RCB ವಿರುದ್ಧದ ಪಂದ್ಯಕ್ಕಾಗಿ ಮುಂಬೈ ತಂಡದ ಜೊತೆ ಪ್ರಯಾಣ ಬೆಳೆಸದ ಹಾರ್ದಿಕ್
19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಮುಂಬೈ ಇಂಡಿಯನ್ಸ್, ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಮುಂಬೈ ಇಂಡಿಯನ್ಸ್ ತನ್ನ ಲೀಗ್ ಹಂತದ ಮುಂದಿನ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಮೇ 10 ರಂದು ರಾಯ್‌ಪುರದಲ್ಲಿ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿಯೊಂದು ಹೊರ ಬಿದ್ದಿದೆ.
ಮುಂಬೈ ಇಂಡಿಯನ್ಸ್ ತಂಡ ಮುಂದಿನ ಪಂದ್ಯವನ್ನು ಆಡಲು ರಾಯ್‌ಪುರ್‌ಕ್ಕೆ ಪ್ರಯಾಣವನ್ನು ಬೆಳೆಸಿದೆ. ಆದರೆ ಈ ವೇಳೆ ನಾಯಕ ಹಾರ್ದಿಕ್ ಪಾಂಡ್ಯ ತಂಡದೊಂದಿಗೆ ಪ್ರಯಾಣ ಮಾಡಿಲ್ಲ ಎಂಬ ಸುದ್ದಿಗಳು ಬರುತ್ತಿವೆ. ಈ ಹಿಂದಿನ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇವರ ಅಲಭ್ಯತೆಯ ಬಗ್ಗೆ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ಬಹಿರಂಗ ಪಡಿಸಿದ್ದರು. ಅಲ್ಲದೆ ಹಾರ್ದಿಕ್ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು. ಸದ್ಯ ಹಾರ್ದಿಕ್ ಮುಂಬೈನಲ್ಲಿಯೇ ಉಳಿದುಕೊಂಡಿದ್ದು, ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ.

ಹಾರ್ದಿಕ್ ಅವರು ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಬಗ್ಗೆ ಫ್ರಾಂಚೈಸಿಯು ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ತಂಡಕ್ಕೆ ಇವರ ಅನುಪಸ್ಥಿಗೆ ಬಹುವಾಗಿ ಕಾಡಲಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಕಣಕ್ಕೆ ಇಳಿಯುವುದು ಅನುಮಾನ ಎಂದು ಹೇಳಲಾಗುತ್ತದೆ.
ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮುಂಬೈ ತಂಡ ಭರ್ಜರಿ ಪ್ರದರ್ಶನ ನೀಡಿ ಎಲ್‌ಎಸ್‌ಜಿ ತಂಡವನ್ನು ಮಣಿಸಿತ್ತು.

ಹಾರ್ದಿಕ್ ಪಾಂಡ್ಯ ಅವರು ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದರು. ಹಾರ್ದಿಕ್ ಗಾಯದಿಂದ ಇನ್ನು ಎಷ್ಟು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಸಾಧನೆ
ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 3 ಜಯ, 7 ಸೋಲು ಕಂಡಿದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶಿಸಲು ಮುಂದಿರುವ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎಲ್ಲಿ ಇದೆ. ಮುಂಬೈ ಇಂಡಿಯನ್ಸ್ ಮೇ 10 ರಂದು ಆರ್‌ಸಿಬಿ ವಿರುದ್ಧ, ಮೇ 14 ರಂದು ಪಂಜಾಬ್ ಕಿಂಗ್ಸ್ ವಿರುದ್ಧ, ಮೇ 20 ರಂದು ಕೆಕೆಅರ್ ವಿರುದ್ಧ, ಮೇ 24 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಾದಾಟ ನಡೆಸ ಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications