ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿಲ್ಲ, ತಂಡದಿಂದಲೇ ಆಚೆ ಹಾಕಲಾಗಿದೆ; ಕಾರಣ ಆ ಓರ್ವ ಆಟಗಾರ!

Hardik Pandya dropped for New Zealand series because of his bad form: Reports

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ತಂಡದ ಕಳಪೆ ಪ್ರದರ್ಶನದ ಕಾರಣದಿಂದ ಸೆಮಿಫೈನಲ್ ಹಂತವನ್ನು ತಲುಪಲು ಆಗದೇ ಸೂಪರ್ 12 ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಹೌದು, ಟೂರ್ನಿಗೆ ಮುನ್ನ ನಡೆದ ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಟೂರ್ನಿ ಆರಂಭವಾದ ನಂತರ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ತನ್ನ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿತು.

ಹರ್ಷಲ್ ಪಟೇಲ್ ಸೆಲೆಕ್ಷನ್‌ಗೆ ಫುಲ್ ಖುಷಿಯಾದ ಸುನಿಲ್ ಗವಾಸ್ಕರ್: ಆತನ ವಯಸ್ಸಿನ ಚಿಂತೆ ಬೇಡ!ಹರ್ಷಲ್ ಪಟೇಲ್ ಸೆಲೆಕ್ಷನ್‌ಗೆ ಫುಲ್ ಖುಷಿಯಾದ ಸುನಿಲ್ ಗವಾಸ್ಕರ್: ಆತನ ವಯಸ್ಸಿನ ಚಿಂತೆ ಬೇಡ!

ಹೀಗೆ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳನ್ನು ಸೋತ ಟೀಂ ಇಂಡಿಯಾ ನಂತರ ನಡೆದ ಆಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾ ವಿರುದ್ಧದ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವನ್ನು ಕಂಡಿತು. ಆದರೂ ಸಹ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಲು ಬೇಕಾದ ಅಂಕಗಳನ್ನು ಪಡೆಯದ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಟ್ರೋಫಿ ಗೆಲ್ಲುವ ತಂಡಗಳಲ್ಲಿ ಟೀಮ್ ಇಂಡಿಯಾ ಪ್ರಮುಖ ತಂಡ ಎನಿಸಿಕೊಂಡಿತ್ತು. ಆದರೆ ಹುಟ್ಟುಹಾಕಿದ್ದ ಈ ನಿರೀಕ್ಷೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿರುವ ಟೀಮ್ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ತಂಡದ ಪ್ರಮುಖ ಆಟಗಾರರು ಸರಿಯಾದ ಪ್ರದರ್ಶನ ನೀಡದೇ ಇದ್ದದ್ದೇ ಕಾರಣ ಎನ್ನಬಹುದು.

ಟಿ20 ವಿಶ್ವಕಪ್: ಇಂಗ್ಲೆಂಡ್‌ಗೆ ಆಘಾತ ನೀಡಿದ ಮಿಚೆಲ್, ನೀಶಮ್: ಫೈನಲ್‌ಗೆ ಲಗ್ಗೆಯಿಟ್ಟ ನ್ಯೂಜಿಲೆಂಡ್ಟಿ20 ವಿಶ್ವಕಪ್: ಇಂಗ್ಲೆಂಡ್‌ಗೆ ಆಘಾತ ನೀಡಿದ ಮಿಚೆಲ್, ನೀಶಮ್: ಫೈನಲ್‌ಗೆ ಲಗ್ಗೆಯಿಟ್ಟ ನ್ಯೂಜಿಲೆಂಡ್

ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಕ್ಕೆ ಕೈಕೊಟ್ಟ ಪ್ರಮುಖ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಒಬ್ಬರು. ಆಲ್ ರೌಂಡರ್ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಟೀಮ್ ಇಂಡಿಯಾಕ್ಕೆ ಆಸರೆಯಾಗಬೇಕಿತ್ತು. ಆದರೆ ಪಂದ್ಯ ಗೆಲ್ಲುವಂತಹ ಪ್ರದರ್ಶನವನ್ನು ಹಾರ್ದಿಕ್ ಪಾಂಡ್ಯ ಬೌಲಿಂಗ್ ವಿಭಾಗದಲ್ಲಾಗಲಿ ಅಥವಾ ಬ್ಯಾಟಿಂಗ್ ವಿಭಾಗದಲ್ಲಿ ಆಗಲಿ ನೀಡುವಲ್ಲಿ ಯಶಸ್ವಿಯಾಗಲೇ ಇಲ್ಲ. ಹೀಗಾಗಿ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಹಾರ್ದಿಕ್ ಪಾಂಡ್ಯ ಕೂಡ ಕಾರಣವೆನ್ನಬಹುದು.

ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಟೀಮ್ ಇಂಡಿಯಾ ನವೆಂಬರ್‌ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಸದ್ಯ ತಯಾರಿಯನ್ನು ನಡೆಸಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ಈ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಮ್ ಇಂಡಿಯಾದ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಹೀಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಥಾನವನ್ನು ನೀಡದೇ ತಂಡದಿಂದ ಹೊರಗಿಡಲಾಗಿದೆ. ಮೇಲ್ನೋಟಕ್ಕೆ ಇದು ಗಾಯದಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರಿಗೆ ನೀಡಲಾಗಿರುವ ವಿಶ್ರಾಂತಿ ಎಂಬಂತೆ ತೋರುತ್ತಿದೆ. ಆದರೆ ಹಲವಾರು ಮಂದಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿಲ್ಲ ಬದಲಾಗಿ ತಂಡದಿಂದ ಹೊರಗಿಡಲಾಗಿದೆ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗೆ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೇ ಇರುವುದಕ್ಕೆ ಕಾರಣವೇನು ಎಂಬುದರ ಕುರಿತಾದ ಮಾಹಿತಿ ಮುಂದಿದೆ ಓದಿ..

ಸರಿಯಾದ ಆಲ್ ರೌಂಡರ್ ಹುಡುಕಾಟದಲ್ಲಿದೆ ಟೀಮ್ ಇಂಡಿಯಾ

ಸರಿಯಾದ ಆಲ್ ರೌಂಡರ್ ಹುಡುಕಾಟದಲ್ಲಿದೆ ಟೀಮ್ ಇಂಡಿಯಾ

ಟೀಮ್ ಇಂಡಿಯಾ ಹಿಂದಿನಿಂದಲೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವನ್ನು ಆಡಬಲ್ಲ ಮತ್ತು ಅಗತ್ಯವಿದ್ದಾಗ ಕೆಲ ಓವರ್ ಬೌಲಿಂಗ್ ಮಾಡಬಲ್ಲ ಆಲ್ ರೌಂಡರ್ ಹುಡುಕಾಟದಲ್ಲಿದೆ. ತಂಡದಲ್ಲಿ ಹಾರ್ದಿಕ್ ಪಾಂಡ್ಯ ಇದ್ದರೂ ಕೂಡ ಇತ್ತೀಚಿನ ಹಲವಾರು ಸರಣಿ ಮತ್ತು ಟೂರ್ನಿಗಳಲ್ಲಿ ಹಾರ್ದಿಕ್ ಪಾಂಡ್ಯಾ ಯಾವುದೇ ಓವರ್ ಬೌಲಿಂಗ್ ಕೂಡ ಮಾಡಿರಲಿಲ್ಲ. ಹೀಗಾಗಿ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಆಯ್ಕೆಯ ಕುರಿತು ಪ್ರಶ್ನೆಗಳು ಎದ್ದಿದ್ದವು. ಈ ರೀತಿ ಪ್ರಶ್ನೆಗಳು ಎದ್ದ ನಂತರ ಹಾರ್ದಿಕ್ ಪಾಂಡ್ಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದರೂ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಈ ಕಾರಣದಿಂದಾಗಿಯೇ ಹಾರ್ದಿಕ್ ಪಾಂಡ್ಯ ಜಾಗಕ್ಕೆ ನೂತನ ಆಟಗಾರರನ್ನು ಕರೆತರುವ ಉದ್ದೇಶದಿಂದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾದ ತಂಡದಲ್ಲಿ ಹಾರ್ದಿಕ್ ಪಾಂಡ್ಯರಿಗೆ ಸ್ಥಾನ ನೀಡದೇ ಹೊರಗಿಡಲಾಗಿದೆ.

ಪಾಂಡ್ಯ ಬದಲಾಗಿ ವೆಂಕಟೇಶ್ ಐಯ್ಯರ್ ಆಯ್ಕೆ

ಪಾಂಡ್ಯ ಬದಲಾಗಿ ವೆಂಕಟೇಶ್ ಐಯ್ಯರ್ ಆಯ್ಕೆ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಭರ್ಜರಿ ಪ್ರದರ್ಶನ ನೀಡುವುದರ ಮೂಲಕ ಎಲ್ಲರ ಗಮನವನ್ನು ಸೆಳೆದದ್ದು ವೆಂಕಟೇಶ್ ಐಯ್ಯರ್. ಹೌದು, ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಕ್ರಿಕೆಟ್ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದ ವೆಂಕಟೇಶ ಐಯ್ಯರ್ ಐಪಿಎಲ್ ಟೂರ್ನಿಯ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಹೀಗಾಗಿಯೇ ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ವೆಂಕಟೇಶ್ ಐಯ್ಯರ್ ಅವರಿಗೆ ಅವಕಾಶ ನೀಡಿದೆ ಎನ್ನಲಾಗುತ್ತಿದೆ.

ಮುಂದಿನ ಟಿ ಟ್ವೆಂಟಿ ವಿಶ್ವಕಪ್‌ಗಾಗಿ ಈಗಿನಿಂದಲೇ ಯೋಜನೆ ರೂಪಿಸುತ್ತಿದೆ ಟೀಮ್ ಇಂಡಿಯಾ

ಮುಂದಿನ ಟಿ ಟ್ವೆಂಟಿ ವಿಶ್ವಕಪ್‌ಗಾಗಿ ಈಗಿನಿಂದಲೇ ಯೋಜನೆ ರೂಪಿಸುತ್ತಿದೆ ಟೀಮ್ ಇಂಡಿಯಾ

2022ಕ್ಕೆ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಾಗಿ ಸಮತೋಲನವಾದ ಟೀಮ್ ಇಂಡಿಯಾವನ್ನು ಕಟ್ಟುವಲ್ಲಿ ಬಿಸಿಸಿಐ ನಿರತವಾಗಿದೆ. ಸದ್ಯ ತಂಡಕ್ಕೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ಆಲ್ ರೌಂಡರ್ ಆಟಗಾರನ ಸ್ಥಾನಕ್ಕಾಗಿ ಸರಿಯಾದ ಆಟಗಾರನಿಗಾಗಿ ಹುಡುಕಾಡುತ್ತಿದ್ದ ಬಿಸಿಸಿಐ ವೆಂಕಟೇಶ ಐಯ್ಯರ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಅವಕಾಶ ಪಡೆದಿರುವ ವೆಂಕಟೇಶ್ ಐಯ್ಯರ್ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೀಡಿದ್ದ ರೀತುಯ ಪ್ರದರ್ಶನವನ್ನು ನೀಡಿ, ಒತ್ತಡದ ಸಂದರ್ಭದಲ್ಲಿ ಉತ್ತಮ ಬೌಲಿಂಗ್ ಮಾಡಿದರೆ ಮುಂದಿನ ದಿನಗಳಲ್ಲಿ ವೆಂಕಟೇಶ್ ಐಯ್ಯರ್ ಟೀಮ್ ಇಂಡಿಯಾದ ಪ್ರಮುಖ ಸದಸ್ಯರಾಗಲಿದ್ದಾರೆ ಹಾಗೂ ಇದೇ ಸಮಯಕ್ಕೆ ಹಾರ್ದಿಕ್ ಪಾಂಡ್ಯ ಮುಂದಿನ ದಿನಗಳಲ್ಲಿಯೂ ಅವಕಾಶ ವಂಚಿತರಾಗುವುದಂತೂ ಖಚಿತ.

ಈತನ ಎಂಟ್ರಿಯಿಂದ ಟೀಂ ಇಂಡಿಯಾದಲ್ಲಿ ಹಾರ್ದಿಕ್ ಭವಿಷ್ಯ ಅತಂತ್ರ | Oneindia Kannada

Story first published: Thursday, November 11, 2021, 9:06 [IST]
Other articles published on Nov 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X