ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

5 ಕೋಟಿ ಮೌಲ್ಯದ ವಾಚ್ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ: ಸ್ಪಷ್ಟನೆ ನೀಡಿದ ಹಾರ್ದಿಕ್ ಪಾಂಡ್ಯ

Hardik Pandya confirms that all the news about his watch are fake

ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಬೇಡದ ಕಾರಣಕ್ಕೆ ಸುದ್ದಿಯಾಗಿದ್ದಾರೆ. ಟಿ20 ವಿಶ್ವಕಪ್ ಮುಗಿಸಿ ಭಾರತಕ್ಕೆ ಬಂದ ಹಾರ್ದಿಕ್ ಪಾಂಡ್ಯ ಅವರಲ್ಲಿದ್ದ ದುಬಾರಿ ಬೆಲೆಯ ವಾಚ್‌ಗಳಿಗೆ ಸೂಕ್ತವಾದ ದಾಖಲೆಗಳು ಇರಲಿಲ್ಲ ಎನ್ನಲಾಗಿದೆ. ಎರಡು ವಾಚ್‌ಗಳ ಬೆಲೆ ಸುಮಾರು 5 ಕೋಟಿಗಳಷ್ಟಿದ್ದು ಅದಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಾಂಡ್ಯ ತೋರಿಸಿದ ಬಿಲ್‌ ಹಾಗೂ ವಾಚ್‌ಗಳು ಹೊಂದಾಣಿಯಾಗದ ಕಾರಣದಿಂದಾಗಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಡ್ರೆಸ್ಸಿಂಗ್ ರೂಂನಲ್ಲಿ ಆಸ್ಟ್ರೇಲಿಯಾದ ಸಂಭ್ರಮಾಚರಣೆ ಅಸಹ್ಯ ಹುಟ್ಟಿಸುವಂತಿತ್ತು: ಶೋಯೆಬ್ ಅಕ್ತರ್ಡ್ರೆಸ್ಸಿಂಗ್ ರೂಂನಲ್ಲಿ ಆಸ್ಟ್ರೇಲಿಯಾದ ಸಂಭ್ರಮಾಚರಣೆ ಅಸಹ್ಯ ಹುಟ್ಟಿಸುವಂತಿತ್ತು: ಶೋಯೆಬ್ ಅಕ್ತರ್

ಆದರೆ ಈ ವಿಚಾರಕ್ಕೆ ಸಂಧಿಸಿದಂತೆ ಹಾರ್ದಿಕ್ ಪಾಂಡ್ಯ ಇಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಹಾರ್ದಿಕ್ ಪಾಂಡ್ಯ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು ಅಧಿಕಾರಿಗಳು ವಾಚ್‌ಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದಿದ್ದಾರೆ. ವಾಚ್‌ಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕೂಡ ನಾನಾಗಿಯೇ ಕಸ್ಟಮ್ಸ್ ಅಧಿಕಾರಿಗಳ ಮುಂದೆ ಇಟ್ಟಿದ್ದೇನೆ. ಎಲ್ಲಾ ತೆರಿಗೆಗಳನ್ನು ವಾಪತಿಸಲು ನಾನಾಗಿಯೇ ಮುಂದಾಗಿದ್ದೇನೆ ಎಂದಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ಬಿಂಬಿತವಾಗಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿಕೊಂಡಿದ್ದಾರೆ.

ಭಾರತ ವಿರುದ್ಧ ಟಿ20 ಹಾಗೂ ಟೆಸ್ಟ್ ಸರಣಿ ಆಡಲು ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್ಭಾರತ ವಿರುದ್ಧ ಟಿ20 ಹಾಗೂ ಟೆಸ್ಟ್ ಸರಣಿ ಆಡಲು ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್

ಇನ್ನು ಇದೇ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಬಳಿಯಿದ್ದ ವಾಚ್‌ಗಳ ಮೌಲ್ಯ ಸುಮಾರು 1.5 ಕೋಟಿ ರೂಪಾಯಿಯದ್ದಾಗಿದೆ. ಅದು ಸಮಾಜಿಕ ಜಾಲತಾಣಗಳಲ್ಲಿ ಬಿಂಬಿತವಾಗಿರುವಂತೆ 5 ಕೋಟಿ ಮೌಲ್ಯದ ವಾಚ್ ಅಲ್ಲ ಎಂದು ಕೂಡ ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ವಿವರಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆ

ಇನ್ನು ಇದೇ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ನಾನೋರ್ವ ದೇಶದ ಕಾನೂನನ್ನು ಗೌರವಿಸುವ ವ್ಯಕ್ತಿಯಾಗಿದ್ದು ಸರ್ಕಾರದ ಎಲ್ಲಾ ಏಜೆನ್ಸಿಗಳನ್ನು ಗೌರವಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಮುಂಬೈ ಕಸ್ಟ್ಮ್ಸ್ ಅಧಿಕಾರಿಗಳಿಂದ ತನಗೆ ಎಲ್ಲಾ ರೀತಿಯ ಸಹಕಾರ ದೊರೆತಿದ್ದು ಅವರಿಗೆ ನಾನು ನನ್ನ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ದಾಖಲೆಗಳನ್ನು ನಾನು ಪೂರೈಸಲಿದ್ದೇನೆ ಎಂದು ಕೂಡ ಹಾರ್ದಿಕ್ ಪಾಂಡ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ತೀಳಿಸಿದ್ದಾರೆ.

SMAT 2021: ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ: ಪಂದ್ಯದ ಆರಂಭ, ನೇರಪ್ರಸಾರದ ಮಾಹಿತಿSMAT 2021: ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ: ಪಂದ್ಯದ ಆರಂಭ, ನೇರಪ್ರಸಾರದ ಮಾಹಿತಿ

ಟಿ20 ವಿಶ್ವಕಪ್‌ನ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ ಸೋಮವಾರ ಮುಂಜಾನೆ ಭಾರತಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಹಾರ್ದಿಕ್ ವಾಚ್‌ಗೆ ಸಂಬಂಧಿಸಿದಂತೆ ಈ ಪ್ರಕರಣ ನಡೆದಿದೆ.

ಇನ್ನು ಕೆಲ ಸಮಯಗಳ ಹಿಂದೆ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಕೂಡ ಕಸ್ಟಮ್ಸ್ ಅಧಿಕಾರಿಗಳಿಮದ ವಿಚಾರಣೆಗೆ ಒಳಪಟ್ಟಿದ್ದರು. ಚಿನ್ನ ಹಾಗೂ ಇತರ ಕೆಲ ಪ್ರಮುಖ ವಿಚಾರಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಹೊಂದಿಲ್ಲದ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಮುಂಬೈ ಕಸ್ಟಮ್ಸ್ ಅಧಿಕಾರಿಗಳಿಂದ ವಿಚಾರಣೆಗೆ ಒಳಪಟ್ಟಿದ್ದರು.

David Warner ಅವರು RCB ಸೇರಿಕೊಂಡರೆ RCBಗೆ ಲಾಭ | Oneindia Kannada

Story first published: Tuesday, November 16, 2021, 14:42 [IST]
Other articles published on Nov 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X