For Quick Alerts
ALLOW NOTIFICATIONS  
For Daily Alerts
 

IPL 2025 Purple Cap: ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ ಮೂವರು ಭಾರತೀಯರು

ಇಂಡಿಯನ್ ಪ್ರೀಮಿಯರ್ ಲೀಗ್ ರೋಚಕತೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಶ್ರೀಮಂತ ಲೀಗ್‌ನಲ್ಲಿ ಸ್ಟಾರ್ ಆಟಗಾರರು ತಮ್ಮ ಸ್ಥಿರ ಪ್ರದರ್ಶನ ಮುಂದುವರೆಸಿದ್ದು, ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ಈ ಬಾರಿಯ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ ಮೂವರು ಭಾರತೀಯ ಆಟಗಾರರು ಇರುವುದು ಖುಷಿಯ ವಿಚಾರ. ಹಾಗಿದ್ದರೆ ಈ ಬಾರಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಆಟಗಾರರು ಯಾರು? ಎಂಬ ಬಗ್ಗೆ ವರದಿ ಇಲ್ಲಿದೆ.

ಈ ಬಾರಿಯ ಐಪಿಎಲ್‌ನಲ್ಲಿ 18 ಪಂದ್ಯಗಳು ಮುಗಿದಿವೆ. ಈ ವೇಳೆ ಅನುಭವಿ ಹಾಗೂ ಯುವ ಆಟಗಾರರು ಸ್ಥಿರ ಪ್ರದರ್ಶನ ಮುಂದುವರೆಸಿದ್ದಾರೆ. ಈ ವೇಳೆ ಹಲವು ಆಟಗಾರರು ತಮ್ಮ ಸ್ಥಿರ ಪ್ರದರ್ಶನದಿಂದ ಗಮನ ಸೆಳೆದಿದ್ದಾರೆ. ಇನ್ನು ಹಲವರು ಭರವಸೆ ಮೂಡಿಸಿದ್ದಾರೆ. ಈ ಬಾರಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ ಎರಡು ಸ್ಥಾನ ವಿದೇಶಿ ಆಟಗಾರರಿಗೆ ಸಲ್ಲುತ್ತದೆ. ಒಬ್ಬರು ತಮ್ಮ ವೇಗದ ಬೌಲಿಂಗ್‌ನಿಂದ ಎದುರಾಳಿಗೆ ಕಾಡಿದರೆ, ಇನ್ನೊಬ್ಬರು ಸ್ಪಿನ್ ಪಿರ್ಕಿಯಿಂದ ಕಾಡಿದ್ದಾರೆ.

Hardik Pandya Khaleel Ahmed and Shardul Thakur in Purple Cap Race of IPL 2025

ಪ್ರಸಕ್ತ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಸಿಎಸ್‌ಕೆ ಸ್ಪಿನ್ ಬೌಲರ್‌ ನೂರ್ ಅಹ್ಮದ್‌ ಮೊದಲ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಆಡಿದ 4 ಪಂದ್ಯಗಳಲ್ಲಿ 10 ವಿಕೆಟ್‌ ಪಡೆದಿದ್ದಾರೆ. ಇನ್ನು ಈ ಪಟ್ಟಿಯ ಎರಡನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಿಚೆಲ್ ಸ್ಟಾರ್ಕ್ ಇದ್ದು, ಇವರು ಆಡಿದ 3 ಪಂದ್ಯಗಳಲ್ಲಿ 9 ವಿಕೆಟ್ ಕಬಳಿಸಿದ್ದಾರೆ.

ಹಾರ್ದಿಕ್ ಮಿಂಚು

ಪ್ರಸಕ್ತ ಐಪಿಎಲ್‌ನಲ್ಲಿ ತನ್ನ ಬೌಲಿಂಗ್‌ನಿಂದ ಮಿಂಚು ಹರಿಸುತ್ತಿರುವ ಬೌಲರ್‌ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ. ಇವರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಇವರಿಗೆ ಮೂರನೇ ಸ್ಥಾನ. ಇವರು ಆಡಿದ 3 ಪಂದ್ಯಗಳಲ್ಲಿ 9 ವಿಕೆಟ್‌ ಕಿತ್ತಿದ್ದಾರೆ.

Hardik Pandya Khaleel Ahmed and Shardul Thakur in Purple Cap Race of IPL 2025

ಖಲೀಲ್‌ ಅಹ್ಮದ್‌

ಸಿಎಸ್‌ಕೆ ತಂಡದ ವೇಗಿ ಖಲೀಲ್‌ ಅಹ್ಮದ್‌ ವಿಕೆಟ್‌ ಬೇಟೆ ನಡೆಸಿ ಭರವಸೆ ಮೂಡಿಸಿದ್ದಾರೆ. ಪವರ್ ಪ್ಲೇ ಹಾಗೂ ಡೆತ್‌ ಓವರ್‌ಗಳಲ್ಲಿ ಇವರು ಬಿಗುವಿನ ದಾಳಿ ನಡೆಸುತ್ತಾರೆ. ಇವರು ಪ್ರಸಕ್ತ ಐಪಿಎಲ್‌ನಲ್ಲಿ ಆಡಿದ 4 ಪಂದ್ಯಗಳಲ್ಲಿ 8 ವಿಕೆಟ್‌ ಉರುಳಿಸಿದ್ದಾರೆ.

ಶಾರ್ದೂಲ್‌ ಠಾಕೂರ್

ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೊನೆಯ ಕ್ಷಣದಲ್ಲಿ ಸೇರಿದ ಆಟಗಾರ ಶಾರ್ದೂಲ್ ಠಾಕೂರ್. ಐಪಿಎಲ್‌ ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಆಟಗಾರನನ್ನು ಲಕ್ನೋ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತು. ಈ ವೇಳೆ ಶಾರ್ದೂಲ್‌ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದ್ದಾರೆ. ಇವರು ಆಡಿದ 4 ಪಂದ್ಯಗಳ್ಲಿ 7 ವಿಕೆಟ್‌ ಕಬಳಿಸಿದ್ದು, ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಹೈದರಾಬಾದ್ ವಿರುದ್ಧ ಬಿಗುವಿನ ದಾಳಿ ನಡೆಸಿ 4 ವಿಕೆಟ್ ಕಬಳಿಸಿದ್ದರು.

Story first published: Sunday, April 6, 2025, 9:00 [IST]
Other articles published on Apr 6, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+