For Quick Alerts
ALLOW NOTIFICATIONS  
For Daily Alerts
 

WPL 2025: ಮೊದಲ ಗೆಲುವಿನ ಹುಡುಕಾಟದಲ್ಲಿ ಗುಜರಾತ್‌: ಶುಭಾರಂಭದ ನಿರೀಕ್ಷೆಯಲ್ಲಿ ಯುಪಿ

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ರೋಚಕತೆ ಹೆಚ್ಚಿಸಿದೆ. ಗುಜರಾತ್‌ ಟೈಟಾನ್ಸ್‌ ಹಾಗೂ ಯುಪಿ ವಾರಿಯರ್ಸ್‌ ತಂಡಗಳು ಕಾದಾಟ ನಡೆಸಲಿವೆ. ಈ ಲೀಗ್‌ನಲ್ಲಿ ಉಭಯ ತಂಡಗಳು ಮೊದಲ ಗೆಲುವಿನ ಕನಸು ಕಾಣುತ್ತಿವೆ. ಈಗಾಗಲೇ ಗುಜರಾತ್‌ ಟೈಟಾನ್ಸ್ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಎರಡನೇ ಪಂದ್ಯದಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಸಿದ್ಧತೆ ಮಾಡಿಕೊಂಡಿದೆ.

ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರ್ತಿಯರು ಇದ್ದು ಕುತೂಹಲ ಹೆಚ್ಚಿಸಿದೆ. ಈ ಪಂದ್ಯಕ್ಕೆ ಗುಜರಾತ್ ಟೈಟಾನ್ಸ್ ತಂಡ ಆತಿಥ್ಯ ನೀಡಲಿದೆ. ಈ ಪಂದ್ಯದಲ್ಲಿ ಗುಜರಾತ್ ಗೆಲುವಿನ ಕನಸು ಕಾಣುತ್ತಿದೆ. ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಅಬ್ಬರದ ಪ್ರದರ್ಶನ ನೀಡುವ ಇರಾದೆ ಆಶ್ಲೀ ಗಾರ್ಡ್ನರ್ ಬಳಗದ್ದಾಗಿದೆ.

Gujarat Titans vs UP Warriors A High-Stakes Clash as Both Teams Eye First Win in WPL 2024

ಆಶ್ಲೀ ಗಾರ್ಡ್ನರ್ ಬಲ

ಆಡಿದ ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಗುಜರಾತ್ ನಾಯಕಿ ಮಿಂಚಿದ್ದರು. ಇವರು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆಶ್ಲೀ ಗಾರ್ಡ್ನರ್ ಅಮೋಘ ಬ್ಯಾಟಿಂಗ್ ನಡೆಸಿದ್ದರು. ಆಶ್ಲೀ ಗಾರ್ಡ್ನರ್ 37 ಎಸೆತಗಳಲ್ಲಿ 3 ಬೌಂಡರಿ, 8 ಸಿಕ್ಸರ್‌ ಸೇರಿದಂತೆ ಅಜೇಯ 79 ರನ್‌ ಸಿಡಿಸಿದ್ದರು. ಅಲ್ಲದೆ ಮೂರು ಓವರ್ ಬೌಲಿಂಗ್ ಮಾಡಿ ಆರ್‌ಸಿಬಿ ತಂಡದ ಆರಂಭಿಕರಿಗೆ ಇವರೇ ಪೆವಿಲಿಯನ್ ಹಾದಿ ತೋರಿಸಿದ್ದರು. ಇನ್ನು ಗುರಜಾತ್‌ ತಂಡಕ್ಕೆ ಬೇತ್‌ ಮೂನಿ ಬ್ಯಾಟಿಂಗ್ ಬೆನ್ನೆಲುಬು ಎಂದೇ ಹೇಳಬಹುದು. ಇವರು ಸಹ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಅರ್ಧಶತಕ ಬಾರಿಸಿದ್ದರು. ಈ ಇಬ್ಬರೂ ಸ್ಟಾರ್ ಆಟಗಾರ್ತಿಯರು ತಮ್ಮ ಅಮೋಘ ಲಯವನ್ನು ಮುಂದುವರೆಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಮೆಟ್ಟಿನಿಲ್ಲುವ ಅನಿವಾರ್ಯತೆ ಗುಜರಾತ್‌ ಟೈಟಾನ್ಸ್ ತಂಡಕ್ಕಿದೆ. ಈ ತಂಡ ಆರ್‌ಸಿಬಿ ಪರ ಹಲವು ಕ್ಯಾಚ್‌ಗಳನ್ನು ಬಿಟ್ಟು ಕೈ ಸುಟ್ಟುಕೊಂಡಿದ್ದವು. ಅಲ್ಲದೆ ಬೌಲರ್‌ಗಳು ಸಹ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಅಲ್ಲದೆ ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಿ, ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿ ಹಾಕಬೇಕಿದೆ.

Gujarat Titans vs UP Warriors A High-Stakes Clash as Both Teams Eye First Win in WPL 2024

ಸ್ಟಾರ್ ಪ್ಲೇಯರ್‌ ಶಕ್ತಿ

ಯುಪಿ ವಾರಿಯರ್ಸ್ ಪ್ರಸಕ್ತ ಋತುವಿನಲ್ಲಿ ಮೊದಲ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಈ ತಂಡದಲ್ಲೂ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಸ್ಟಾರ್ ಆಟಗಾರ್ತಿಯರು ಕಳೆದ ಆವೃತ್ತಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಈ ಆಟಗಾರ್ತಿಯರ ಜೊತೆಯಗೆ ಉಳಿದ ಆಟಗಾರ್ತಿ ಸ್ಥಿರ ಪ್ರದರ್ಶನ ನೀಡಿ ಗೆಲುವಿನ ಖಾತೆ ತೆರೆಯುವ ಅವಶ್ಯಕತೆ ಇದೆ. ಇನ್ನು ಬೌಲರ್‌ಗಳು ಸಹ ತಮ್ಮ ಬಿಗುವಿನ ದಾಳಿ ನಡೆಸಿ ಗುಜರಾತ್ ಟೈಟಾನ್ಸ್‌ ಬ್ಯಾಟರ್‌ಗಳನ್ನು ಕಾಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಮೊದಲ ಗೆಲುವಿನ ಕನಸು ನನಸಾಗುತ್ತದೆ.

Story first published: Sunday, February 16, 2025, 7:00 [IST]
Other articles published on Feb 16, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+