ರಜೆಯ ಮಜೆಯನ್ನು ಸವಿಯುತ್ತಿರುವ ಹಾರ್ದಿಕ್ ಪಾಂಡ್ಯ: ಫೋಟೋ ವೈರಲ್
ಟೀಮ್ ಇಂಡಿಯಾದ ಹಿರಿಯ ಆಟಗಾರರು ಸದ್ಯ ರಜೆಯ ಮಜೆಯಲ್ಲಿದ್ದಾರೆ. ಯುವ ಆಟಗಾರರು ದೇಶೀಯ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರಿತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಈ ಟೂರ್ನಿಯಿಂದ ರೆಸ್ಟ್ ಪಡೆದಿದ್ದಾರೆ. ಈ ವೇಳೆ ಹಾರ್ದಿಕ್ ಪಾಂಡ್ಯ ರಜೆಯ ಮಜೆಯನ್ನು ಸವಿಯುತ್ತಿರುವ ಫೋಟೋ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿತ್ತು. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಿ20 ಸರಣಿಯನ್ನು ಗೆದ್ದರೆ, ಏಕದಿನ ಸರಣಿಯನ್ನು ಕೈ ಚೆಲ್ಲಿತ್ತು. ಈಗ ಟೀಮ್ ಇಂಡಿಯಾ ಈ ವರ್ಷ ಪೂರ್ತಿ ಟೆಸ್ಟ್ ಹಾಗೂ ಟಿ20 ಪಂದ್ಯಗಳನ್ನೇ ಆಡುತ್ತಿದೆ. ಈಗ ಮುಂದಿನ ತಿಂಗಳು ಭಾರತದಲ್ಲಿ ಬಾಂಗ್ಲಾ ವಿರುದ್ಧ ಟೆಸ್ಟ್ ಪಂದ್ಯಗಳು ಆರಂಭವಾಗಲಿವೆ. ಅಲ್ಲಿಯ ವರೆಗೂ ಹಿರಿಯ ಆಟಗಾರರು ವಿಶ್ರಾಂತಿಯಲ್ಲಿರುತ್ತಾರೆ.

ರಜೆಯನ್ನು ಎಂಜಾಯ್ ಮಾಡ್ತಿರುವ ಹಾರ್ದಿಕ್
ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ರಜೆಯ ಮಜೆಯನ್ನು ಹಾರ್ದಿಕ್ ಸಖತ್ ಎಂಜಾಯ್ ಮಾಡ್ತಾ ಇದ್ದಾರೆ. ಇದೇ ವೇಳೆ ಸುಂದರ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾಮಾಜಿಕ ತಾಣದಲ್ಲಿ ಸದ್ಯ ಹಾರ್ದಿಕ್ ಪಾಂಡ್ಯ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಹಾರ್ದಿಕ್ ಪಾಂಡ್ಯ ನೀರಿನಲ್ಲಿ ಸ್ನಾನ ಮಾಡುತ್ತಿರುವುದು ಕಾಣುತ್ತದೆ.
ಹಾರ್ದಿಕ್ ಪಾಂಡ್ಯ ತಮ್ಮ ರಜೆಯ ದಿನಗಳನ್ನು ಸ್ಮರಣೀಯವಾಗಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿವೆ. ಹಾರ್ದಿಕ್ ಪಾಂಡ್ಯ ಅವರ ಈ ಫೋಟೋಗಳಿಗೆ ಅಭಿಮಾನಿಗಳು ಸಹ ಕಮೆಂಟ್ ಮಾಡುತ್ತಿದ್ದಾರೆ.

ಬಾಂಗ್ಲಾ ವಿರುದ್ಧ 3 ಟಿ20 ಪಂದ್ಯ
ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡ ಸೇರುವುದು ಡೌಟ್ ಎನ್ನಲಾಗುತ್ತಿದೆ. ಆದರೆ ಅವರು ಟಿ20 ಸರಣಿಗೆ ತಂಡವನ್ನು ಸೇರಿಕೊಳ್ಳಬಹುದು. ಭಾರತ ಮತ್ತು ಬಾಂಗ್ಲಾದೇಶ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಈ ಟಿ20 ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್‌ನಲ್ಲಿ ನಡೆಯಲಿದ್ದು, ಎರಡನೇ ಟಿ20 ಅಕ್ಟೋಬರ್ 9 ರಂದು ಹೈದರಾಬಾದ್‌ನಲ್ಲಿ, ಮೂರನೇ ಟಿ20 ಪಂದ್ಯ ಹೈದರಾಬಾದ್‌ನಲ್ಲಿ ಅಕ್ಟೋಬರ್ 12 ರಂದು ನಡೆಯಲಿದೆ.
ಸೆಪ್ಟೆಂಬರ್ 19 ರಿಂದ ಟೆಸ್ಟ್ ಸರಣಿ
ಸದ್ಯ ಪಾಕಿಸ್ತಾನ ಪ್ರವಾಸದಲ್ಲಿರುವ ಬಾಂಗ್ಲಾದೇಶ ಈ ವೇಳೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಬಾಂಗ್ಲಾ ಭಾರತಕ್ಕೆ ಪ್ರವಾಸ ಬೆಳೆಸಲಿದೆ. ಭಾರತದಲ್ಲಿ ಬಾಂಗ್ಲಾದೇಶ ಟಿ20 ಪಂದ್ಯಗಳಿಗೂ ಮುನ್ನ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದರ ನಂತರ ಎರಡನೇ ಟೆಸ್ಟ್ ಸೆಪ್ಟೆಂಬರ್ 27 ರಿಂದ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications