For Quick Alerts
ALLOW NOTIFICATIONS  
For Daily Alerts
 

2023ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅಪ್ರತಿಮ ಪ್ರದರ್ಶನಕ್ಕಾಗಿ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈಗಾಗಲೇ ಅಂತಿಮ ಹಾಗೂ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

ಅಕ್ಟೋಬರ್ 5ರಿಂದ ಐಸಿಸಿ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಲಿದ್ದರೆ, ಭಾರತ ತಂಡ ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ನಂತರ ಅಕ್ಟೋಬರ್ 15ರಂದು ಪಾಕಿಸ್ತಾನ ವಿರುದ್ಧ ಹೈ-ವೋಲ್ಟೇಜ್ ಪಂದ್ಯವಾಡಲಿದೆ.

Harbhajan Singh Tips Virat Kohli For Good Batting Performance In World Cup 2023

ಇದೇ ವೇಳೆ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅವರ ಸ್ಥಾನಮಾನವನ್ನು 2011ರ ಆವೃತ್ತಿಯಲ್ಲಿ ಆಡಿದ್ದ ಸಚಿನ್ ತೆಂಡೂಲ್ಕರ್‌ಗೆ ಹೋಲಿಸಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ 2011ರ ವಿಶ್ವಕಪ್ ಗೆಲ್ಲುವಲ್ಲಿ ವಿರಾಟ್ ಕೊಹ್ಲಿ ಸಹ ಮಹತ್ವದ ಪಾತ್ರ ವಹಿಸಿದ್ದಾರೆ. ಅದೇ ರೀತಿ ಈ ವರ್ಷ ಭಾರತದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯುವ ಕಾರಣ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಸಾಧನೆಯನ್ನು ಪುನರಾವರ್ತಿಸಲು ಕಾಯುತ್ತಿದ್ದಾರೆ ಎಂದು ಹರ್ಭಜನ್ ಸಿಂಗ್ ತಿಳಿಸಿದರು.

ನ್ಯೂಸ್ 24 ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಹರ್ಭಜನ್ ಸಿಂಗ್, ವಿರಾಟ್ ಕೊಹ್ಲಿಯನ್ನು ಸ್ವತಂತ್ರವಾಗಿ ಆಡಲು ಅವಕಾಶ ನೀಡುವಂತೆ ಮತ್ತು ಹೆಚ್ಚಿನ ಒತ್ತಡದಿಂದ ಹೊರೆಯಾಗದಂತೆ ಭಾರತ ತಂಡದ ಉಳಿದ ಆಟಗಾರರು ಉತ್ತಮ ಪ್ರದರ್ಶನ ನೀಡುವಂತೆ ಮನವಿ ಮಾಡಿದರು.

Harbhajan Singh Tips Virat Kohli For Good Batting Performance In World Cup 2023

"ಇತರ ಆಟಗಾರರು ಅವರ ಜವಾಬ್ದಾರಿಯನ್ನು ತೆಗೆದುಕೊಂಡರೆ, ವಿರಾಟ್ ಕೊಹ್ಲಿ ತಮ್ಮ ನೈಜ ಆಟವನ್ನು ಆಡಲಿದ್ದಾರೆ ಎಂದು ನಾನು ಹೇಳುತ್ತೇನೆ. ಕೊಹ್ಲಿ ತಮ್ಮದೇ ಆದ ಆಟ ಆಡಿದಾಗ, ಆ ವ್ಯಕ್ತಿಯನ್ನು ತಡೆಯಲಾಗುವುದಿಲ್ಲ. ಆತ ಚಾಂಪಿಯನ್ ಆಟಗಾರ, ಅದರಲ್ಲಿ ಯಾವುದೇ ಅನುಮಾನವಿಲ್ಲ," ಎಂದು ಹರ್ಭಜನ್ ಸಿಂಗ್ ಹೇಳಿದರು.

ಹಿಂದಿನ ವಿಶ್ವಕಪ್‌ಗಳನ್ನು ಹಿಂತಿರುಗಿ ನೋಡಿದಾಗ, ವಿರಾಟ್ ಕೊಹ್ಲಿ ಐಸಿಸಿ ಟೂರ್ನಿಗಳಲ್ಲಿ ಭಾರತದ ಪರ ಅತ್ಯಂತ ಸ್ಥಿರ ಪ್ರದರ್ಶನ ನೀಡಿದವರಲ್ಲಿ ಒಬ್ಬರಾಗಿದ್ದಾರೆ. ಆದರೆ, ಕೊಹ್ಲಿ ಸ್ಥಿರತೆಯ ಹೊರತಾಗಿಯೂ, ಭಾರತ ತಂಡ 2015 ಮತ್ತು 2019ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋಲು ಕಂಡಿದ್ದಾರೆ.

ಈ ವರ್ಷದ ವಿಶ್ವಕಪ್‌ನಲ್ಲಿ ಭಾರತ ತಂಡ ನಾಕೌಟ್ ಹಂತಕ್ಕೆ ಬಂದರೆ, ವಿರಾಟ್ ಕೊಹ್ಲಿ ಹಳೆಯ ತಪ್ಪುಗಳನ್ನು ಸರಿಪಡಿಸಲು ಉತ್ಸುಕನಾಗುತ್ತಾನೆ ಎಂದು ಹರ್ಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಭಾರತ ತಂಡ ಹೆಚ್ಚಿನ ಗುಣಮಟ್ಟವನ್ನು ಹೊಂದಿದೆ. ಹೀಗಾಗಿ ಎಲ್ಲ ಆಟಗಾರರು ಸಮಾನ ಜವಾಬ್ದಾರಿಯನ್ನು ಹಂಚಿಕೊಳ್ಳಬೇಕು ಮತ್ತು ವಿರಾಟ್ ಕೊಹ್ಲಿ ತಮ್ಮದೇ ಆದ ಆಟವನ್ನು ಆಡಲು ಅವಕಾಶ ನೀಡಬೇಕು ಎಂದು ಹರ್ಭಜನ್ ಸಿಂಗ್ ತಿಳಿಸಿದರು.

"ವಿರಾಟ್ ಕೊಹ್ಲಿ ಔಟಾದರೆ ಸಮಸ್ಯೆ ಇಲ್ಲ, ಭಾರತ ತಂಡ ನಿಭಾಯಿಸುತ್ತದೆ. ನಮ್ಮಲ್ಲಿ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್ ಇದ್ದಾರೆ. ಅವರೆಲ್ಲರೂ ಅತ್ಯುತ್ತಮ ಆಟಗಾರರು. ಆದ್ದರಿಂದ ಅವರ ಮೇಲಿನ ಒತ್ತಡ ಸ್ವಲ್ಪ ಕಡಿಮೆಯಾಗಲಿದೆ ಮತ್ತು ಅವರು ತಮ್ಮ ಆಟವನ್ನು ಆಡಬಹುದು ಎಂದು ನಾನು ಭಾವಿಸುತ್ತೇನೆ," ಎಂದು ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟರು.

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಅಂಕಿಅಂಶ ಹೊಂದಿದ್ದಾರೆ. ಸ್ಟಾರ್ ಬ್ಯಾಟ್ಸ್‌ಮನ್ 274 ಏಕದಿನ ಪಂದ್ಯಗಳಲ್ಲಿ 57.32ರ ಅತ್ಯುತ್ತಮ ಸರಾಸರಿಯಲ್ಲಿ 12,898 ರನ್ ಬಾರಿಸಿದ್ದಾರೆ.

ಆದರೆ, ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ದೊಡ್ಡ ರನ್ ಗಳಿಸಲು ವಿಫಲರಾಗಿದ್ದಾರೆ. ಈ ವರ್ಷದ ಆರಂಭದಿಂದ ಅತ್ಯುತ್ತಮ ಆಡುವ ಲಕ್ಷಣಗಳನ್ನು ತೋರಿಸಿದ್ದಾರೆ. ಈ ವರ್ಷದ ಐಸಿಸಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಮುಖ ಆಟಗಾರನಾಗಲಿದ್ದಾರೆ ಎಂದು ಭಜ್ಜಿ ತಿಳಿಸಿದರು.

Story first published: Tuesday, July 18, 2023, 16:01 [IST]
Other articles published on Jul 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+