Hardik Pandya: ವಿಚ್ಛೇದನದ ನಂತರ ಮೊದಲ ಬಾರಿಗೆ ಮಗನೊಂದಿಗೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ
ಜಗತ್ತಿನಲ್ಲಿ ತಂದೆ ಮತ್ತು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಇಬ್ಬರ ಮುಂದೆ ಯಾವ ಪ್ರೀತಿಯೂ ಸರಿ ಸಮಾನವಲ್ಲ. ಇದಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ ಅವರು ತಮ್ಮ ಪುತ್ರ ಅಗಸ್ತ್ಯನನ್ನು ಭೇಟಿ ಮಾಡಿರುವ ವಿಡಿಯೋ ಸಾಕ್ಷಿಯಾಗಿದೆ.
ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾ ಅವರಿಂದ ವಿಚ್ಛೇದನ ಪಡೆದ ನಂತರ ಮೊದಲ ಬಾರಿಗೆ ತಮ್ಮ ಪುತ್ರ ಅಗಸ್ತ್ಯನನ್ನು ಭೇಟಿಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಪತ್ನಿ ನತಾಶಾ ಹಾಗೂ ಹಾರ್ದಿಕ್ ಪಾಂಡ್ಯ ವಿಚ್ಛೇದನ ಪಡೆದಿದ್ದು, ಈ ಬಗ್ಗೆ ಪಾಂಡ್ಯ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದರು.

ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಪುತ್ರನನ್ನು ಭೇಟಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಬಹುದಿನಗಳ ಬಳಿಕ ಮಗನನ್ನು ಎತ್ತಿಕೊಂಡ ಖುಷಿಯಲ್ಲಿ ಪಾಂಡ್ಯ ಕಳೆದು ಹೋಗಿದ್ದಾರೆ. ಪಾಂಡ್ಯ ತನ್ನ ಮಗನನ್ನು ನೋಡಿದ ಕೂಡಲೇ ತುಂಬಾ ಸಂತೋಷವಾಗಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು. ಈ ವೇಳೆ ಕೃನಾಲ್ ಪಾಂಡ್ಯ ಪುತ್ರ ಕೂಡ ಹಾರ್ದಿಕ್ ಜೊತೆಗೆ ಕಾಣಿಸಿಕೊಂಡಿದ್ದು, ಇಬ್ಬರು ಅವರು ತನ್ನ ಮಡಿಲಲ್ಲಿ ಎತ್ತಿಕೊಂಡು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.\
2020ರ ಮೇ ತಿಂಗಳಲ್ಲಿ ಹಾರ್ದಿಕ್ ಮತ್ತು ನತಾಶಾ ಇಬ್ಬರು ಮದುವೆ ಮಾಡಿಕೊಂಡಿದ್ದರು. ಇದಾದ ಬಳಿಕ ಈ ಸ್ಟಾರ್ ಜೋಡಿ ಎಲ್ಲರ ಗಮನ ಸೆಳೆದಿತ್ತು. ಆದರೆ ಹಾರ್ದಿಕ್ ಜೊತೆಗೆ ಸದಾ ಕಾಲ ಕಾಣಿಕೊಳ್ಳುತ್ತಿದ್ದ ನತಾಶಾ 2024ರ ಐಪಿಎಲ್ ಟೂರ್ನಿ ವೇಳೆ ಮರೆಯಾಗಿದ್ದರು. ಈ ಸಂದರ್ಭದಲ್ಲಿ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವ ಬಗ್ಗೆ ಚರ್ಚೆಗಳು ಚುರುವಾಗಿದ್ದವು.
ಕೊನೆಗೂ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲುವಿನ ನಂತರ ಹಾರ್ದಿಕ್ ತಮ್ಮ ವಿಚ್ಛೇದನ ಬಗ್ಗೆ ಖಚಿತ ಪಡಿಸಿದ್ದರು. ಇದಾದ ಬಳಿಕ ನತಾಶಾ ತಮ್ಮ ಮಗನ ಜೊತೆಗೆ ಸರ್ಬಿಯಾಕ್ಕೆ ಮರಳಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಮುಂಬೈನಲ್ಲಿ ಕಾಣಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ತಮ್ಮ ಮಾಜಿ ಹೆಂಡತಿ ಹಾಗು ಮಗನನ್ನು ಹಾರ್ದಿಕ್ ಪಾಂಡ್ಯ ಭೇಟಿಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಕೊನೆಯ ಬಾರಿಗೆ ಶ್ರೀಲಂಕಾ ಪ್ರವಾಸದಲ್ಲಿ ಕಾಣಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಕೆಲದಿನಗಳಿಂದ ಟೆಸ್ಟ್ ಕ್ರಿಕೆಟ್‌ಗೆ ಮರಳಲು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮೇಲೆ ಪಾಂಡ್ಯ ಕಣ್ಣಿಟ್ಟಿದ್ದಾರೆ. ಇದಕ್ಕೂ ಮುನ್ನ ರಣಜಿ ಟ್ರೋಫಿ ಆಡಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications