Hardik Pandya: ಬುಮ್ರಾ, ಭುವಿ ದಾಖಲೆಯ ಮೇಲೆ ಹಾರ್ದಿಕ್ ಕಣ್ಣು
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟಿ20 ಪಂದ್ಯ ಗ್ವಾಲಿಯರ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಅಂಗಳಕ್ಕೆ ಇಳಿಯಲಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ಹಾರ್ದಿಕ್, ಈಗ ಚುಟುಕು ಫಾರ್ಮೆಟ್‌ನಲ್ಲಿ ಬ್ಲ್ಯೂ ಜೆರ್ಸಿಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ 14 ವರ್ಷಗಳ ನಂತರ ಗ್ವಾಲಿಯರ್ ಆತಿಥ್ಯ ವಹಿಸಲಿದೆ. ಈ ಮೈದಾನದಲ್ಲಿ 2010ರಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದುತ್ತು. ಇದೇ ಅಂಗಳದಲ್ಲಿ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ್ದರು. ಈ ಮೂಲಕ 50 ಓವರ್‌ಗಳ ಕ್ರಿಕೆಟ್‌ನಲ್ಲಿ 200 ರನ್‌ಗಳನ್ನು ಮುಟ್ಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದರು. ಇದಾದ ಬಳಿಕ ಇಲ್ಲಿ ಪಂದ್ಯಗಳೇ ನಡೆದಿರಲಿಲ್ಲ. ಈಗ ಮತ್ತೊಂದು ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಇತಿಹಾಸ ಸೃಷ್ಟಿಸುವ ಅವಕಾಶ ಹೊಂದಿದ್ದಾರೆ. ಈ ಸರಣಿಯಲ್ಲಿ ಪಾಂಡ್ಯ ಅವರು ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಅಳಿಸಿ ಹಾಕುವ ಸುವರ್ಣ ಅವಕಾಶವನ್ನು ಹೊಂದಿದ್ದಾರೆ. ಹಾರ್ದಿಕ್ ಪಾಂಡ್ಯ 2 ತಿಂಗಳ ಬಳಿಕ ತಂಡಕ್ಕೆ ಮರಳುತ್ತಿದ್ದು, ದೊಡ್ಡ ದಾಖಲೆ ಬರೆಯುವ ಕನಸಿನಲ್ಲಿದ್ದಾರೆ.
ಹಾರ್ದಿಕ್‌ಗೆ ಸಾಧನೆಯ ಕನಸು
ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಥಿರ ಪ್ರದರ್ಶನ ನೀಡಿದರೆ, ಅವರು ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಹಿಂದಿಕ್ಕಬಹುದಾಗಿದೆ. ಹಾರ್ದಿಕ್ ಈ ವರೆಗೆ ಭಾರತದ ಪರ 102 ಟಿ20 ಪಂದ್ಯಗಳ 91 ಇನ್ನಿಂಗ್ಸ್‌ಗಳಲ್ಲಿ 86 ವಿಕೆಟ್‌ಗಳನ್ನು ಪಡೆದಿದ್ದಾರೆ. ಮತ್ತು ಈ ಸರಣಿಯಲ್ಲಿ ಐದು ವಿಕೆಟ್ ಪಡೆದಲ್ಲಿ ಹಾರ್ದಿಕ್ ಜಸ್ಪ್ರಿತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ದಾಖಲೆ ಅಳಿಸಿ ಹಾಕುತ್ತಾರೆ.
ಬುಮ್ರಾ, ಭುವಿ ದಾಖಲೆಯ ಮೇಲೆ ಹಾರ್ದಿಕ್ ಕಣ್ಣು
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಯಜುವೇಂದ್ರ ಚಹಾಲ್. ಇವರ ಬುಟ್ಟಿಯಲ್ಲಿ ಒಟ್ಟು 96 ವಿಕೆಟ್‌ಗಳಿವೆ. ಇವರ ನಂತರದ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಇದ್ದು, ಇವರು 90 ವಿಕೆಟ್ ಕಬಳಿಸಿದ್ದಾರೆ. ಈ ಸರಣಿಯಲ್ಲಿ ಜಸ್ಪ್ರಿತ್ ಬುಮ್ರಾ ಆಡುತ್ತಿಲ್ಲ. ಹೀಗಾಗಿ ಅವರ ವಿಕೆಟ್‌ಗಳ ಸಂಖ್ಯೆ ಸ್ಥಿರವಾಗಿರಲಿದೆ. ಜಸ್ಪ್ರಿತ್ ಬುಮ್ರಾ ಚುಟುಕು ಫಾರ್ಮೆಟ್‌ನಲ್ಲಿ 89 ವಿಕೆಟ್ ಪಡೆದಿದ್ದಾರೆ.

ಇನ್ನು ಟೀಮ್ ಇಂಡಿಯಾದ ಯುವ ಭರವಸೆಯ ಎಡಗೈ ಬೌಲರ್ ಅರ್ಷದೀಪ್ ಸಿಂಗ್ ಸಹ ಇತಿಹಾಸದ ಪುಟ ಸೇರಬಹುದು. ಇವರು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಈ ವರೆಗೆ 83 ವಿಕೆಟ್ ಪಡೆದಿದ್ದಾರೆ. ಈ ಸರಣಿಯಲ್ಲಿ ಅರ್ಷದೀಪ್ ಸಿಂಗ್ 8 ವಿಕೆಟ್ ಪಡೆದಲ್ಲಿ ಬುಮ್ರಾ ದಾಖಲೆಯನ್ನು ಅಳಿಸಿ ಹಾಕಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications