. ಎಸ್‌ಆರ್‌ಹೆಚ್ ಪರ ನಿತೀಶ್‌ಕುಮಾರ್ ರೆಡ್ಡಿ 31 ರನ್ ಗಳಿಸಿ ಮಿಂಚಿದರು.

ಸುಲಭ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 2 ವಿಕೆಟ್‌ ನಷ್ಟಕ್ಕೆ 16 ರನ್‌ಗಳಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ವಾಷಿಂಗ್ಟನ್ ಸುಂದರ್ ಮತ್ತು ನಾಯಕ ಶುಭಮನ್ ಗಿಲ್ ನೆರವಾದರು. ವಾಷಿಂಗ್ಟನ್ ಸುಂದರ್ 29 ಎಸೆತಗಳಲ್ಲಿ ಬಿರುಸಿನ 49 ರನ್ ಗಳಿಸಿ ಔಟಾದರು. ಮತ್ತೊಂದೆಡೆ ಶುಭಮನ್ ಗಿಲ್ 43 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಅಜೇಯರಾಗಿ ಉಳಿದು ತಂಡಕ್ಕೆ ಗೆಲುವು ತಂದು ಕೊಟ್ಟರು.

ಟರ್ನಿಂಗ್ ಪಾಯಿಂಟ್

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ಮಹತ್ವದ ತಿರುವು ಗುಜರಾತ್ ನಾಯಕ ಶುಭಮನ್ ಗಿಲ್ ಅವರ ಅರ್ಧಶತಕ. ಇದು ಹೈದರಾಬಾದ್ ತಂಡವನ್ನು ಪಂದ್ಯದಿಂದ ದೂರ ತಳ್ಳಿತು. ಹೈದರಾಬಾದ್ ಬೌಲರ್‍‌ಗಳು ಆರಂಭದಲ್ಲಿ ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರನ್ನು ಔಟ್ ಮಾಡಿದರು. ಆದರೆ ಗಿಲ್ 43 ಎಸೆತಗಳಲ್ಲಿ 9 ಬೌಂಡರಿ ನೆರವಿನಿಂದ ಅಜೇಯ 61 ರನ್ ಗಳಿಸಿ ತಂಡವನ್ನು ಗೆಲುವಿನ ಗೆರೆಯನ್ನು ದಾಟಿಸಿದರು.

ಈ ಪಂದ್ಯವನ್ನು ಗೆಲ್ಲುವ ಮೂಲಕ, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತಲುಪಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವುಗಳೊಂದಿಗೆ ಅವರು 6 ಅಂಕಗಳನ್ನು ಹೊಂದಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಕಳಪೆ ಸ್ಥಿತಿಯಲ್ಲಿದೆ. ಹೈದರಾಬಾದ್ 5 ಪಂದ್ಯಗಳನ್ನು ಆಡಿದೆ. ಆದರೆ ನಾಲ್ಕರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಹೈದರಾಬಾದ್ ತಂಡವು ಐಪಿಎಲ್ 2025 ರ ಸೀಸನ್‌ ಅನ್ನು ಗೆಲುವಿನೊಂದಿಗೆ ಆರಂಭಿಸಿತು. ಆದರೆ ನಂತರ ಸತತ ನಾಲ್ಕು ಸೋಲುಗಳನ್ನು ಎದುರಿಸಿದೆ.

Story first published: Sunday, April 6, 2025, 23:59 [IST]
Other articles published on Apr 6, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+