For Quick Alerts
ALLOW NOTIFICATIONS  
For Daily Alerts
 

ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ

Happy Birthday Virender Sehwag: Former Team India Opener Turns 42 Today

ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 42ನೇ ವಸಂತಕ್ಕೆ ಕಾಲಿಟ್ಟ ವೀರೂಗೆ ಅನೇಕ ಮಾಜಿ ಕ್ರಿಕೆಟ್ ದಿಗ್ಗಜರು, ಬಿಸಿಸಿಐ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ವೀರೇಂದ್ರ ಸೆಹ್ವಾಗ್‌ ವಿಶೇಷವಾಗಿ ಶುಭಾಶಯ ಕೋರಿದೆ. ವೀರೇಂದ್ರ ಸೆಹ್ವಾಗ್ ಕ್ರಿಕೆಟ್ ಲೋಕದಲ್ಲಿ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಅವರು ವೇಗದ ತ್ರಿಶತಕದ ದಾಖಲೆಯನ್ನು ಹೊಂದಿದ್ದಾರೆ. ಕೇವಲ 278 ಎಸೆತಗಳಲ್ಲಿ 300 ರನ್ ಸಿಡಿಸಿದ ಕೀರ್ತಿ ಅವರದ್ದಾಗಿದೆ.

ನವಾಬ್ ಆಫ್ ನಜಾಫ್‌ಗಢ ಖ್ಯಾತಿಯ ವೀರೂ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕಗಳನ್ನು ಗಳಿಸಿದ ಏಕೈಕ ಭಾರತೀಯ ಕ್ರಿಕೆಟಿಗ ಮತ್ತು ಇತಿಹಾಸದಲ್ಲಿ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯರೊಬ್ಬರ ವೇಗದ ಶತಕ ದಾಖಲೆ 60 ಎಸೆತಗಳಲ್ಲಿ 100 ರನ್ ಸಿಡಿಸಿದ್ದಾರೆ.

* 17,253 ಅಂತರಾಷ್ಟ್ರೀಯ ರನ್‌ಗಳು

* ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕ ಸಿಡಿಸಿರುವ ಏಕೈಕ ಭಾರತೀಯ ಕ್ರಿಕೆಟಿಗ

* ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಮೂವರು ಭಾರತೀಯರಲ್ಲಿ ಓರ್ವ

* 2007ರ ಟಿ20 ವಿಶ್ವಕಪ್ ಮತ್ತು 2011ರ ವಿಶ್ವಕಪ್ ವಿನ್ನರ್

ಹೀಗೆ ವೀರೇಂದ್ರ ಸೆಹ್ವಾಗ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಸಹ ವಿಶೇಷವಾಗಿ ಟ್ವೀಟ್ ಮಾಡಿದೆ

Story first published: Tuesday, October 20, 2020, 13:53 [IST]
Other articles published on Oct 20, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+