ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇದು ಪರಿಪೂರ್ಣ ಪಂದ್ಯ: ಟೀಮ್ ಇಂಡಿಯಾ ಸ್ಪಿನ್ನರ್‌ಗಳ ಪ್ರದರ್ಶನಕ್ಕೆ ಹರ್ಭಜನ್ ಸಿಂಗ್ ಹರ್ಷ

Harbhajan Singh praised Indian spinner for excellent performance against Netherlands

ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್‌ನಲ್ಲಿ ಸತತ ಎರಡು ಗೆಲುವು ಸಾಧಿಸಿರುವ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಇನ್ನು ಗುರುವಾರ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ನೀಡಿದ ಪ್ರದರ್ಶನಕ್ಕೆ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮನಸೋತಿದ್ದಾರೆ. ಈ ಪ್ರದರ್ಶನದಿಂದಾಗಿ ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ಜೋಡಿಯ ಆತ್ಮವಿಶ್ವಾಸ ಹೆಚ್ಚಾಗಲಿದೆ ಎಂದಿದ್ದಾರೆ ಭಜ್ಜಿ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧ 56 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಸೂಪರ್ 12 ಹಂತದಲ್ಲಿ ಭಾರತ ಸತತ ಎರಡನೇ ಗೆಲುವು ಸಾಧಿಸಿದ್ದಲ್ಲದೆ ಅಂಕಪಟ್ಟಿಯಲ್ಲಿಯೂ ಅಗ್ರಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

T20 World Cup: ಐಪಿಎಲ್‌ನಲ್ಲಿ ಆಡಿದ್ದು ಸಹಾಯಕವಾಯಿತು ಎಂದ ಆಸ್ಟ್ರೇಲಿಯಾ ಆಲ್‌ರೌಂಡರ್T20 World Cup: ಐಪಿಎಲ್‌ನಲ್ಲಿ ಆಡಿದ್ದು ಸಹಾಯಕವಾಯಿತು ಎಂದ ಆಸ್ಟ್ರೇಲಿಯಾ ಆಲ್‌ರೌಂಡರ್

ಅಕ್ಷರ್ ಮತ್ತು ಅಶ್ವಿನ್ ಜೋಡಿ ನೆದರ್ಲೆಂಡ್ಸ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದು 4.87ರ ಅದ್ಭುತ ಎಕಾನಮಿ ರೇಟ್‌ನಲ್ಲಿ 39 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದು ಮಿಂಚಿದರು. ಈ ಪ್ರದರ್ಶನದ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್ ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ಬೌಲರ್‌ಗಳು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕೀಳುವುದು ಅಗತ್ಯ ಎಂದು ಪ್ರತಿಕ್ರಿಯಸಿದ್ದಾರೆ.

ಮುಂದುವರಿದು ಮಾತನಾಡಿದ ಹರ್ಭಜನ್ ಸಿಂಗ್ "ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಮತ್ತು ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಇದು ಒಂದು ರೀತಿಯ ಉತ್ತಮ ಅವಕಾಶವಾಗಿದೆ. ಭಾರತದ ಇಬ್ಬರು ಸ್ಪಿನ್ನರ್‌ಗಳಿಗೂ ಒಂದು ಪರಿಪೂರ್ಣ ಪಂದ್ಯವಾಗಿತ್ತು. ಇಬ್ಬರು ಕೂಡ ತಲಾ ಎರಡು ವಿಕೆಟ್‌ಗಳನ್ನು ಪಡೆಯುವ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ" ಎಂದಿದ್ದಾರೆ.

ಇನ್ನು ನೆದರ್ಲೆಂಡ್ಸ್ ವಿರುದ್ಧದ ಪಂದ್ಯವನ್ನು ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಭಾರತ 180 ರನ್‌ಗಳ ಸವಾಲಿನ ಗುರಿಯನ್ನು ನೆದರ್ಲೆಂಡ್ಸ್ ತಂಡಕ್ಕೆ ನೀಡಿತ್ತು. ಇದನ್ನು ಬೆನ್ನಟ್ಟಿದ ಡಚ್ ಪಡೆ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 123 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಭಾರತ ತಂಡ 56 ರನ್‌ಗಳ ಬೃಹತ್ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದ್ದು ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ರೋಚಕವಾಗಿ ಮಣಿಸಿತ್ತು.

ಇಂಗ್ಲೆಂಡ್ ವಿರುದ್ಧದ ಗೆಲುವು ರೋಮಾಂಚನಕಾರಿ ಅನುಭವ ಎಂದ ಐರ್ಲೆಂಡ್ ನಾಯಕಇಂಗ್ಲೆಂಡ್ ವಿರುದ್ಧದ ಗೆಲುವು ರೋಮಾಂಚನಕಾರಿ ಅನುಭವ ಎಂದ ಐರ್ಲೆಂಡ್ ನಾಯಕ

ಇತ್ತಂಡಗಳ ಆಡುವ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್

Story first published: Thursday, October 27, 2022, 20:58 [IST]
Other articles published on Oct 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X