IND vs ENG T20: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಯಕ್ಕೆ ಮರಳಿದ ಹಾರ್ದಿಕ್ ಪಾಂಡ್ಯ: ಎದುರಾಳಿಗಳಿಗೆ ನಡುಕ
ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ20 ಪಂದ್ಯಕ್ಕೆ ಪುಣೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಈ ವೇಳೆ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಆದರೆ ಟೀಮ್ ಇಂಡಿಯಾದ ಆಲ್‌ರೌಂಡರ್‌ಗಳು ಅಮೋಘ ಪ್ರದರ್ಶನ ನೀಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆಯ ತಮ್ಮ ಆರ್ಭಟ ನಡೆಸಿದರು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 181 ರನ್ ಸೇರಿಸಿತು. ಟೀಮ್ ಇಂಡಿಯಾದ ಪರ ಯಾವೊಬ್ಬ ಟಾಪ್ ಆರ್ಡರ್ ಬ್ಯಾಟರ್‌ಗಳು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ನಿರಾಸೆಯನ್ನು ಅನುಭವಿಸಿದರು. ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಭರ್ಜರಿ ಸೆಟ್‌ಅಪ್ ಮಾಡಿದ ಜೋಸ್ ಬಟ್ಲರ್ ಸಫಲರಾದರು. ಸೂರ್ಯ ಶಾರ್ಟ್ ಮಿಡ್ ಆನ್‌ನಲ್ಲಿ ನಿಂತಿದ್ದ ಫೀಲ್ಡರ್ ಕೈಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.

4ನೇ ವಿಕೆಟ್‌ಗೆ ಉತ್ತಮ ಜೊತೆಯಾಟ
ನಾಲ್ಕನೇ ವಿಕೆಟ್‌ಗೆ ಭರವಸೆಯ ಆಟಗಾರರಾದ ರಿಂಕು ಸಿಂಗ್ ಹಾಗೂ ಅಭಿಷೇಕ್ ಶರ್ಮಾ ಸಂಕಷ್ಟದಲ್ಲಿದ್ದ ತಂಡಕ್ಕೆ ಆಧಾರವಾದರು. ಆರಂಭಿಕ ಎರಡನೇ ಓವರ್‌ನಲ್ಲೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತಕ್ಕೆ ಈ ಜೋಡಿ ಆಧಾರವಾಯಿತು. ಈ ಜೋಡಿ 32 ಎಸೆತಗಳನ್ನು ಎದುರಿಸಿ 45 ರನ್ ಸಿಡಿಸಿದರು. ಅಭಿಷೇಕ್ ಶರ್ಮಾ 29, ರಿಂಕು ಸಿಂಗ್ 30 ರನ್ ಸಿಡಿಸಿದರು.
ಆಲ್‌ರೌಂಡರ್‌ಗಳ ಅಮೋಘ ಜೊತೆಯಾಟ
79 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಕ್ಕೆ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ತಂಡಕ್ಕೆ ಆಧಾರವಾದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭರ್ಜರಿ ಫಾರ್ಮ್‌ಗೆ ಬಂದಿದ್ದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮುಖದಲ್ಲಿ ಮಂದಹಾಸ ಮೂಡಿಸಿತು. ಈ ಜೋಡಿ ಮಿಡ್ಲ್ ಓವರ್‌ಗಳಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡರು. ಅಲ್ಲದೆ ತಂಡ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕುವಲ್ಲಿ ನೆರವು ನೀಡಿದರು. ಈ ಜೋಡಿ ಆರನೇ ವಿಕೆಟ್‌ಗೆ 45 ಎಸೆತಗಳಲ್ಲಿ 87 ರನ್ ಸೇರಿಸಿತು. ಐಸಿಸಿ ಮೆಗಾ ಟೂರ್ನಿಗೂ ಮುನ್ನ ಹಾರ್ದಿಕ್ ಲಯಕ್ಕೆ ಮರಳಿದ್ದಾರೆ. ಇವರು 30 ಎಸೆತಗಳಲ್ಲಿ 125ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ಇವರ ಅಮೋಘ ಇನಿಂಗ್ಸ್‌ನಲ್ಲಿ ತಲಾ 4 ಬೌಂಡರಿ, 4 ಸಿಕ್ಸರ್‌ಗಳು ಸೇರಿವೆ. ಹಾರ್ದಿಕ್ 53 ರನ್‌ಗಳಿಗೆ ಔಟ್ ಆದರು.

ಇನ್ನೋಬ್ಬ ಆಲ್‌ರೌಂಡರ್ ಶಿವಂ ದುಬೆ ಭರ್ಜರಿ ಕಂ ಬ್ಯಾಕ್ ಮಾಡಿದರು. ಇವರು 34 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಇವರ ಸೊಗಸಾದ ಇನಿಂಗ್ಸ್‌ನಲ್ಲಿ 7 ಬೌಂಡರಿ, 2 ಸಿಕ್ಸರ್ ಸೇರಿವೆ.
ಇಂಗ್ಲೆಂಡ್ ಪರ ಸಕೀಬ್ ಮಹಮೂದ್ ಮೂರು ವಿಕೆಟ್ ಪಡೆದು ಅಬ್ಬರಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications