ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಮಾದರಿಗೆ ಕಮ್‌ಬ್ಯಾಕ್ ಮಾಡುವ ಬಗ್ಗೆ ಹಾರ್ದಿಕ್ ಪಾಂಡ್ಯ ಕುತೂಹಲಕಾರಿ ಪ್ರತಿಕ್ರಿಯೆ

ನ್ಯೂಜಿಲೆಂಡ್ ವಿರುದ್ಧದ ವೈಟ್‌ಬಾಲ್ ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಈಗ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗೆ ಸಿದ್ಧವಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ವಶಕ್ಕೆ ಪಡೆದುಕೊಂಡ ಭಾರತ ಏಕದಿನ ಸರಣಿಯನ್ನು 2-1 ಅಂತರದಿಂದ ವಶಕ್ಕೆ ತೆಗೆದುಕೊಂಡಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾದ ಆಟಗಾರ ಹಾರ್ದಿಕ್ ಪಾಂಡ್ಯ ತಮ್ಮ ಟೆಸ್ಟ್ ಕ್ರಿಕೆಟ್‌ನ ಭವಿಷ್ಯದ ಬಗ್ಗೆ ಮಾತನಾಡಿದ್ದು ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಕಾರಣ ಸುದೀರ್ಘ ಕಾಲ ವಿಶ್ರಾಂತಿ ಪಡೆದ ಬಳಿಕ ವೈಟ್‌ಬಾಲ್ ಕ್ರಿಕೆಟ್‌ಗೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್‌ನಿಂದ ಇನ್ನು ಕೂಡ ದೂರವೇ ಉಳಿದುಕೊಂಡಿದ್ದು ಯಾವಾಗ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಬಗ್ಗೆ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ತುಟಿಬಿಚ್ಚಿದ್ದಾರೆ.

ಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿ

ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುವ ಬಗ್ಗೆ ಹಾರ್ದಿಕ್ ಹೇಳಿದ್ದಿಷ್ಟು!

ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುವ ಬಗ್ಗೆ ಹಾರ್ದಿಕ್ ಹೇಳಿದ್ದಿಷ್ಟು!

ಟೆಸ್ಟ್ ಕ್ರಿಕೆಟ್‌ನಿಂದ ಸುದೀರ್ಘ ಕಾಲದಿಂದ ದೂರವುಳಿದಿರುವ ಹಾರ್ದಿಕ್ ಪಾಂಡ್ಯ ಸದ್ಯ ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದಾರೆ. ಫಿಟ್‌ನೆಸ್ ಕಾರಣದಿಂದಾಗಿ ಟೆಸ್ಟ್ ಮಾದರಿಗೆ ಇನ್ನೂ ಕಮ್‌ಬ್ಯಾಕ್ ಮಾಡಿಲ್ಲ. ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮುಕ್ತಾಯದ ಬಳಿಕ ಟೆಸ್ಟ್ ಮಾದರಿಗೆ ಕಮ್‌ಬ್ಯಾಕ್ ಬಗ್ಗೆ ಪ್ರಶ್ನೆ ಕೇಳಿದಾಗ ಹಾರ್ದಿಕ್ ಪಾಂಡ್ಯ "ಈಗ ನಾನು ವೈಟ್‌ಬಾಲ್ ಕ್ರಿಕೆಟ್‌ನ ಮೇಲೆ ಚಿತ್ತ ನೆಟ್ಟಿದ್ದು ಅದು ನನಗೆ ಮುಖ್ಯವಾಗಿದೆ. ಸೂಕ್ತ ಸಮಯ ಬಂದಾಗ ದೇಹ ಸಮರ್ಥವಾಗಿದ್ದರೆ ಖಂಡಿತಾ ಪ್ರಯತ್ನಿಸುವೆ" ಎಂದಿದ್ದಾರೆ ಹಾರ್ದಿಕ್ ಪಾಂಡ್ಯ.

ಟೆಸ್ಟ್ ಆಡುವ ಭರವಸೆ ವ್ಯಕ್ತಪಡಿಸಿದ ಹಾರ್ದಿಕ್

ಟೆಸ್ಟ್ ಆಡುವ ಭರವಸೆ ವ್ಯಕ್ತಪಡಿಸಿದ ಹಾರ್ದಿಕ್

ಮುಂದುವರಿದು ಮಾತನಾಡಿದ ಹಾರ್ದಿಕ್ ಪಾಂಡ್ಯ ಟಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. "ಟೆಸ್ಟ್ ಆಡಲು ಸೂಕ್ತ ಸಮಯ ಇದು ಎಂದು ಅನಿಸಿದಾಗ ನಾನು ತಂಡಕ್ಕೆ ಕಮ್‌ಬ್ಯಾಕ್ ಮಾಡುತ್ತೇನೆ" ಎಂದಿದ್ದಾರೆ ಹಾರ್ದಿಕ್. 2018ರ ಆಗಸ್ಟ್ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದು ಕೊನೆ, ಬಳಿಕ ಬಳಿಕ ಟೆಸ್ಟ್ ಮಾದರಿಯಲ್ಲಿ ಹಾರ್ದಿಕ್ ಪಾಂಡ್ಯ ಆಡಿಲ್ಲ. ಈ ಮೂಲಕ ಬಹುತೇಕ ನಾಲ್ಕುವರೆ ವರ್ಷಗಳಿಂದ ಹಾರ್ದಿಕ್ ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಕಣಕ್ಕಿಳಿದಿಲ್ಲ.

ವೈಟ್‌ಬಾಲ್ ಮಾದರಿಯಲ್ಲಿ ಮಿಂಚುತ್ತಿದ್ದಾರೆ ಪಾಂಡ್ಯ

ವೈಟ್‌ಬಾಲ್ ಮಾದರಿಯಲ್ಲಿ ಮಿಂಚುತ್ತಿದ್ದಾರೆ ಪಾಂಡ್ಯ

ಹಾರ್ದಿಕ್ ಪಾಂಡ್ಯ 2021ರ ಟಿ20 ವಿಶ್ವಕಪ್‌ನ ಬಳಿಕ ಫಿಟ್‌ನೆಸ್ ಕಾರಣದಿಂದ ತಂಡದಿಂದ ಸುದೀರ್ಘ ಕಾಲ ಹೊರಗುಳಿದು 2022ರ ಐಪಿಎಲ್ ವೇಳೆಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಬಳಿಕ ಹಾರ್ದಿಕ್ ಪಾಂಡ್ಯ ಅಮೋಘ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡು ಬಳಿಕ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿಯೂ ಯಶಸ್ವಿಯಾಗಿದ್ದರು. ಆಟಗಾರನಾಗಿ ಹಾಗೂ ನಾಯಕನಾಗಿ ಅದ್ಭುತ ಫಾರ್ಮ್‌ನಲ್ಲಿದ್ದ ಹಾರ್ದಿಕ್ ಪಾಂಡ್ಯ ಬಳಿಕ ಭಾರತ ವೈಟ್‌ಬಾಲ್ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದು ಬಳಿಕ ತಂಡವನ್ನು ಟಿ20 ಮಾದರಿಯಲ್ಲಿ ಮುನ್ನಡೆಸುವ ಅವಕಾಶ ಕೂಡ ಪಡೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಹಾರ್ದಿಕ್ ಆಟಗಾರನಾಗಿಯೂ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೆಸ್ಟ್ ಸರಣಿಗೆ ಸಜ್ಜಾಗಿದೆ ಭಾರತ

ಟೆಸ್ಟ್ ಸರಣಿಗೆ ಸಜ್ಜಾಗಿದೆ ಭಾರತ

ಇನ್ನು ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ವೈಟ್‌ಬಾಲ್ ಸರಣಿಯ ಬಳಿಕ ಟೆಸ್ಟ್ ಸರಣಿಗೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿ ಫೆಬ್ರವರಿ 9ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ನಾಗ್ಪುರದಲ್ಲಿ ಆಯೋಜನೆಯಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಸವಾಲನ್ನು ಎದುರಿಸಲು ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ಸಜ್ಜಾಗಿದ್ದು ಆಸಿಸ್ ಪಡೆ ಬೆಂಗಳುರಿನ ಹೊರವಲಯದಲ್ಲಿರುವ ಆಲೂರಿನಲ್ಲಿ ಸಿದ್ಧತೆ ನಡೆಸುತ್ತಿದೆ.

Story first published: Friday, February 3, 2023, 16:15 [IST]
Other articles published on Feb 3, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X