ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಮುಂಬೈಯ ಹಾರ್ದಿಕ್ ಪಾಂಡ್ಯ ಕಣಕ್ಕೆ?

ದುಬೈ: ಸೆಪ್ಟೆಂಬರ್ 26ರ ಭಾನುವಾರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 39ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಎಂಐ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕ ಝಹೀರ್ ಖಾನ್ ಭಾನುವಾರದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಲಭ್ಯತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈಯ ಆರಂಭಿಕ ಎರಡು ಪಂದ್ಯಗಳಲ್ಲಿ ಹಾರ್ದಿಕ್ ಆಡಿರಲಿಲ್ಲ. ಫಿಟ್ನೆಸ್ ಕೊರತೆಯಿಂದ ಪಾಂಡ್ಯ ಆಡುತ್ತಿಲ್ಲ ಎಂದು ಹೇಳಲಾಗಿತ್ತು.

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಐಪಿಎಲ್ ದ್ವಿತೀಯ ಹಂತದ ಎರಡು ಪಂದ್ಯಗಳಲ್ಲಿ ಉತ್ತಮ ಆರಂಭ ಕಂಡಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್‌, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್ ಸೋಲನುಭವಿಸಿತ್ತು. ಅಂಕಪಟ್ಟಿಯಲ್ಲಿ ಮುಂಬೈ ಈಗ 5ನೇ ಸ್ಥಾನದಲ್ಲಿದೆ.

Harshal Patel RCB ತಂಡಕ್ಕೆ ಸಿಕ್ಕಿರುವ ಅಪರೂಪದ ಬೌಲರ್ | Oneindia Kannada

"ನಮ್ಮ ಇವತ್ತಿನ ಅಭ್ಯಾಸ ಚೆನ್ನಾಗಿ ನಡೆದಿದೆ. ನಾಳೆ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿ ವೇಳೆ ಹಾರ್ದಿಕ್ ಲಭ್ಯತೆ ಬಗ್ಗೆ ಚಿತ್ರಣ ನೀಡಲಿದ್ದೇವೆ. ಹಾರ್ದಿಕ್ ಪಾಂಡ್ಯ ಇವತ್ತು ಅಭ್ಯಾಸ ಆರಂಭಿಸಿದ್ದಾರೆ. ನಮಗನ್ನಿಸುತ್ತದೆ, ಹಾರ್ದಿಕ್ ಪಾಂಡ್ಯ ಫಿಟ್‌ ಆಗಿ ಪಂದ್ಯದಲ್ಲಿ ಆಡಲಿದ್ದಾರೆ. ಫಿಟ್ ಆಗಿ ಆಡಬೇಕು ಅನ್ನೋದೇ ನಮ್ಮ ಬಯಕೆ ಕೂಡ," ಎಂದು ಝಹೀರ್ ಖಾನ್ ಮಾಹಿತಿ ನೀಡಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, September 25, 2021, 23:04 [IST]
Other articles published on Sep 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X