Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Hardik Pandya: ದೊಡ್ಡ ದಾಖಲೆಯ ಕನಸಿನಲ್ಲಿ ಹಾರ್ದಿಕ್ ಪಾಂಡ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಮುಗಿದಿದೆ. ಇನ್ನೇನಿದ್ದರೂ ಟಿ20 ಸರಣಿಗಳತ್ತ ನೆಟ್ಟಿದೆ. ಈ ಸರಣಿ ಡಿಸೆಂಬರ್ 9ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರು ಕಣಕ್ಕೆ ಇಳಿಯಲಿದ್ದಾರೆ. ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸಹ ಈ ಸರಣಿಯಲ್ಲಿ ಕಣಕ್ಕೆ ಇಳಿಯಲಿದ್ದು, ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.

ಏಷ್ಯಾಕಪ್‌ ವೇಳೆ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದಲೂ ಹೊರಗುಳಿದಿದ್ದರು. ಈಗ ಇವರ ಗಾಯ ಗುಣಮುಖವಾಗಿದೆ. ಅಲ್ಲದೆ ಇವರು ಈಗಾಗಲೇ ದೇಶೀಯ ಟೂರ್ನಿಯಲ್ಲಿ ಮಿಂಚಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶೇಷವಾಗಿದೆ. ಟಿ20 ಕ್ರಿಕೆಟ್‌ನಲ್ಲಿ ಈ ಹಿಂದೆ ಮೂರು ಆಟಗಾರರು ಮಾತ್ರ ಮಾಡಿದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಲಿದ್ದಾರೆ. ಆ ಸಾಧನೆ ಯಾವುದು ಎಂಬ ಬಗ್ಗೆ ವರದಿ ಇಲ್ಲಿದೆ.

Hardik Pandya Eyes Elite T20 Double 100 Wickets amp amp 2000 Runs vs South Africa

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ನೂರು ವಿಕೆಟ್‌ಗಳ ಸಾಧನೆಯನ್ನು ಮಾಡಬಹುದು. ಈ ಸಾಧನೆಯನ್ನು ಮಾಡಲು ಅವರಿಗೆ ಇನ್ನು 2 ವಿಕೆಟ್‌ ಅವಶ್ಯಕತೆ ಇದೆ. ಐದು ಪಂದ್ಯಗಳ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡುವ ವಿಶ್ವಾಸವನ್ನು ಹೊಂದಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ ಇವರು 140 ರನ್‌ ಬಾರಿಸಿದರೆ ಟಿ20 ಕ್ರಿಕೆಟ್‌ನಲ್ಲಿ 2 ಸಾವಿರ ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಮೂವರು ಆಟಗಾರರು ಮಾತ್ರ 100 ವಿಕೆಟ್‌ ಹಾಗೂ 2000 ರನ್‌ ಬಾರಿಸಿದ ಸಾಧನೆ ಮಾಡಿದ್ದಾರೆ.

ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಅಫ್ಘಾನಿಸ್ತಾನದ ಸ್ಟಾರ್ ಆಲ್‌ರೌಂಡರ್ ಮೊಹಮ್ಮದ್ ನಬಿ, ಜಿಂಬಾಬ್ವೆಯ ಸಿಕಂದರ್ ರಜಾ ಈ ಪಟ್ಟಿಯಲ್ಲಿ ಈಗಾಗಲೇ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಗೆ ಹಾರ್ದಿಕ್‌ ಪಾಂಡ್ಯ ಸೇರ್ಪಡೆಗೊಳ್ಳುವ ಕನಸು ಕಾಣುತ್ತಿದ್ದಾರೆ.

2 ವಿಕೆಟ್‌ ಹುಡುಕಾಟ

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೊದಲ ಟಿ20 ಪಂದ್ಯ ಕಟಕ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 2 ವಿಕೆಟ್‌ಗಳನ್ನು ಪಡೆದರೆ 100 ವಿಕೆಟ್‌ ಸಾಧನೆ ಮಾಡಬಹುದು. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್‌ ಸಿಂಗ್‌ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌. ಇವರ ಬುಟ್ಟಿಯಲ್ಲಿ 105 ವಿಕೆಟ್‌ಗಳು ಇವೆ.

ಹಾರ್ದಿಕ್ ಪಾಂಡ್ಯ ಸಾಧನೆ

32 ವರ್ಷದ ಹಾರ್ದಿಕ್ ಪಾಂಡ್ಯ, ಭಾರತದ ಅನುಭವಿ ಆಟಗಾರ. ಇವರು 2016ರಿಂದ ಟಿ20 ಕ್ರಿಕೆಟ್‌ ಆಡುತ್ತಿದ್ದಾರೆ. ಈ ವರೆಗೆ ಹಾರ್ದಿಕ್ 120 ಟಿ20 ಪಂದ್ಯಗಳನ್ನು ಆಡಿದ್ದು, 1860 ರನ್‌ ಸಿಡಿಸಿದ್ದಾರೆ. ಅಲ್ಲದೆ 98 ವಿಕೆಟ್‌ ಕಬಳಿಸಿದ್ದಾರೆ.

Story first published: Monday, December 8, 2025, 10:48 [IST]
Other articles published on Dec 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+