ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Ire 2nd T20: ಅಂತಿಮ 11 ಆಟಗಾರರ ಆಯ್ಕೆ ಮಾಡುವುದೇ ಹಾರ್ದಿಕ್‌ಗೆ ದೊಡ್ಡ ಸವಾಲು!

Hardik pandya

ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರೆಲ್ಲಾ ಅವಕಾಶ ಪಡೆಯಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ತಂಡದಲ್ಲಿ 3 ಪ್ರಮುಖ ಬದಲಾವಣೆ ಮಾಡಲು ಯೋಜಿಸಿದ್ದು, ಮೊದಲ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಿದ ಬಳಿಕ ಇಂದು(ಮಂಗಳವಾರ) ರಾತ್ರಿ 2ನೇ ಟಿ20 ಪಂದ್ಯ ಆರಂಭವಾಗಲಿದೆ.

12 ಓವರ್‌ಗಳಿಗೆ ಸೀಮಿತಗೊಂಡಿದ್ದ ಕಳೆದ ಪಂದ್ಯದಲ್ಲಿ ಐರ್ಲೆಂಡ್ ಉತ್ತಮ ಮೊತ್ತ ಕಲೆಹಾಕಿದರೂ ಬಲಿಷ್ಠ ಭಾರತದ ವಿರುದ್ಧ ಡಿಫೆಂಡ್ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅಂತಿಮ ಪಂದ್ಯದಲ್ಲಿ ಕಂಬ್ಯಾಕ್ ಮಾಡಿ ಸರಣಿಯನ್ನು 1-1ರಿಂದ ಸಮಬಲಗೊಳಿಸಲು ಐರ್ಲೆಂಡ್ ಯೋಜನೆ ರೂಪಿಸಿದೆ.

ತಂಡದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ

ತಂಡದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ

ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ, ಹಾರ್ದಿಕ್ ಪಾಂಡ್ಯ ನಾಯಕನಾಗಿ ಮೊದಲ ಜಯ ಸಾಧಿಸಿದ ದಾಖಲೆ ಮಾಡಲಿದ್ದಾರೆ. ಹೀಗಾಗಿ ಸರಣಿಯನ್ನು ಗೆಲ್ಲಬೇಕಾಗಿರುವುದರಿಂದ ಇಂದಿನ ಪಂದ್ಯದಲ್ಲಿ ಬದಲಾವಣೆಗಳನ್ನು ತರಲಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಗಾಯಗೊಂಡ ಪರಿಣಾಮ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್‌ಗೆ ತೆರಳಲಿಲ್ಲ.

"ರುತುರಾಜ್‌ಗೆ ಕಾಫ್ ನಿಗಲ್ ಇರುವುದರಿಂದ ಆತನನ್ನು ಬ್ಯಾಟಿಂಗ್‌ಗೆ ಕಳುಹಿಸಲಿಲ್ಲ. ನನಗೆ ಆಟಗಾರನ ಆರೋಗ್ಯ ಹೆಚ್ಚು ಮುಖ್ಯ, ಪಂದ್ಯವು ತನ್ನನ್ನು ತಾನೇ ನೋಡಿಕೊಳ್ಳುತ್ತದೆ. ಆದ್ದರಿಂದ ನಾವು ಹೆಚ್ಚಿನ ಬದಲಾವಣೆಯನ್ನು ಮಾಡಲಿಲ್ಲ, ಪ್ರತಿಯೊಬ್ಬರ ಸಂಖ್ಯೆ ಏನೇ ಇರಲಿ ನಾವು ಒಂದು ಸ್ಥಾನ ಮೇಲಕ್ಕೆ ಹೋದೆವು. ರುತು ಅವರನ್ನು ಹೆಚ್ಚು ಅಪಾಯಕ್ಕೆ ಒಳಪಡಿಸದಂತೆ ನೋಡಿಕೊಳ್ಳುವುದು ಮತ್ತು ಅವರೊಂದಿಗೆ ಹೆಚ್ಚಿನ ಅವಕಾಶವನ್ನು ಪಡೆಯುವುದು ಮುಖ್ಯವಾಗಿತ್ತು "ಎಂದು ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

Ind vs Ire 2nd T20: ಪಂದ್ಯದ ಪ್ರೆಡಿಕ್ಷನ್, ಡ್ರೀಂ ಟೀಮ್, ಫ್ಯಾಂಟೆಸಿ ಕ್ರಿಕೆಟ್ ಟಿಪ್ಸ್‌

ಸಂಜು ಸ್ಯಾಮ್ಸನ್ ಓಪನರ್ ಆಗಿ ಕಣಕ್ಕಿಳಿಯುತ್ತಾರ?

ಸಂಜು ಸ್ಯಾಮ್ಸನ್ ಓಪನರ್ ಆಗಿ ಕಣಕ್ಕಿಳಿಯುತ್ತಾರ?

ನಾಯಕ ಹಾರ್ದಿಕ್ ಪಾಂಡ್ಯ ಮುಂದಿರುವ ಪ್ರಮುಖ ಸವಾಲೆಂದರೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡುವುದಾಗಿದೆ. ಐಪಿಎಲ್ ಸರಣಿಯಲ್ಲಿ ಅಮೋಘ ಆಟವಾಡಿದ ಸಂಜು ಸ್ಯಾಮ್ಸನ್ ಗೆ ಯಾಕೆ ಅವಕಾಶ ನೀಡಲಿಲ್ಲ ಎಂಬ ಟೀಕೆಗಳು ದಟ್ಟವಾಗಿವೆ. ಹಾಗಾಗಿ ಸಂಜು ಸ್ಯಾಮ್ಸನ್ ಇಶಾನ್ ಕಿಶನ್ ಜೊತೆ ಓಪನಿಂಗ್ ಕಣಕ್ಕಿಳಿದರು ಆಶ್ಚರ್ಯವಿಲ್ಲ.

ಇನ್ನೊಂದೆಡೆ ಹಲವು ವರ್ಷಗಳಿಂದ ಐಪಿಎಲ್ ನಲ್ಲಿ ಆಡುತ್ತಿರುವ ರಾಹುಲ್ ತ್ರಿಪಾಠಿ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದಾಗ್ಯೂ ಇಷ್ಟು ದಿನ ಕಾದು ಪಂದ್ಯವೊಂದರಲ್ಲಿ ಅವಕಾಶ ನೀಡಬೇಕು ಎಂಬ ಅಭಿಪ್ರಾಯವೂ ಇದೆ. ಹಾಗಾಗಿ ಓಪನಿಂಗ್ ತ್ರಿಪಾಠಿ ಆಡಿಸಬೇಕೆಂಬ ಬೇಡಿಕೆಯು ಹೆಚ್ಚಾಗಿದೆ.

ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಟಿ20 ವಿಶ್ವಕಪ್ ಸರಣಿಗೆ ಪ್ರಾಥಮಿಕ ಆಯ್ಕೆದಾರರಾಗಿದ್ದಾರೆ. ಹಾಗಾಗಿ ಅವರಿಗೆ ಮುಂದುವರಿಯಲು ಅವಕಾಶ ನೀಡಬೇಕು. ಕಳೆದ ಪಂದ್ಯದಲ್ಲಿ ದೀಪಕ್ ಹೂಡಾ ಉತ್ತಮವಾಗಿ ಆಡಿದ್ದರಿಂದ ಅವರನ್ನು ತೆಗೆದುಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರಂತೆ.

ಬೇಡವಾಗಿದ್ದರೆ ತಂಡಕ್ಕೆ ಯಾಕೆ ಸೇರಿಸಿಕೊಳ್ತೀರಿ: ಕಿಡಿಕಾರಿದ ಆಕಾಶ್ ಚೋಪ್ರ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮಾರ್ಗನ್ | OneIndia Kannada
ಭಾರತ-ಐರ್ಲೆಂಡ್ ಸಂಭಾವ್ಯ ಪ್ಲೇಯಿಂಗ್ 11

ಭಾರತ-ಐರ್ಲೆಂಡ್ ಸಂಭಾವ್ಯ ಪ್ಲೇಯಿಂಗ್ 11

ಐರ್ಲೆಂಡ್:
ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕ್ರೇಗ್ ಯಂಗ್, ಆಂಡಿ ಮೆಕ್‌ಬ್ರೈನ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

ಭಾರತ:
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ , ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಾಹಲ್, ಅವೇಶ್ ಖಾನ್

Story first published: Tuesday, June 28, 2022, 16:36 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X