Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇದೇ ಕಾರಣಕ್ಕೆ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಮುಂಬೈನಿಂದ ಬೆಂಗಳೂರಿಗೆ ಶಿಫ್ಟ್‌

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿ ಜೀವನದಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಹಾರ್ದಿಕ್ ಮಂಬೈನಲ್ಲಿ ವಾಸವಾಗಿದ್ದರು. ಆದರೆ ಈಗ ಅವರು ವಾಣಿಜ್ಯ ನಗರಿಯನ್ನು ಬಿಟ್ಟು ಬೆಂಗಳೂರಿಗೆ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ಈ ದೊಡ್ಡ ನಿರ್ಧಾರದ ಹಿಂದಿನ ಕಾರಣ ಏನು ಎಂಬ ಬಗ್ಗೆ ವರದಿ ಇಲ್ಲಿದೆ.

ಹಾರ್ದಿಕ್ ಪಾಂಡ್ಯ ತಮ್ಮ ಕ್ರಿಕೆಟ್‌ ಜೀವನವನ್ನು ವೃದ್ಧಿಸಿಕೊಳ್ಳಲು ಮುಂಬೈನಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಅವರು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ನಲ್ಲಿ ತರಬೇತಿ ಪಡೆಯಲಿದ್ದಾರೆ. ಈ ಕೇಂದ್ರವನ್ನು ತಮ್ಮ ಶಾಶ್ವತ ನೆಲೆಯನ್ನಾಗಿಸಲು ಬೆಂಗಳೂರನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಳ್ಳುವ ನಿರ್ಧಾರವನ್ನು ಪಾಂಡ್ಯ ಮಾಡಿದ್ದಾರೆ. ವೃತ್ತಿ ಜೀವನದ ಉದ್ದೇಶದಿಂದ ಇಂತಹ ನಿರ್ಧಾರ ತೆಗೆದುಕೊಂಡ ಮೊದಲ ಭಾರತೀಯ ಕ್ರಿಕೆಟಿಗರಾಗಿದ್ದಾರೆ.

Hardik Pandya

ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ಬೆಂಗಳೂರಿನ ಹೊರವಲಯದಲ್ಲಿದೆ. ಸಿಒಇ ಬಳಿ ಹಾರ್ದಿಕ್ ಪಾಂಡ್ಯ ಮನೆಯನ್ನು ಬಾಡಿಗೆಗೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇವರು ಇಲ್ಲಿ ಫಿಟ್‌ನೆಸ್ ಮತ್ತು ಆಟದ ಬಗ್ಗೆ ಕೆಲಸ ಮಾಡಲಿದ್ದಾರೆ.

ಫಿಟ್ನೆಸ್‌ ಕಡೆಗೆ ಹಾರ್ದಿಕ್ ಗಮನ

ಹಾರ್ದಿಕ್ ಪಾಂಡ್ಯ ಇನ್ನೂ 5 ರಿಂದ 6 ವರ್ಷಗಳ ಕಾಲ ಕ್ರಿಕೆಟ್ ಆಡಲು ಬಯಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಸಿಒಇ ಜೊತೆಗೆ, ಅವರ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲು ಅವರಿಗೆ ವೈಯಕ್ತಿಕ ತರಬೇತುದಾರರಿರುತ್ತಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಹಾರ್ದಿಕ್ ಅವರಿಗೆ ಬೌಲಿಂಗ್ ಮಾಡುವ ಬೌಲರ್‌ಗಳಿಗೆ ಹಣ ನೀಡುತ್ತಾರೆ. ಆಟಗಾರರು ಸಾಮಾನ್ಯವಾಗಿ ಗಾಯದಿಂದ ಚೇತರಿಸಿಕೊಂಡ ಬಳಿಕ ಪುನರ್ವಸತಿ ಹಾಗೂ ಫಿಟ್‌ನೆಸ್ ಪರೀಕ್ಷೆಗಳಿಗೆ ಮಾತ್ರ ಇಲ್ಲಿಗೆ ಬರುತ್ತಾರೆ.

Hardik Pandya

ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್‌ ಪ್ರವಾಸಕ್ಕೆ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇವರು ಫಿಟ್ನೆಸ್‌ ಸಮಸ್ಯೆಯಿಂದಾಗಿ ಇಂಗ್ಲೆಂಡ್‌ ಪ್ರವಾಸದಿಂದ ಹೊರ ನಡೆದಿದ್ದಾರೆ. ಇವರನ್ನು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಫಿಟ್ ಆಗದೆ ಇರುವ ಕಾರಣ ಸರಣಿಯಿಂದ ಹೊರ ನಡೆದರು. ಹಾರ್ದಿಕ್ ಪಾಂಡ್ಯ ಐಪಿಎಲ್‌ ವೇಳೆ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರು ಮುಂಬೈ ಇಂಡಿಯನ್ಸ್ ತಂಡದ ಪರ ಕೊನೆಯ ಕೆಲವು ಪಂದ್ಯಗಳಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಹಾರ್ದಿಕ್ ತಮ್ಮ ಫಿಟ್ನೆಸ್‌ ಮೇಲೆ ಕೆಲಸ ಮಾಡಿ ತಂಡಕ್ಕೆ ಆಯ್ಕೆ ಆಗುವ ಕನಸು ಕಾಣುತ್ತಿದ್ದಾರೆ. ಅವರು ಪ್ರಸ್ತುತ ವಿರಾಮದಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ತರಬೇತಿಯನ್ನು ಆರಂಭಿಸಲಿದ್ದಾರೆ. ಇವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರವೂ, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ತಂಡಕ್ಕೆ ಆಯ್ಕೆ ಆಗುತ್ತಾರಾ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

Story first published: Wednesday, July 1, 2026, 9:19 [IST]
Other articles published on Jul 1, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+