ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್ ಮಾಡೋದು ಯಾವಾಗ ಗೊತ್ತಾ?
ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ಐಪಿಎಲ್ ಆವೃತ್ತಿಯ ಮೂಲಕವೇ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆ ಕಾಣಿಸುತ್ತಿದೆ. ವಿಶ್ವಕಪ್ ಟೂರ್ನಿಯನ್ನು ಬಹುತೇಕ ಕಳೆದುಕೊಂಡ ಬಳಿಕ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಸಿದ್ಧವಾಗುವ ಸಾಧ್ಯತೆಯಿದ್ದರೂ ಅವರಿಗೆ ಮತ್ತಷ್ಟು ಕಾಲಾವಕಾಶ ನೀಡಿ ಚೇತರಿಕೆಗೆ ಹಾಗೂ ರಿಹ್ಯಾಬ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ.
ಅಫ್ಘಾನಿಸ್ತಾನ ತಂಡದ ವಿರುದ್ಧ ಭಾರತ ಟಿ20 ಸರಣಿಯನ್ನು ಆಡಿದ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಲಿದೆ. ಪ್ರಸ್ತುತ ಹಾರ್ದಿಕ್ ಪಾಂಡ್ಯ ಟೆಸ್ಟ್ ಯೋಜನೆಯಲ್ಲಿ ಇಲ್ಲದಿರುವ ಕಾರಣ ಈ ಸರಣಿಯ ಬಳಿಕ ನಡೆಯಲಿರುವ ಐಪಿಎಲ್ ಟೂರ್ನಿಯ ಮೂಲಕವೇ ಹಾರ್ದಿಕ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆಯಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ ಹಾರ್ದಿಕ್ ಪಾಂಡ್ಯ ಐಪಿಎಲ್‌ಗೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗಲಿದ್ದಾರೆ.

ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಐಪಿಎಲ್‌ನಲ್ಲಿ ಕಣಕ್ಕಿಳಿದು ಫಾರ್ಮ್ ಕಂಡುಕೊಳ್ಳುವ ಪ್ರಯತ್ನ ನಡೆಸಲಿದ್ದಾರೆ. ಟಿ20 ವಿಶ್ವಕಪ್ ಜೂನ್ 4ರಿಂದ ಯುಎಸ್‌ಎ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆಯೋಜನೆಯಾಗಲಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತ ಸರಣಿ
ಇನ್ನು ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಘಾತಕಾರೊಯಾಗಿ ಸೋಲು ಅನುಭವಿಸಿರುವ ಭಾರತ ಇದೀಗ ಆ ಸೋಲಿನಿಂದ ಹೊರಬಂದು ಮತ್ತೊಂದು ದ್ವಿಪಕ್ಷೀಯ ಸರಣಿಯಲ್ಲಿ ಭಾಗಿಯಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಗುರುವಾರದಿಂದ ಆರಂಭವಾಗಲಿದ್ದು ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ , ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್. (ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಅಂತಿಮ ಎರಡು T20 ಪಂದ್ಯಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications