Hardik Pandya ಗಾಯ ನಿಜವೋ ಅಥವಾ ಸುಳ್ಳೋ?
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆ ಎದುರಿಸುತ್ತಿದ್ದು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಆದರೆ ಇವರು ಸಾಮಾಜಿಕ ಜಾಲತಣದಲ್ಲಿ ಹಂಚಿಕೊಂಡಿರುವ ರಾತ್ರಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವ ದೃಶ್ಯ ನಿಜಕ್ಕೂ ಸಂಚಲನ ಮೂಡಿಸಿದೆ.
ಮುಂಬೈ ತಂಡದ ನಾಯಕ ಹಾರ್ದಿಕ್ ಕಳೆದ ಎರಡು ಪಂದ್ಯಗಳಿಂದ ಅಂಗಳಕ್ಕೆ ಇಳಿದಿಲ್ಲ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಮಹತ್ವದ ಪಂದ್ಯವೂ ಸಹ ಸೇರಿದೆ. ಈ ಪಂದ್ಯದಲ್ಲಿ ಸೋತ ಮುಂಬೈ ಇಂಡಿಯನ್ಸ್ ತನ್ನ ಪ್ಲೇ ಆಫ್ ಕನಸು ಕೈ ಬಿಟ್ಟಿದೆ. ಈಗ ಹಾರ್ದಿಕ್ ಪಾಂಡ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋ ಸಂಚಲನ ಮೂಡಿಸಿದೆ.

ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ಪಂದ್ಯಕ್ಕೂ ಮುನ್ನ ತಡ ರಾತ್ರಿ ನೆಟ್ಸ್‌ನಲ್ಲಿ ಬೆವರು ಹರಿಸಿದರು. ಈ ವೇಳೆ ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ಒಬ್ಬರೇ ಕಾಣಿಸಿಕೊಂಡರು. ಅಭ್ಯಾಸದ ವೇಳೆ ಹಾರ್ದಿಕ್ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ್ದು ಕಂಡು ಬಂದಿದೆ. ಆಲ್‌ರೌಂಡರ್ ವೇಗದ ಬೌಲರ್‌ಗಳನ್ನು ಉತ್ತಮವಾಗಿ ಎದುರಿಸಿದರು. ಅಲ್ಲದೆ ಮುಂದಿನ ಪಂದ್ಯಕ್ಕೆ ತಾನು ಸಜ್ಜು ಎಂಬುದನ್ನು ಸಾಬೀತು ಪಡಿಸಿದರು. ಹಾರ್ದಿಕ್ ಪಾಂಡ್ಯ ಅಭ್ಯಾಸದ ವೇಳೆ ವೇಗಿಗಳಿಗೆ ಬಾರಿಸಿದ ದೊಡ್ಡ ಹೊಡೆತಗಳು ಹಾಗೂ ಕ್ರೀಸ್‌ನ್ನು ಚೆನ್ನಾಗಿ ಬಳಸಿಕೊಂಡು ಬ್ಯಾಟ್ ಮಾಡಿದ ರೀತಿ ಅಭಿಮಾನಿಗಳಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಅಭ್ಯಾಸ
ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ಜೊತೆಗೆ ಧರ್ಮಶಾಲಾಕ್ಕೆ ಪ್ರಯಾಣ ಬೆಳೆಸಲಿಲ್ಲ. ಆದರೂ ಹಾರ್ದಿಕ್ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವುದು ಅಭಿಮಾನಿಗಳ ಮನಸ್ಸಿನಲ್ಲಿ ಪ್ರಶ್ನೆಗಳು ಮೂಡುವಂತೆ ಮಾಡಿವೆ. ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದಾಗಿ ಲೀಗ್ ಹಂತದ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಮುಂದಿನ ಪಂದ್ಯದಲ್ಲಿ ಹಾರ್ದಿಕ್ ಕಣಕ್ಕೆ ಇಳಿಯುತ್ತಾರಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಆರ್‌ಸಿಬಿ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್ ಕೋಚ್ ಮಹೇಲ ಜಯವರ್ಧನೆ ಸಹ ಹಾರ್ದಿಕ್ ಬೇಗ ಮೈದನಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದರು. ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆ ನಡುವೆಯೂ ಅಭ್ಯಾಸ ನಡೆಸಿದ್ದು ಏಕೆ? ಹಾರ್ದಿಕ್ ಪಾಂಡ್ಯ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಾರಾ? ಎಂಬ ಪ್ರಶ್ನೆಗಳು ಮೂಡಿವೆ. ಲೀಗ್ ಹಂತದ ಅಂತಿಮ ಘಟ್ಟದಲ್ಲಿರುವಾಗ ಹಾರ್ದಿಕ್ ಪಾಂಡ್ಯ ಕಣಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ.
ಮುಂಬೈ ಇಂಡಿಯನ್ಸ್ ಸಾಧನೆ
ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸಹ ಈ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಮುಂಬೈ ಇಂಡಿಯನ್ಸ್ ಆಡಿದ 11 ಪಂದ್ಯಗಳಲ್ಲಿ 3 ಜಯ, 8 ಸೋಲು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲಿ ಮೇ 14 ಪಂಜಾಬ್ ಕಿಂಗ್ಸ್ ವಿರುದ್ಧ, ಮೇ 20 ಕೆಕೆಆರ್ ವಿರುದ್ಧ, ಮೇ 24 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications