Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Hardik Pandya: ಟೆಸ್ಟ್ ಕ್ರಿಕೆಟ್‌ಗೆ ಮರಳಲು ಹಾರ್ದಿಕ್ ಪಾಂಡ್ಯ ರೆಡಿ!

ಶ್ರೀಲಂಕಾ ಪ್ರವಾಸದ ನಂತರ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ರಜಾ ದಿನಗಳನ್ನು ಆನಂದಿಸುತ್ತಿದ್ದಾರೆ. ಜೊತೆಗೆ ಅವರು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಅವರ ಅಭ್ಯಾಸದ ಕೆಲವು ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ಸದ್ಯ ತಂಡದ ಆಟಗಾರರು ಸೆಪ್ಟೆಂಬರ್ 12ರಿಂದ 18 ರವರೆಗೆ 5 ದಿನಗಳ ಚೆನ್ನೈ ಶಿಬಿರದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಎರಡನೇ ಟೆಸ್ಟ್ ಪಂದ್ಯಕ್ಕೆ ಇನ್ನೂ ಟೀಮ್ ಇಂಡಿಯಾ ಪ್ರಕಟಿಸಿಲ್ಲ. ಇದೇ ವೇಳೆ ಹಾರ್ದಿಕ್ ಪಾಂಡ್ಯ ದೊಡ್ಡ ಸುಳಿವು ನೀಡಿದ್ದಾರೆ.

Hardik Pandya ready to return Test cricket

ಪ್ರಸುತ್ತ ನಡೆಯುತ್ತಿರುವ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಆದರೂ ರೆಡ್ ಬಾಲ್‌ನೊಂದಿಗೆ ಅಭ್ಯಾಸ ಮಾಡುತ್ತಿರುವುದು ಅವರ ವೀಡಿಯೊ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಅವರು ಟೆಸ್ಟ್ ಕ್ರಿಕೆಟ್‌ಗೆ ಮರಳುವ ಬಗ್ಗೆ ಕ್ರಿಕೆಟ್‌ ಗಲ್ಲಿಯಲ್ಲಿ ಚರ್ಚೆಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿಯೂ ನೆಟ್ಟಿಗರು ಮತ್ತು ಪಾಂಡ್ಯ ಅಭಿಮಾನಿಗಳು ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಹಾರ್ದಿಕ್ ಟೀಮ್ ಇಂಡಿಯಾ ಸೇರಿಕೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಇದೀಗ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್ ಅನ್ನು ಆಳಲು ಸಿದ್ಧರಾಗಿದ್ದಾರೆ ಎಂದು ಮತ್ತೊರ್ವ ಬರೆದುಕೊಂಡಿರುವುದು ಎಲ್ಲರ ಹುಬ್ಬೇರಿಸಿದೆ.

ಬೌಲಿಂಗ್ ಮಾಡುತ್ತಿರುವ ವಿಡಿಯೋವನ್ನು ಹಾರ್ದಿಕ್ ತಮ್ಮ ಅಧಿಕೃತ ಖಾತೆಯಿಂದ ಹಂಚಿಕೊಂಡಿಲ್ಲ. ಇದಕ್ಕೂ ಮೊದಲು, ಸೆಪ್ಟೆಂಬರ್ 10 ರಂದು ಅವರು ಅಭ್ಯಾಸದ ಸಮಯದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಬ್ಯಾಟಿಂಗ್ ಅಭ್ಯಾಸವನ್ನು ನಡೆಸುತ್ತಿದ್ದರು.

ಹಾರ್ದಿಕ್ ಪಾಂಡ್ಯ ವೃತ್ತಿಜೀವನ

ಪಾಂಡ್ಯ ಕೊನೆಯದಾಗಿ 2018ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ ಆಡಿದ್ದರು. ಅಂದಿನಿಂದ ಪಾಂಡ್ಯ 6 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡಿಲ್ಲ. ಪಾಂಡ್ಯ ಅವರ ಟೆಸ್ಟ್ ಕ್ರಿಕೆಟ್ ಅಂಕಿ-ಅಂಶಗಳ ಕೂಡ ಉತ್ತಮವಾಗಿವೆ. ಅವರು 11 ಟೆಸ್ಟ್ ಪಂದ್ಯಗಳ 18 ಇನ್ನಿಂಗ್ಸ್‌ಗಳಲ್ಲಿ 532 ರನ್ ಮತ್ತು 17 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಒಂದು ಶತಕ ಕೂಡ ಬಾರಿಸಿದ್ದು, 4 ಅರ್ಧ ಶತಕಗಳನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.

Story first published: Friday, September 13, 2024, 8:16 [IST]
Other articles published on Sep 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+