ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕ್ ಟಿ20 ವಿಶ್ವಕಪ್‌: ಗೆಲ್ಲುವ ತಂಡ ಯಾವುದು ಎಂಬ ಪ್ರಶ್ನೆಗೆ ಬೇಸರದ ಉತ್ತರ ಕೊಟ್ಟ ಹರ್ಭಜನ್

Harbhajan Singh refused to predict winner between India vs Pakistan T20 World Cup 2022 clash

ಇದೇ ಅಕ್ಟೋಬರ್ ತಿಂಗಳಿನಿಂದ ಈ ಬಾರಿಯ ಪ್ರತಿಷ್ಠಿತ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಕಳೆದ ಬಾರಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಸೋಲುವುದರ ಮೂಲಕ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದ್ದ ಟೀಮ್ ಇಂಡಿಯಾ ಈ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮುವತ್ತ ಚಿತ್ತ ನೆಟ್ಟಿದೆ.

IND vs SA: ನಾಯಕನಾಗಿ ಗೆದ್ದ ಪಂತ್; ದ.ಆಫ್ರಿಕಾ ವಿರುದ್ಧದ ಈ ಸಾಧನೆ ಕೊಹ್ಲಿ, ಧೋನಿಯೂ ಮಾಡಿಲ್ಲ!IND vs SA: ನಾಯಕನಾಗಿ ಗೆದ್ದ ಪಂತ್; ದ.ಆಫ್ರಿಕಾ ವಿರುದ್ಧದ ಈ ಸಾಧನೆ ಕೊಹ್ಲಿ, ಧೋನಿಯೂ ಮಾಡಿಲ್ಲ!

ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಟ್ರೋಫಿ ಎತ್ತಿ ಹಿಡಿಯುವ ಸಾಮರ್ಥ್ಯ ಇರುವ ತಂಡಗಳಲ್ಲೊಂದು ಎನಿಸಿಕೊಂಡಿದ್ದು, ಪ್ರತಿ ವರ್ಷದ ಹಾಗೆ ಈ ಬಾರಿಯೂ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಪಂದ್ಯದ ಕುರಿತು ಕ್ರೀಡಾಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಏಕದಿನ ಕ್ರಿಕೆಟ್‌ನಲ್ಲಿ ಹಲವು ಬಾರಿ 5 ವಿಕೆಟ್ ಗೊಂಚಲು ಪಡೆದ ಬ್ಯಾಟ್ಸ್‌ಮನ್‌ಗಳಿವರುಏಕದಿನ ಕ್ರಿಕೆಟ್‌ನಲ್ಲಿ ಹಲವು ಬಾರಿ 5 ವಿಕೆಟ್ ಗೊಂಚಲು ಪಡೆದ ಬ್ಯಾಟ್ಸ್‌ಮನ್‌ಗಳಿವರು

ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ವಿಶ್ವಕಪ್ ಹಣಾಹಣಿ ಎಂದರೆ ಕೇವಲ ಕ್ರಿಕೆಟ್ ಅಭಿಮಾನಿಗಳಿಗೆ ಮಾತ್ರವಲ್ಲ ಮಾಜಿ ಕ್ರಿಕೆಟಿಗರು ಹಾಗೂ ಕ್ರೀಡಾ ಪಂಡಿತರಿಗೂ ಕೂಡ ಇದು ಸಾಕಷ್ಟು ಕುತೂಹಲಕಾರಿ ಸಂಗತಿ. ಪಂದ್ಯ ಆರಂಭಕ್ಕೆ ಇನ್ನೂ ತಿಂಗಳುಗಳು ಬಾಕಿ ಇರುವಾಗಲೇ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಊಹೆಗಳನ್ನು ಮಾಡುವತ್ತ ಮಾಜಿ ಕ್ರಿಕೆಟಿಗರು ಮುಖ ಮಾಡುತ್ತಾರೆ. ಅದೇ ರೀತಿ ಈ ಬಾರಿಯೂ ಸಹ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಟಿ ಟ್ವೆಂಟಿ ವಿಶ್ವಕಪ್ ಹಣಾಹಣಿಯ ಕುರಿತು ಈಗಲೇ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮಾತನಾಡಿದ್ದು, ಯಾವ ತಂಡ ಗೆಲ್ಲಬಹುದು ಎಂಬುದರ ಕುರಿತು ಈ ಕೆಳಕಂಡಂತೆ ಉತ್ತರವನ್ನು ನೀಡಿದ್ದಾರೆ.

ಗೆಲ್ಲುವ ತಂಡವನ್ನು ಊಹಿಸುವುದಿಲ್ಲ

ಗೆಲ್ಲುವ ತಂಡವನ್ನು ಊಹಿಸುವುದಿಲ್ಲ

ಕಳೆದ ಬಾರಿ ಟೀಮ್ ಇಂಡಿಯಾ ಗೆಲ್ಲಲಿದೆ ಎಂಬ ವಿಶ್ವಾಸದ ಉತ್ತರವನ್ನು ನೀಡಿದ್ದ ಹರ್ಭಜನ್ ಸಿಂಗ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಹಣಾಹಣಿಯಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದನ್ನು ಊಹಿಸಲು ಮುಂದಾಗುವುದಿಲ್ಲ ಎಂದಿದ್ದಾರೆ. ಈ ಬಾರಿ ಮತ್ತೊಂದು ಟಿ ಟ್ವೆಂಟಿ ವಿಶ್ವಕಪ್ ಮುಂದಿದೆ, ಆದರೆ ಈ ಸಾರಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹರ್ಭಜನ್ ಸಿಂಗ್ ಹೇಳಿಕೆ ಕೊಟ್ಟಿದ್ದಾರೆ.

ಏನಾಗಲಿದೆ ಎಂಬುದನ್ನು ಕಾದು ನೋಡೋಣ

ಏನಾಗಲಿದೆ ಎಂಬುದನ್ನು ಕಾದು ನೋಡೋಣ

ಇನ್ನೂ ಮುಂದುವರಿದು ಮಾತನಾಡಿದ ಹರ್ಭಜನ್ ಸಿಂಗ್ ಮೌಕಾ ಮೌಕಾ ಆಚರಣೆಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಇದೇ ರೀತಿ ಮೌಕಾ ಮೌಕಾ ಎಂದು ಹೇಳಿ ತಂಡ ಹಿನ್ನಡೆ ಅನುಭವಿಸಿತ್ತು, ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹರ್ಭಜನ್ ಸಿಂಗ್ ನಿರಾಸೆಯ ಹೇಳಿಕೆ ನೀಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಹಣಾಹಣಿ ಯಾವಾಗ?

ಭಾರತ ಮತ್ತು ಪಾಕಿಸ್ತಾನ ಹಣಾಹಣಿ ಯಾವಾಗ?

ಮುಂಬರುವ ಅಕ್ಟೋಬರ್ ತಿಂಗಳ 23ರ ಭಾನುವಾರದಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ.

Story first published: Tuesday, June 21, 2022, 9:53 [IST]
Other articles published on Jun 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X