Hardik Pandya: ಫೈನಲ್‌ನಲ್ಲಿ 3 ಸಿಕ್ಸರ್ ಬಾರಿಸುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ದಾಖಲೆ
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯ ದುಬೈನಲ್ಲಿ ನಡೆಯಲಿದ್ದು, ರೋಚಕತೆ ಹೆಚ್ಚಿಸಿದೆ. ಭಾರತದ ಗೆಲುವಿನಲ್ಲಿ ಸ್ಟಾರ್ ಆಟಗಾರರು ಮಹತ್ವದ ಕಾಣಿಕೆ ನೀಡುತ್ತಾ ಇದ್ದಾರೆ. ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಕೆಎಲ್ ರಾಹುಲ್ ತಮ್ಮ ಪ್ರದರ್ಶನದಿಂದ ಸಾಕಷ್ಟು ಚರ್ಚೆಗೆ ಒಳಗಾಗಿದ್ದಾರೆ. ಇದೆ ಸಾಲಿನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಸಹ ಸೇರಿದ್ದಾರೆ.
ಹಾರ್ದಿಕ್ ಪಾಂಡ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಫಾರ್ಮ್‌ಗೆ ಮರಳಿದ್ದಾರೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಿಂದ ತಂಡಕ್ಕೆ ನೆರವಾಗುತ್ತಿದ್ದು, ತಂಡದ ಜಯದಲ್ಲಿ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ವಿಶೇಷ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಕಟ್ಟದೇ ಇದ್ರೂ ಸಹ ಮನಮೋಹಕ ಬ್ಯಾಟಿಂಗ್ ನಡೆಸಿದರು. ಇವರು 24 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸೇರಿದಂತೆ 28 ರನ್ ಸಿಡಿಸಿದರು. ಒಟ್ಟಾರೆ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡಿದ 9 ಪಂದ್ಯಗಳಲ್ಲಿ 186 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಬ್ಯಾಟ್‌ನಿಂದ 15 ಸಿಕ್ಸರ್‌ಗಳು ಮೂಡಿ ಬಂದಿವೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಯುನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ದಾಖಲೆಯ ಸಮಕ್ಕೆ ನಿಂತಿದ್ದರು. ಕ್ರಿಸ್ ಗೇಲ್ 17 ಪಂದ್ಯಗಳಲ್ಲಿ 15 ಸಿಕ್ಸರ್ ಸಿಡಿಸಿದ್ದಾರೆ.
ಗಂಗೂಲಿ ದಾಖಲೆ ಮೇಲೆ ಕಣ್ಣು
ಪ್ರಸಕ್ತ ಚಾಂಪಿಯನ್ಸ್ ಟ್ರೋಫಿ ಆರಂಭವಾಗುವುದಕ್ಕೂ ಮುಂಚೆ, ಹಾರ್ದಿಕ್ ಪಾಂಡ್ಯ ಅವರ ಬುಟ್ಟಿಯಲ್ಲಿ ಒಟ್ಟು 10 ಸಿಕ್ಸರ್‌ಗಳು ಇದ್ದವು. ಈಗ ಇವರ ಖಾತೆಗೆ ಐದು ಸಿಕ್ಸರ್‌ಗಳು ಸೇರಿವೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಇನ್ನೂ ಮೂರು ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಸೌರವ್ ಗಂಗೂಲಿ ದಾಖಲೆಯನ್ನು ಅಳಿಸಿ ಹಾಕಬಹುದು. ಕಿವೀಸ್ ವಿರುದ್ಧದ ಪಂದ್ಯದಲ್ಲಿ ಇವರಿಗೆ ಬ್ಯಾಟ್ ಮಾಡುವ ಅವಕಾಶ ಸಿಕ್ಕರೆ ಈ ಸಾಧನೆ ಮಾಡಬಹುದು. ಸೌರವ್ ಗಂಗೂಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಿದ 13 ಪಂದ್ಯಗಳಲ್ಲಿ 17 ಸಿಕ್ಸರ್ ಸಿಡಿಸಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುತ್ತಾರೆ. ಈ ದಾಖಲೆಯ ಮೇಲೆ ಹಾರ್ದಿಕ್ ಪಾಂಡ್ಯ ಕಣ್ಣು ನೆಟ್ಟಿದ್ಧಾರೆ.

ಭಾರತ ಚಾಂಪಿಯನ್ಸ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶವನ್ನು ಪಡೆದಿದೆ. ಲೀಗ್ ಹಂತದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದ್ದ ಭಾರತ, "ಎ" ಗುಂಪಿನಲ್ಲಿ ಅಗ್ರ ಸ್ಥಾನೀಯವಾಗಿ ಸೆಮಿಫೈನಲ್ ಹಂತವನ್ನು ಪ್ರವೇಶಿಸಿತ್ತು. ಉಪಾಂತ್ಯ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸಿತ್ತು. ಈಗ ಫೈನಲ್ ಪಂದ್ಯವನ್ನು ಎದುರು ನೋಡ್ತಾ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications